ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪಣ್ಣ ಆಯೋಗದ ವರದಿ ಬಿಡುಗಡೆ ಮಾಡಿ, ನೀವು ಸಾಚಾ ಎನ್ನುವುದು ಗೊತ್ತಾಗುತ್ತದೆ. ಪದೇ ಪದೆ ನಾನು ಪ್ರಾಮಾಣಿಕ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ನಿಮ್ಮ ಪ್ರಾಮಾಣಿಕತೆ ಎಲ್ಲಿದೆ ಎಂದು ಪ್ರಶ್ನಿಸಿದರು.
ಸದನದಲ್ಲಿ ಮುಡಾ ಹಗರಣದ ಬಗ್ಗೆ ನಿಲುವಳಿ ಸೂಚಿಸಿದಾಗ ಚರ್ಚೆಗೆ ಅವಕಾಶ ಕೊಡಲಿಲ್ಲ. ಆದರೆ, ಸದನದಲ್ಲಿ ಉತ್ತರ ಕೊಡದೇ ಮಾಧ್ಯಮಗೋಷ್ಠಿ ನಡೆಸಿ ಉತ್ತರ ಕೊಟ್ಟಿದ್ದೀರಿ. ಇದೆಲ್ಲವನ್ನು ನೋಡಿದಾಗ ನೀವು ತಪ್ಪು ಮಾಡಿರುವುದು ಗೊತ್ತಾಗುತ್ತದೆ. ಅರ್ಕಾವತಿ ಹಗರಣ ಬಗ್ಗೆ ನಾನು ಧ್ವನಿ ಎತ್ತಿದ್ದೆ. ನ್ಯಾಯಮೂರ್ತಿ ಕೆಂಪಣ್ಣ ಆಯೋಗ ನೀಡಿದ ವರದಿಯನ್ನು ಸದನದಲ್ಲಿ ಮಂಡನೆ ಮಾಡುವಂತೆ ಒತ್ತಾಯಿಸಿದರು.ಪ್ರತಿಪಕ್ಷವಾಗಿ ನಾವು ಸರ್ಕಾರ ಮಾಡಿದ ತಪ್ಪನ್ನು ಪಾದಯಾತ್ರೆ ಮೂಲಕ ಜನರ ಬಳಿ ಹೋಗಿ ಜಾಗೃತಿ ಮೂಡಿಸಿದ್ದೇವೆ. ಮುಡಾ, ಎಸ್ಸಿ, ಎಸ್ಟಿ ಹಗರಣದಲ್ಲಿ ನೇರವಾದ ಪಾತ್ರ ಇದೆ. ಹಾಗಾಗಿ ನಾವು ಸಿಬಿಐ ತಿನಿಖೆಗೆ ಒತ್ತಾಯಿಸಿದ್ದೇವೆ ಎಂದರು.
ಬಳ್ಳಾರಿ ಪಾದಯಾತ್ರೆಗೆ ಹೋಗುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಪಕ್ಷಕ್ಕೆ ಬದ್ಧ ಇರುವ ವ್ಯಕ್ತಿ. ಪಕ್ಷ ಕೈಗೊಳ್ಳುವ ನಿರ್ಧಾರದಂತೆ ನಾನು ನಡೆದುಕೊಳ್ಳುತ್ತೇನೆ ಎಂದರು.