ಹೊಸಪೇಟೆ: ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿದಿದ್ದು, ಈರುಳ್ಳಿ ಬೆಳೆದ ರೈತರು ವಿಷ ಕುಡಿಯುವ ಹಾಗಾಗಿದೆ. ಹಾಗಾಗಿ ಬೆಲೆ ವ್ಯತ್ಯಾಸ ಪಾವತಿ ಮೊತ್ತವನ್ನು ಶೀಘ್ರದಲ್ಲೇ ಜಾರಿಗೆ ತರಬೇಕು ಎಂದು ಈರುಳ್ಳಿ ಬೆಳೆಗಾರರರು ಬಳ್ಳಾರಿ, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಸಲ್ಲಿಸಿದರು.
ಇದಕ್ಕೆ ಸ್ಪಂದಿಸಿದ ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಬಂಧಿಸಿದ ಸಚಿವರ ಜೊತೆಗೆ ಚರ್ಚಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
ಈರುಳ್ಳಿ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಎನ್.ಎಂ. ಸಿದ್ದೇಶ್ವರ ಉತ್ತಂಗಿ, ವಿಜಯನಗರ ಜಿಲ್ಲಾಧ್ಯಕ್ಷ ಮಂಜುನಾಥ ಕೋಚಾಲಿ, ಬಾಗಲಕೋಟೆ ಜಿಲ್ಲಾಧ್ಯಕ್ಷ ಲೋಕಣ್ಣ, ಹನುಮಂತಪ್ಪ, ನಾಗರಾಜ ಮತ್ತಿತರರಿದ್ದರು.