ಕೋಗಿಲು ಕ್ರಾಸ್‌ ಸಂತ್ರಸ್ತರಲ್ಲಿ 26 ಮಂದಿ ಬಳಿಯಷ್ಟೇ ಸೂಕ್ತ ದಾಖಲೆ

KannadaprabhaNewsNetwork |  
Published : Jan 14, 2026, 03:00 AM IST
ಕೋಗಿಲು ಬಡಾವಣೆ | Kannada Prabha

ಸಾರಾಂಶ

ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ್ದರಿಂದ ಸಂತ್ರಸ್ತರಾಗಿರುವವರ ದಾಖಲೆಗಳನ್ನು ಪರಿಶೀಲಿಸುವ ಕಾರ್ಯವನ್ನು ಜಿಲ್ಲಾಡಳಿತ ಪೂರ್ಣಗೊಳಿಸಿದ್ದು, ಕೇವಲ 26 ಜನ ಮಾತ್ರ ಸೂಕ್ತ ದಾಖಲೆಗಳನ್ನು ಹೊಂದಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ್ದರಿಂದ ಸಂತ್ರಸ್ತರಾಗಿರುವವರ ದಾಖಲೆಗಳನ್ನು ಪರಿಶೀಲಿಸುವ ಕಾರ್ಯವನ್ನು ಜಿಲ್ಲಾಡಳಿತ ಪೂರ್ಣಗೊಳಿಸಿದ್ದು, ಕೇವಲ 26 ಜನ ಮಾತ್ರ ಸೂಕ್ತ ದಾಖಲೆಗಳನ್ನು ಹೊಂದಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.

ಒಟ್ಟು 168 ಮನೆಗಳನ್ನು ತೆರವುಗೊಳಿಸಲಾಗಿತ್ತು. ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಒತ್ತಡ ಬಂದ ಕಾರಣ, ಅರ್ಹ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರ ತೀಮಾನ ತೆಗೆದುಕೊಂಡಿದೆ. ಅದಕ್ಕಾಗಿ ಜಿಲ್ಲಾಡಳಿತದಿಂದ ಅರ್ಹರ ದಾಖಲೆಗಳನ್ನು ಪರಿಶೀಲಿಸಲು ಸೂಚನೆ ನೀಡಿತ್ತು. ಅದರಂತೆ ಪರಿಶೀಲನೆ ನಡೆಸಿ, ರಾಜೀವ್ ಗಾಂಧಿ ವಸತಿ ನಿಗಮನಕ್ಕೆ ವರದಿ ಸಲ್ಲಿಸಲಾಗಿದೆ.

ಅರ್ಹರನ್ನು ಗುರುತಿಸಿ ಮನೆಗಳನ್ನು ನೀಡುವುದು ನಿಗಮಕ್ಕೆ ಸಂಬಂಧಿಸಿದ ವಿಚಾರ. ಸರ್ಕಾರದೊಂದಿಗೆ ಚರ್ಚಿಸಿ ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಕ್ರಮವಾಗಿ ಮನೆ ಕಟ್ಟಿಸಿಕೊಂಡವರಲ್ಲಿ ಬಾಂಗ್ಲಾದೇಶಿಯರು ಇರಬಹುದು ಎನ್ನುವ ಆರೋಪಗಳು ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಆ ಕುರಿತಾಗಿ ಪೊಲೀಸ್ ಇಲಾಖೆ ಮೂಲಕ ಪರಿಶೀಲನೆ ನಡೆಸಲಾಗಿದೆ. ಆ ವರದಿಯನ್ನು ಕೂಡ ನಿಗಮಕ್ಕೆ ಜಿಲ್ಲಾಡಳಿತ ಸಲ್ಲಿಸಿದೆ. ಅದರಲ್ಲಿ ಬಾಂಗ್ಲಾದೇಶಿ ಪ್ರಜೆಗಳು ಕಂಡು ಬಂದಿಲ್ಲ ಎಂದು ತಿಳಿದು ಬಂದಿದೆ.

ನಿಗಮದಿಂದಲೂ ಪರಿಶೀಲನೆ:

ವಸತಿಗಾಗಿ ಅರ್ಹತೆ ಹೊಂದಿರುವವರ ಪಟ್ಟಿಯನ್ನು ನಿಗಮದಿಂದಲೂ ಪರಿಶೀಲನೆ ನಡೆಸಲಾಗುತ್ತದೆ. ಅರ್ಹ 26 ಜನರಲ್ಲಿ 16 ಹಿಂದೂಗಳು ಹಾಗೂ 10 ಮುಸ್ಲಿಮರಿದ್ದಾರೆ. ಇನ್ನು ಫಕೀರ್ ಲೇಔಟ್ ಮತ್ತು ವಾಸೀಂ ಲೇಔಟ್‌ನ ಯಾರೊಬ್ಬರೂ ಈ 26 ಜನರ ಪಟ್ಟಿಯಲ್ಲಿಲ್ಲ ಎನ್ನಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ