ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ: ತಹಸೀಲ್ದಾರ್ ರೂಪ

KannadaprabhaNewsNetwork |  
Published : Oct 17, 2025, 01:00 AM IST
ಶಿರ್ಷಿಕೆ.16ಕೆ.ಎಂ.ಎಲ್‌.ಆರ್.1- ಮಾಲೂರು ತಹಶಿಲ್ದಾರ್ ಎಂ.ವಿ.ರೂಪ  | Kannada Prabha

ಸಾರಾಂಶ

ಎಲ್ಲಾ ಹಸಿರು ಪಟಾಕಿಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಅನ್ನು ಪರಿಶೀಲಿಸುವುದು. ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಇಲ್ಲದ ಪಟಾಕಿ ಹಸಿರು ನೈಜ ಪಟಾಕಿಯಾಗಿರುವುದಿಲ್ಲ ಮತ್ತು ಅವುಗಳನ್ನು ನಿಯಮಾನುಸಾರ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಾಲೂರು

ದೀಪಾವಳಿ ಹಬ್ಬ ಸಮೀಪಿಸುತಿರುವ ಹಿನ್ನೆಲೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮತ್ತು ಸಿಡಿಸಲು ಅವಕಾಶ ಕಲ್ಪಿಸಲಾಗಿದ್ದು, ಪಟಾಕಿಗಳನ್ನು ರಾತ್ರಿ ಮಾತ್ರ ಸಿಡಿಸಬಹುದಾಗಿದೆ ಎಂದು ತಹಸೀಲ್ದಾರ್ ಎಂ.ವಿ.ರೂಪ ತಿಳಿಸಿದ್ದಾರೆ.

ಆವರು ಸುದ್ದಿಗಾರರೊಂದಿಗೆ ಮಾತನಾಡಿ, ಹಸಿರು ಪಟಾಕಿ ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು. ತಾಲೂಕು ಮಟ್ಟದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಈ ಕಾರ್ಯಪಡೆಯು ಹಸಿರು ಪಟಾಕಿ ಅಲ್ಲದೆ. ನಿಷೇಧಿತ ಪಟಾಕಿಯನ್ನು ದಾಸ್ತಾನು ಮಾಡಿದ್ದಲ್ಲಿ. ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲಾಗುವುದು ಎಂದು ತಿಳಿಸಿದರು.

ಎಲ್ಲಾ ಹಸಿರು ಪಟಾಕಿಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಅನ್ನು ಪರಿಶೀಲಿಸುವುದು. ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಇಲ್ಲದ ಪಟಾಕಿ ಹಸಿರು ನೈಜ ಪಟಾಕಿಯಾಗಿರುವುದಿಲ್ಲ ಮತ್ತು ಅವುಗಳನ್ನು ನಿಯಮಾನುಸಾರ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಫೋಟಿಸುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.

ನಗರಸಭೆ ನಿಗದಿಪಡಿಸಿದ ಸರ್ಕಾರಿ ಬಾಲಕಿಯರ ಕಾಲೇಜಿನ ಆವರಣದಲ್ಲಿ ಮಾತ್ರ ಪಟಾಕಿ ಮಾರಲು ಮಾರಾಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ. ಹೊರ ರಾಜ್ಯಗಳಿಂದ ಅನಧೀಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ವತಿಯಿಂದ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಹಾಗೂ ಸಾಗಾಟ ಮಾಡುವ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಹಸಿರು ಪಟಾಕಿ ಬಳಸಿ, ಪರಿಸರ ಸ್ನೇಹಿ ದೀಪಾವಳಿ ಆಚರಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನೆ ಕಳ್ಳತನಕ್ಕೆ ಕಳ್ಳರ ವಿಫಲಯತ್ನ
ಕೇಂದ್ರ ಕಾರಾಗೃಹಕ್ಕೆ ಶಶಿಧರ ಕೋಸಂಬೆ ಭೇಟಿ