ಇಂದು ಅಕ್ಕ ಕೆಫೆ ಉದ್ಘಾಟನೆ: ವಿವಿಧ ಸಚಿವರು ಭಾಗಿ

KannadaprabhaNewsNetwork |  
Published : Jan 20, 2025, 01:31 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಅಕ್ಕ ಕೆಫೆಯ ಉದ್ಘಾಟನಾ ಸಮಾರಂಭವನ್ನು ಜ.20ರಂದು ನಗರದ ಅರುಣ ಟಾಕೀಸ್ ಹತ್ತಿರ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಪಶು ವೈದ್ಯಕೀಯ ಇಲಾಖೆ ಮುಂಭಾಗದಲ್ಲಿರುವ ಮಳಿಗೆಯಲ್ಲಿ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ದಾವಣಗೆರೆ

ಅಕ್ಕ ಕೆಫೆಯ ಉದ್ಘಾಟನಾ ಸಮಾರಂಭವನ್ನು ಜ.20ರಂದು ನಗರದ ಅರುಣ ಟಾಕೀಸ್ ಹತ್ತಿರ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಪಶು ವೈದ್ಯಕೀಯ ಇಲಾಖೆ ಮುಂಭಾಗದಲ್ಲಿರುವ ಮಳಿಗೆಯಲ್ಲಿ ಆಯೋಜಿಸಲಾಗಿದೆ.

ಮಧ್ಯಾಹ್ನ 1 ಗಂಟೆಗೆ ಗಣಿ, ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ.ಶರಣಪ್ರಕಾಶ ರುದ್ರಪ್ಪ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಉದ್ಘಾಟಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಮುಖ್ಯ ಅತಿಥಿಗಳಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ, ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ, ಹರಿಹರ ಶಾಸಕ ಬಿ.ಪಿ. ಹರೀಶ್, ವಿಧಾನ ಪರಿಷತ್ತು ಸದಸ್ಯರಾದ ಎಸ್.ಎಲ್. ಭೋಜೇಗೌಡ, ಡಿ.ಎಸ್.ಅರುಣ್, ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ. ಶ್ರೀನಿವಾಸ್, ಅಸಗೋಡು ಜಯಸಿಂಹ, ಜಯದೇವ ನಾಯ್ಕ, ಮೇಯರ್ ಚಮನ್ ಸಾಬ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ರೇಷ್ಮಾ, ಡಾ.ಶಮ್ಲಾ ಇಕ್ಬಾಲ್, ಐ.ಪಿ. ವಿದ್ಯಾ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಪಂ ಸಿಇಒ ಸುರೇಶ ಬಿ. ಇಟ್ನಾಳ್ ಇತರರು ಭಾಗವಹಿಸುವರು.

- - - (ಫೋಟೋ:)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಸಂಘಗಳ ಬಲವರ್ಧನೆಗೆ ವಿಮೆ ಅನಿವಾರ್ಯ
ಕವಿಚಕ್ರವರ್ತಿ ರನ್ನನ ಇತಿಹಾಸ ಉಳಿಸಿ, ಬೆಳೆಸಬೇಕಿದೆ: ಎ.ಎಂ. ಕಂಬಾರ