ಇಂದಿನಿಂದ ಎಲ್ಲ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್‌

KannadaprabhaNewsNetwork |  
Published : Mar 11, 2026, 01:45 AM IST
10ಕೆಜಿಎಫ್‌1 | Kannada Prabha

ಸಾರಾಂಶ

ವೈದ್ಯರು ಹಾಗೂ ಸರ್ಕಾರಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಮಾ. 11ರಿಂದ 15ರವರೆಗೆ ಪ್ರತಿಭಟನೆಗೆ ಮುಂದಾಗಿದ್ದಾರೆ.

ಕೆಜಿಎಫ್:ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸರ್ಕಾರಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಮಾ. 11ರಿಂದ 15ರವರೆಗೆ ಪ್ರತಿಭಟನೆಗೆ ಮುಂದಾಗಿದ್ದಾರೆ.

ಗುತ್ತಿಗೆದಾರರು ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಲವು ಬೇಡಿಕೆಗಳ ಪಟ್ಟಿಯನ್ನೇ ಸರ್ಕಾರದ ಮುಂದಿಟ್ಟಿದ್ದು, ಮುಷ್ಕರಕ್ಕೆ ವೈದ್ಯರು ಸಾರ್ವಜನಿಕರ ಸಹಕಾರವನ್ನು ಕೋರಿದ್ದಾರೆ. ಸರ್ಕಾರಿ ಆಸ್ಪತ್ರೆಗಳ ವೈದ್ಯರ ಬೇಡಿಕೆಗಳೇನು?

ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲ ಕಾಲಕ್ಕೆ ಸಮರ್ಪಕವಾಗಿ ಔಷಧಿಗಳ ಸರಬರಾಜು.ವೃಂದ ಮತ್ತ ನೇಮಕಾತಿ ನಿಯಮಗಳನ್ನ ಪ್ರತಿ 3 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡುವುದು.ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವುದು. ಕಳೆದ ಐದು ವರ್ಷಗಳಿಂದ ತಡೆ ಹಿಡಿಯಲಾದ ಮುಂಬಡ್ತಿಯನ್ನು ನೀಡುವುದು. ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ಮಾಡುವುದು. ಕೇಂದ್ರ ಪುರಸ್ಕೃತ ಯೋಜನೆಯಡಿ ನೌಕರರಿಗೆ ಪ್ರತಿತಿಂಗಳ ಮೊದಲ ವಾರದಲ್ಲಿ ವೇತನ ಭತ್ಯೆ ನೀಡುವುದು. ಖಾಲಿ ಇರುವ ವೈದ್ಯರು, ಅರೆ ವೈದ್ಯರ ಹುದ್ದೆಯನ್ನ ಕೂಡಲೇ ಭರ್ತಿ ಮಾಡುವುದು. ಜಿಲ್ಲೆಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಸರ್ಕಾರದ ವಿರುದ್ಧ ಸೆಡ್ಡು ಹೊಡೆದು ಮಾ. 11ರಿಂದ ಮುಷ್ಕರ ಮಾಡುವುದಾಗಿ ಜಿಲ್ಲೆಯ ವೈದ್ಯರ ಸಂಘದ ಪದಾಧಿಕಾರಿಗಳು ವೃಂದ ಸಂಘ ಸಂಸ್ಥೆಗಳ ಬೆಂಬಲವನ್ನು ಕೋರಿದ್ದಾರೆ. ಎರಡು ಹಂತಗಳಲ್ಲಿ ವೈದ್ಯರ ಮುಷ್ಕರ:

ಮುಷ್ಕರವನ್ನು ಎರಡು ಹಂತಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಮೊದಲ ಹಂತವಾಗಿ ಮಾ. 11ರಿಂದ 15ರವರೆಗೆ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಡಿಸ್ಪೆನ್ಸರಿಗಳಲ್ಲಿ ಕಪ್ಪು ಪಟ್ಟಿಧರಿಸಿ ಹೊರ ರೋಗಿ (ಓಪಿಡಿ) ಸೇವೆಯನ್ನು ಸ್ಥಗಿತಗೊಳಿಸಲಾಗುತ್ತದೆ. ತುರ್ತು ಸೇವೆಗಳು ಮಾತ್ರ ಮುಂದುವರಿಯಲಿವೆ. ಎರಡನೇ ಹಂತವಾಗಿ ಮಾರ್ಚ್ 16ರಿಂದ ಅನಿರ್ದಿಷ್ಟಾವಧಿ ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರಕ್ಕೆ ತೀವ್ರಗೊಳಿಸುವುದಾಗಿ ವೈದ್ಯರ ಸಂಘ ಎಚ್ಚರಿಕೆ ನೀಡಲಾಗಿದೆ.ತುರ್ತು ಸಂದರ್ಭದಲ್ಲಿ ಬರುವ ರೋಗಿಗಳಿಗೆ ವೈದ್ಯರು ಸಹಕರಿಸಿ ಸೂಕ್ತ ಚಿಕಿತ್ಸೆ ನೀಡಬೇಕೆಂದು ಈಗಾಗಲೇ ಎಲ್ಲ ತಾಲೂಕು ಮಟ್ಟದ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಎಚ್‌ಒ ಶ್ರೀನಿವಾಸ್ ತಿಳಿಸಿದ್ದಾರೆ.

೧೦ಕೆಜಿಎಫ್೧ಕೆಜೆಇಫ್‌ನ ಸಾರ್ವಜನಿಕ ತುರ್ತು ಚಿಕಿತ್ಸೆಯ ವಿಭಾಗ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಕೆಶಿ ಡಿನ್ನರ್‌ ಪಾರ್ಟಿ: ಸಿಎಂ, ಸಚಿವರು ಭಾಗಿ
ಇಂದಿನಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಮುಷ್ಕರ