ಕಾಂಗ್ರೆಸ್ ಗೆ ಮಾತ್ರ ಬಡವರ ಕಷ್ಟ ಅರ್ಥವಾಗುತ್ತದೆ: ಲಕ್ಷ್ಮೀ ಹೆಬ್ಬಾಳಕರ್‌

KannadaprabhaNewsNetwork |  
Published : Apr 22, 2024, 02:20 AM IST
ಅಅಅ | Kannada Prabha

ಸಾರಾಂಶ

ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಬಡವರ ಏಳಿಗೆ ಸಾಧ್ಯ. ಬಡವರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ‌ ತಂದಿದ್ದು, ಭರಪೂರ ನೆರವು ನೀಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿಕಾಂಗ್ರೆಸ್ ಸರ್ಕಾರದಿಂದ ಮಾತ್ರ ಬಡವರ ಏಳಿಗೆ ಸಾಧ್ಯ. ಬಡವರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ‌ ತಂದಿದ್ದು, ಭರಪೂರ ನೆರವು ನೀಡುತ್ತಿದೆ. ಬಡವರ ಕಷ್ಟ ಕಾಂಗ್ರೆಸ್ ಗೆ ಮಾತ್ರ ಅರ್ಥವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ವಂಟಮೂರಿ ಕಾಲೋನಿಯ ಜನತಾ ಬ್ಲಾಕ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಪಕ್ಷ ಬಡವರ ಪಕ್ಷ, ಬದ್ಧತೆಗೆ ಹೆಸರಾಗಿರುವ ಪಕ್ಷ ಎಂದು ಹೇಳಿದರು.

ಕಳೆದ ವರ್ಷ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ ಜಾರಿಗೆ ತಂದಿತು. ಹಿಂದಿನ ಶಾಸಕ ಫಿರೋಜ್ ಸೇಠ್ ಶ್ರಮದ ಫಲವಾಗಿ ಇಂದು ವಂಟಮೂರಿ ಸಕಲ ರೀತಿಯಲ್ಲೂ ಅಭಿವೃದ್ಧಿ ಹೊಂದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನೆರವು ನೀಡಲಾಗುವುದು. ಮೃಣಾಲ್‌ ಹೆಬ್ಬಾಳಕರ್ ಎಂಪಿ ಆಗಿ ಆಯ್ಕೆಯಾದರೆ, ಶಾಸಕ ರಾಜು ಸೇಠ್ ಜತೆಗೂಡಿ ಈ ಪ್ರದೇಶಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸುವರು ಎಂದು ಭರವಸೆ ನೀಡಿದರು.

ಶಾಸಕ ರಾಜು ಸೇಠ್ ಮಾತನಾಡಿ, ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಬೇಕು. ಕಳೆದ ಐದು ಬಾರಿ ನಮಗೆ ಸೋಲುಂಟಾಗಿದ್ದು, ಈ‌ ಬಾರಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ ಗೆಲುವು ಶತಸಿದ್ಧ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ ಮಾತನಾಡಿ, ಈ ಬಾರಿ ಕಾಂಗ್ರೆಸ್ ಗೆಲುವಿಗೆ ಉತ್ತಮ ಅವಕಾಶವಿದ್ದು, ನಿಮ್ಮಗಳ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಮುಖಂಡರಾದ ಆರ್.ವಿ. ಪಾಟೀಲ್, ಜ್ಯೋತಿ ಬಾವಿಕಟ್ಟಿ, ಪುಷ್ಪ ಪರ್ವತರಾವ್, ಬೈಲ್ ಪತ್ತರ್ ಅಧ್ಯಕ್ಷ ಅಪ್ಪುಶಾ, ನಾಗೇಶ, ಕಲ್ಲಪ್ಪ, ಶಾಂತಾ ಬಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ