
ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಬಿಜಿಎಸ್ ಸಭಾಂಗಣದಲ್ಲಿ ಡಾ.ನಿರ್ಮಲಾನಂದನಾಥ ಶ್ರೀಗಳ ದೀಕ್ಷ ದಿನೋತ್ಸವ ಪ್ರಯುಕ್ತ ಕರ್ನಾಟಕ ಮಾರವಾಡಿ ಯೂತ್ ಫೆಡರೇಷನ್ ಸಹಭಾಗಿತ್ವದಲ್ಲಿ 10 ದಿನಗಳ ಕಾಲ ನಡೆದ ಉಚಿತ ಕೃತಕ ಕೈ ಮತ್ತು ಕಾಲು ಜೋಡಣಾ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಉಳ್ಳವರು ಸೇವಾ ಮನೋಭಾವದಿಂದ ಕಲ್ಯಾಣ ಕಾರ್ಯಗಳನ್ನು ನಡೆಸಿದರೆ ಅದೆಷ್ಟೋ ಜನರ ಬದುಕು ಹಸನಾಗುವ ಜೊತೆಗೆ, ಸೇವಾ ಕೆಲಸ ಮಾಡಿದವರಿಗೂ ಪುಣ್ಯ ಲಭಿಸುತ್ತದೆ. ರೋಬೋಟಿಕ್ ಯುಗದಲ್ಲಿ ನಾವು ಏನೆಂದುಕೊಳ್ಳುತ್ತವೆ, ಆ ಎಲ್ಲಾ ಅನ್ವೇಷಣೆಗಳಾಗಿ ಇಂದು ಕೆಲಸ ನಿರ್ವಹಿಸುತ್ತಿವೆ ಎಂದರು.ರೋಬೋಟಿಕ್ ಮಾದರಿಯಲ್ಲಿಯೇ ನಮ್ಮ ದೇಹದ ಪ್ರಕ್ರಿಯೆಗಳಿಗೆ ತಕ್ಕಂತೆ ಹೊಂದಾಣಿಕೆಯಾಗುವಂತಹ ತಂತ್ರಜ್ಞಾನದ ಕೃತಕ ಅಂಗಗಳು ಮುಂದಿನ ದಿನಗಳಲ್ಲಿ ಅನ್ವೇಷಣೆಗಳಾಗಿ ಅಂಗ ನ್ಯೂನತೆಯವರು ಕೂಡ ಸಾಮಾನ್ಯರಂತೆ ಜೀವನ ನಡೆಸುವಂತಹ ದಿನಗಳು ಕೆಲವೇ ವರ್ಷಗಳಲ್ಲಿ ಬರಲಿವೆ. ಪ್ರತಿಯೊಬ್ಬರೂ ತಮ್ಮ ಹಿರಿಯರ ಹೆಸರಿನಲ್ಲಿ ಸಮಾಜಮುಖಿಯಾದ ಸೇವೆಗಳನ್ನು ಮಾಡಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿದೆ. ಜನಪರವಾದ ಸೇವೆ ಮಾಡುವವರಿಗೆ ಶ್ರೀಮಠ ಹಾಗೂ ನಮ್ಮ ಸಂಸ್ಥೆಗಳು ಸದಾ ಜೊತೆಯಲ್ಲಿರುತ್ತವೆ ಎಂದು ಹೇಳಿದರು.
ಬಡವರಿಗೆ ಅನುಕೂಲವಾಗಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಜನರ ಬೇಡಿಕೆಗೆ ತಕ್ಕಂತೆ ಎಲ್ಲವನ್ನೂ ಪೂರೈಸಲು ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಸರ್ಕಾರದ ಜೊತೆಗೆ ಸಮಾಜಕ್ಕೆ ಸೇವೆ ಮಾಡುವವರು, ಸಂಘ- ಸಂಸ್ಥೆಗಳು ಕೈಜೋಡಿಸಿದಾಗ ಮಾತ್ರ ಬಡವರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಖಾಸಗಿ ಆಸ್ಪತ್ರೆಗಳಲ್ಲೂ ಉಚಿತ ಚಿಕಿತ್ಸೆ:
ಶಿಬಿರದಲ್ಲಿ ಒಟ್ಟು 478 ಜನರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 432 ಜನರಿಗೆ ಕೃತಕ ಕೈ ಮತ್ತು ಕಾಲುಗಳನ್ನು ಜೋಡಣೆ ಮಾಡಲಾಯಿತು. ಸಮಾರಂಭದಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಟ್ರಸ್ಟಿ ದೇವರಾಜು, ಆದಿಚುಂಚನಗಿರಿ ವಿವಿ ಉಪಕುಲಪತಿ ಡಾ.ಶ್ರೀಧರ್, ಮಾಜಿ ಉಪಕುಲಪತಿ ಡಾ.ಎಂ.ಎ.ಶೇಖರ್, ಆದಿಚುಂಚನಗಿರಿ ವಿವಿ ರಿಜಿಸ್ಟಾರ್ ಸಿ.ಕೆ.ಸುಬ್ಬರಾಯ್, ಕರ್ನಾಟಕ ಮಾರವಾಡಿ ಯೂತ್ ಪೆಢರೇಷನ್ ಮುಖ್ಯಸ್ಥ ಅಶೋಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಜಿ.ಶಿವರಾಮ್, ಆದಿಚುಂಚನಗಿರಿ ಆಸ್ಪತ್ರೆ ಮುಖ್ಯಸ್ಥ ಡಾ.ಶಿವಕುಮಾರ್ ಸೇರಿ ಹಲವರು ಇದ್ದರು.