ಮಂಡ್ಯ:
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಆಯ್ಕೆ ಸಮಿತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಆಯ್ಕೆ ಸಮಿತಿ ಸದಸ್ಯರು ತಮಗೆ ಬೇಕಾದವರಿಗೆ ಪ್ರಶಸ್ತಿ ನೀಡಿ ಸ್ವಜನ ಪಕ್ಷಪಾತ ಮಾಡಿದ್ದಾರೆ. ಜೊತೆಗೆ ರಾಜಕಾರಣಿಗಳ ಹಾಗೂ ಉನ್ನತ ಅಧಿಕಾರಿಗಳ ಶಿಫಾರಸ್ಸಿಗೆ ಮಣೆ ನೀಡಲಾಗುತ್ತಿದೆ ಎಂದು ದೂರಿದ್ದಾರೆ.
ಪ್ರತಿವರ್ಷ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವದ ದಿನದಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ನೀಡುವ ಪ್ರಶಸ್ತಿಗೆ ಶಿಫಾರಸ್ಸು ಇಲ್ಲದ ಅರ್ಹ ಹಾಗೂ ನಿಜವಾದ ಸಾಧಕರು ಪ್ರಶಸ್ತಿಗಳಿಂದ ವಂಚಿತರಾಗುತ್ತಿದ್ದಾರೆ ಎಂದು ವಿಷಾದಿಸಿದ್ದಾರೆ.ಪ್ರಶಸ್ತಿ ನೀಡುವ ಕ್ಷೇತ್ರಗಳ ಬಗ್ಗೆ ಜಿಲ್ಲೆಯಲ್ಲಿ ಯಾವುದೇ ವೈಜ್ಞಾನಿಕ ಮಾನದಂಡ ಅಥವಾ ನಿಯಮಗಳ ಪಾಲನೆ ಮಾಡಿಲ್ಲ. ಕ್ಷೇತ್ರವಾರು ಪ್ರಶಸ್ತಿ ಆಯ್ಕೆಯಲ್ಲಿ ತಾರತಮ್ಯ ಎಸಗಲಾಗಿದೆ. ಸಾಹಿತ್ಯ ಕ್ಷೇತ್ರದ ಜೊತೆಗೆ ಹೋರಾಟಗಾರರನ್ನು ಕಡೆಗಣಿಸಲಾಗಿದೆ. ಪ್ರತಿಭಾ ನ್ಯಾಯ ಮತ್ತು ಪ್ರಾದೇಶಿಕ ನ್ಯಾಯ ಕಣ್ಮರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೇಲುಕೋಟೆ: ಮೇಲುಕೋಟೆ ಹೋಬಳಿಯ ಇಬ್ಬರು ಸಾಧಕರಿಗೆ ಈ ಬಾರಿ ಮಂಡ್ಯ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಚೆಲುವನಾರಾಯಣಸ್ವಾಮಿ ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯರು, ನಿವೃತ್ತ ಮುಖ್ಯ ಶಿಕ್ಷಕ ಡಾ.ವಿ. ವೆಂಕಟರಾಮೇಗೌಡರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬಾಜನರಾಗಿರುವ ವೆಂಕಟರಾಮೇಗೌಡರು ತಾಲೂಕು ಕಸಾಪ ಅಧ್ಯಕ್ಷರು, ಕಾರ್ಯದರ್ಶಿಯಾಗಿ ಹಲವಾರು ಸಾಹಿತ್ಯ ಪರ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದರು. ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಐದು ದಶಕಗಳ ಕಾಲ ತೊಡಗಿಸಿಕೊಂಡಿದ್ದಾರೆ. ಇವರ ಸೇವೆ ಪರಿಗಣಿಸಿ ಜಿಲ್ಲಾಡಳಿತ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.