ಕನ್ನಡಪ್ರಭ ವಾರ್ತೆ ಬಂಟ್ವಾಳ
ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬಂಟ್ವಾಳ ಹಾಗೂ ಉಳ್ಳಾಲ, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವಿಎಸ್‌ಪಿ ತಯಾರಿ ಬಗ್ಗೆ ತರಬೇತಿ ಕಾರ್ಯಾಗಾರ ಹಾಗೂ ನರಿಕೊಂಬು ಎಂಆರ್‌ಎಫ್ ಘಟಕದ ಕಾರ್ಯಾಚರಣೆ ಮತ್ತು ನಿರ್ವಹಣೆಯ ಬಗ್ಗೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.
ನರಿಕೊಂಬು ಎಂಆರ್‌ಎಫ್ ಘಟಕಕ್ಕೆ ಪ್ರತಿದಿನ 7 ಮೆಟ್ರಿಕ್ ಟನ್ ತ್ಯಾಜ್ಯದ ಅವಶ್ಯಕತೆ ಇದ್ದು, ಪ್ರಸ್ತುತ 2.5 ಮೆಟ್ರಿಕ್ ಟನ್ ತ್ಯಾಜ್ಯವಷ್ಟೇ ಸಂಗ್ರಹವಾಗುತ್ತಿದೆ. 4.5 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹವನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಂಗ್ರಹಿಸಲು ಕ್ರಮವಹಿಸಬೇಕು. ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಕೇಂದ್ರ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಸೇರಿದಂತೆ ಇತರೆ ಅನುದಾನದಡಿ ನಿರ್ಮಾಣವಾಗಿರುತ್ತದೆ. ಆದ್ದರಿಂದ ಇದರ ಕಾರ್ಯನಿರ್ವಹಣೆ ಜವಾಬ್ದಾರಿಯ ಜೊತೆಗೆ ಎಲ್ಲರ ಪಾಲ್ಗೊಳ್ಳುವಿಕೆ ಮುಖ್ಯವಾಗಿದೆ ಎಂದರು.ಮಾಣಿ, ಕುರ್ನಾಡು, ಕೆದಿಲ, ಕೇಪು, ಅಳಿಕೆ, ನರಿಕೊಂಬು ಗ್ರಾಮ ಪಂಚಾಯಿತಿ ಅಧ್ಯಕ್ಷರು ಗ್ರಾಮ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯ ಸಂಗ್ರಹದ ಕುರಿತು ಅಭಿಪ್ರಾಯ ತಿಳಿಸಿದರು.
.....................
ಎಂಆರ್‌ಎಫ್ ಘಟಕಕ್ಕೆ ಭೇಟಿನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಂಭೂರಿನಲ್ಲಿರುವ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ಮಾನ್ಯ ದ.ಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಆನಂದ್ ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಚಿನ್ ಕುಮಾರ್, ಉಳ್ಳಾಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗುರುದತ್ತ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ಎಸ್.ನಟೇಶ್ ಕುಮಾರ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಜಗದೀಶ್, ದ.ಕ ಜಿಪಂ ಎಸ್‌ಬಿಎಂ ಜಿಲ್ಲಾ ಸಮಾಲೋಚಕರಾದ ನವೀನ್, ಪವನ್, ನರಿಕೊಂಬು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಂತೋಷ್ ಜತೆಗಿದ್ದರು.