ಅಧ್ಯಯನದಿಂದಷ್ಟೇ ಯಶಸ್ಸಿನ ಉತ್ತುಂಗಕ್ಕೇರಲು ಸಾಧ್ಯ: ಅಂಕೇಗೌಡ

KannadaprabhaNewsNetwork |  
Published : Mar 03, 2026, 01:30 AM IST
2ಕೆಎಂಎನ್‌ಡಿ-17ಶ್ರೀರಂಗಪಟ್ಟಣ ತಾಲೂಕಿನ ಚಿನ್ನಾಯಕನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಎನ್‌ಎಸ್‌ಎಸ್‌ ವಾರ್ಷಿಕ ಶಿಬಿರದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಂ.ಅಂಕೇಗೌಡ ಮಾತನಾಡಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ಪುಸ್ತಕಗನ್ನ ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ಮನರಂಜನೆಗಳಿಂದ ದೂರ ಉಳಿದರೆ ಮಾತ್ರ ಯಶಸ್ಸಿನ ಉತ್ತುಂಗವನ್ನೇರಲು ಸಾಧ್ಯ. ಜೊತೆಗೆ ವಿದ್ಯಾರ್ಥಿಗಳು ತಮ್ಮ ಪಠ್ಯಕ್ಕಷ್ಟೇ ಸೀಮಿತವಾಗಿರದೆ ಉತ್ತಮ ಪುಸ್ತಕಗಳನ್ನ ಓದಿ ಜ್ಞಾನ ಸಂಪಾದಿಸಬೇಕು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಸೇರಿದಂತೆ ಮನ ರಂಜನೆಗಳಿಂದ ದೂರ ಉಳಿದು ಉತ್ತಮ ಪುಸ್ತಕಗಳನ್ನು ಓದುವತ್ತ ಮುಖ ಮಾಡಿದರೆ ಮಾತ್ರ ಯಶಸ್ವಿಯ ಉತ್ತುಂಗವನ್ನೇರಲು ಸಾಧ್ಯ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರಳಹಳ್ಳಿ ಪುಸ್ತಕದ ಮನೆ ಎಂ.ಅಂಕೇಗೌಡ ಹೇಳಿದರು.

ತಾಲೂಕಿನ ಚಿನ್ನಾಯಕನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೇಷಾದ್ರಿಪುರಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮೈಸೂರಿನ, ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಆಯೋಜಿಸಲಾಗಿದ್ದ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪುಸ್ತಕಗನ್ನ ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ಮನರಂಜನೆಗಳಿಂದ ದೂರ ಉಳಿದರೆ ಮಾತ್ರ ಯಶಸ್ಸಿನ ಉತ್ತುಂಗವನ್ನೇರಲು ಸಾಧ್ಯ. ಜೊತೆಗೆ ವಿದ್ಯಾರ್ಥಿಗಳು ತಮ್ಮ ಪಠ್ಯಕ್ಕಷ್ಟೇ ಸೀಮಿತವಾಗಿರದೆ ಉತ್ತಮ ಪುಸ್ತಕಗಳನ್ನ ಓದಿ ಜ್ಞಾನ ಸಂಪಾದಿಸುವಂತೆ ಸಲಹೆ ನೀಡಿದರು.

ಬೆಂಗಳೂರಿನ ಗಾಂಧಿ ಸ್ಮಾರಕ ಭವನದ ಹಿರಿಯ ಗಾಂಧಿವಾದಿ ಪ್ರೊ.ಶಿವರಾಜ್ ಮಾತನಾಡಿ, ವಿದ್ಯಾರ್ಥಿ ದಿಸೆಯಲ್ಲೇ ಮಹಾತ್ಮ ಗಾಂಧೀಜಿಯವರು ಸಾಮಾಜಿಕ ಚಿಂತನೆ ಒಳಗೊಂಡಿದ್ದರು. ಅಂತೆಯೇ ತಮ್ಮ ಸ್ವಾತಂತ್ರ್ಯ ಹೋರಾಟದ ಜೊತೆಗೆ ಸಬರಾಮತಿ ಆಶ್ರಮ ಸ್ಥಾಪಿಸಿ, ಕಲ್ಯಾಣ ಕಾರ್ಯಕ್ರಮಗಳನ್ನು ನಡೆಸುತ್ತಿದರು. ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಪ್ರಸ್ತುತ ಅತ್ಯಂತ ಅತ್ಯಗತ್ಯ ಎಂದರು.

ವಿದ್ಯಾರ್ಥಿಗಳಿಗೆ ಶಿಬಿರದ ಅನುಭವಗಳ ಕುರಿತಂತೆ ಏರ್ಪಡಿಸಿದ್ದ ಪ್ರಬಂಧ ಸ್ವರ್ಧೆಯಲ್ಲಿ ಆಯ್ಕೆಯಾದ ನಾಲ್ಕು ವಿದ್ಯಾರ್ಥಿಗಳಿಗೆ ಶ್ರೀರಂಗಪಟ್ಟಣದ ಹಿರಿಯ ಗಾಂಧಿವಾದಿ ಡಾ.ಸುಜಯ ಕುಮಾರ್ ಗಾಂಧೀಜಿ ಕುರಿತ ಪುಸ್ತಕಗಳನ್ನು ನೀಡಿ ಗೌರವಿಸಿದರು.

ಈ ವೇಳೆ ಜೆ.ಎಸ್.ಎಸ್ ಪದವಿ ಪೂರ್ವ ಕಾಲೇಜಿನ, ಉಪನ್ಯಾಸಕ ಧನಂಜಯ, ಪ್ರೊ.ಕೆ.ಎನ್.ರಾಜಾರಾವ್, ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮಾಧಿಕಾರಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಡಾ. ರಾಘವೇಂದ್ರ, ಚಿಂತಕರಾದ ಕ್ಯಾತನಹಳ್ಳಿ ಚಂದ್ರಣ್ಣ, ಗ್ರಾಮದ ಮುಖಂಡರಾದ ಜಯರಾಮು, ದೇವರಾಜು, ಕರಿಯಣ್ಣ, ಜಯಕುಮಾರ, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆನೆ ಧಾಮ ಸ್ಥಾಪನೆಗೆ ಶಾಸಕ ಸುರೇಶ್ ಆಗ್ರಹ
ಕೌಶಲ್ಯಾಧಾರಿತ ಶಿಕ್ಷಣ ಮಕ್ಕಳಿಗೆ ಅಗತ್ಯ: ಪಿ.ಎಂ.ನರೇಂದ್ರಸ್ವಾಮಿ