ವಿದ್ಯೆಯಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ

KannadaprabhaNewsNetwork |  
Published : May 25, 2025, 02:17 AM IST
ಭಗೀರಥ ಜಯಂತ್ಯುತ್ಸವ ಆಚರಣಾ ಸಮಿತಿ ಪಟ್ಟಣದ ಗಣಪತಿ ಕೊತ್ತಲು ಉದ್ಯಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚಿನ ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಭಗೀರಥ ಜಯಂತ್ಯುತ್ಸವ ಆಚರಣಾ ಸಮಿತಿ ಪಟ್ಟಣದ ಗಣಪತಿ ಕೊತ್ತಲು ಉದ್ಯಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉಪ್ಪಾರ ಸಮುದಾಯ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ವಿದ್ಯೆಯಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಮಕ್ಕಳಿಗೆ ಆಸ್ತಿ ಮಾಡುವ ಬದಲು ಶಿಕ್ಷಣ ನೀಡಿ ಅವರನ್ನೇ ಸಮಾಜದ ಆಸ್ತಿಯನ್ನಾಗಿ ರೂಪಿಸುವಂತೆ ತಿಳಿಸಿ ಸಮುದಾಯದ ಮುಖಂಡರು ಭಿನ್ನಾಭಿಪ್ರಾಯ ಬದಿಗೊತ್ತಿ ಬಂದಲ್ಲಿ ನೆನಗುದಿಗೆ ಬಿದ್ದಿರುವ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯ ನೆರವು ನೀಡುವುದಾಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ಭಗೀರಥ ಮಹರ್ಷಿಗಳ ಆದರ್ಶಗಳು ಪ್ರತಿಯೊಬ್ಬರಿಗೂ ಅನುಕರಣೀಯವಾಗಿದೆ ಎಂದು ಶಾಸಕ ಎ.ಮಂಜು ತಿಳಿಸಿದರುಭಗೀರಥ ಜಯಂತ್ಯುತ್ಸವ ಆಚರಣಾ ಸಮಿತಿ ಪಟ್ಟಣದ ಗಣಪತಿ ಕೊತ್ತಲು ಉದ್ಯಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉಪ್ಪಾರ ಸಮುದಾಯ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ವಿದ್ಯೆಯಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಮಕ್ಕಳಿಗೆ ಆಸ್ತಿ ಮಾಡುವ ಬದಲು ಶಿಕ್ಷಣ ನೀಡಿ ಅವರನ್ನೇ ಸಮಾಜದ ಆಸ್ತಿಯನ್ನಾಗಿ ರೂಪಿಸುವಂತೆ ತಿಳಿಸಿ ಸಮುದಾಯದ ಮುಖಂಡರು ಭಿನ್ನಾಭಿಪ್ರಾಯ ಬದಿಗೊತ್ತಿ ಬಂದಲ್ಲಿ ನೆನಗುದಿಗೆ ಬಿದ್ದಿರುವ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯ ನೆರವು ನೀಡುವುದಾಗಿ ಹೇಳಿದರು. ಸಾನಿಧ್ಯ ವಹಿಸಿದ್ದ ಹೊಸದುರ್ಗದ ಭಗೀರಥ ಪೀಠಾಧ್ಯಕ್ಷ ಡಾ. ಪುರುಷೋತ್ತಾಮಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಭಗೀರಥ ಮಹರ್ಷಿ ತನ್ನ ವಂಶಜರಿಗೆ ಸದ್ಗತಿ ದೊರಕಿಸಲು ದೇವಲೋಕದಿಂದ ಭೂಮಿಗೆ ಗಂಗೆಯನ್ನು ತಂದಂತೆ, ಏನೇ ಅಡೆತಡೆಗಳು ಇದ್ದರೂ ಎದೆಗುಂದದೆ ಮುನ್ನುಗ್ಗಿ ನಡೆದಾಗ ಸಾಧನೆ ಸಾಧ್ಯವಾಗುತ್ತದೆ. ಸಮುದಾಯದವರು ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರವನ್ನು ನೀಡುವ ಮೂಲಕ ಅವರನ್ನು ಉತ್ತಮ ನಾಗರಿಕರಾಗಿ ರೂಪಿಸುವಂತೆ ತಿಳಿಸಿದರು. ತಹಸೀಲ್ದಾರ್ ಕೆ.ಸಿ.ಸೌಮ್ಯ ಮಾತನಾಡಿದರು. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚಿನ ಅಂಕಪಡೆದ ವಿದ್ಯಾರ್ಥಿಗಳನ್ನು ಹಾಗೂ ಸಮಾಜದ ಮುಖಂಡರನ್ನು ಗೌರವಿಸಲಾಯಿತು. ಭಗೀರಥ ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಎಚ್.ಸಿ. ವೆಂಕಟೇಶ್, ಮುಖಂಡರಾದ ರವಿಕುಮಾರ್, ವಿಶ್ವನಾಥ್, ಮಲ್ಲೇಶ್, ನಿತ್ಯಜ್ಯೋತಿ ನಾಗರಾಜ್, ಬಾಣದಹಳ್ಳಿ ಗಣೇಶ್, ಕೆ.ಆರ್. ಹೊಯ್ಸಳ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಮುನ್ನ ಪ್ರಮುಖ ಬೀದಿಗಳಲ್ಲಿ ಭಗೀರಥ ಮಹರ್ಷಿಗಳ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.

===

ಫೋಟೋ ಶೀರ್ಷಿಕೆ:

ಭಗೀರಥ ಜಯಂತ್ಯುತ್ಸವ ಆಚರಣಾ ಸಮಿತಿ ಪಟ್ಟಣದ ಗಣಪತಿ ಕೊತ್ತಲು ಉದ್ಯಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚಿನ ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ