ಮಂಗಳೂರು: ಹಾಸನ ನಗರ ಮೂಲದ ೩೮ ವಯಸ್ಸಿನ ಸಾವು ಬದುಕಿನ ಹೋರಾಟದಲ್ಲಿದ್ದ ಶ್ವಾಸಕೋಶ ಸಂಬಂಧಿ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಗೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರ ತಂಡ ವಿನೂತನ ಶೈಲಿಯ ಕ್ಲಿಷ್ಟಕರ ಮತ್ತು ಅಪಾಯಕಾರಿ ಶ್ವಾಸಕೋಶದ ಶಸ್ತ್ರ ಚಿಕಿತ್ಸೆಯನ್ನು ಆಧುನಿಕ ತಂತ್ರಜ್ಞಾನವನ್ನು ಬಳಸಿ, ಯಶಸ್ವಿಯಾಗಿ ನಿರ್ವಹಿಸಿ, ರೋಗಿಗೆ ಜೀವದಾನ ನೀಡಿ ಆರೋಗ್ಯ ಕ್ಷೇತ್ರದಲ್ಲಿ ಒಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ.
ತುರ್ತು ೬ ಗಂಟೆ ಅವಧಿಯ ವಿನೂತನ ಶೈಲಿಯ ಕ್ಲಿಷ್ಟಕರ ಶ್ವಾಸಕೋಶ ಶಸ್ತ್ರ ಚಿಕಿತ್ಸೆಯನ್ನು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ, ನಿರ್ವಹಿಸಿ, ಯಶಸ್ವಿಯಾಗಿ ನೆರವೇರಿಸಿ, ರಕ್ತದ ಹೆಪ್ಪುಗಟ್ಟುವಿಕೆಯನ್ನು ತೆಗೆದು ರಕ್ತ ಚಲನವಲನಕ್ಕೆ ಅನುವು ಮಾಡಿದರು. ಈ ಅಪರೂಪದ ಚಿಕಿತ್ಸೆಯಲ್ಲಿ ಹೃದ್ರೋಗ ಶಾಸ್ತ್ರ ಅರಿವಳಿಕೆ ತಜ್ಞ ಡಾ. ಎಂ.ಎಂ. ಚೇತನಾ ಆನಂದ್ ಸಹಕರಿಸಿದ್ದರು. ರೋಗಿಯು ಚಿಕಿತ್ಸೆಗೆ ಸ್ಪಂದಿಸಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ತಮ್ಮ ನಿವಾಸದಲ್ಲಿ ಸಹಜ ಆರೋಗ್ಯ ಜೀವನ ನಡೆಸುತಿದ್ದಾರೆ. ಡಾ. ಆನಂದ್‌ರವರು ಯಶಸ್ವಿ ಶಸ್ತ್ರ ಚಿಕಿತ್ಸೆ ಬಳಿಕ ಈ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಯಲ್ಲಿ ಉತ್ತಮ ದರ್ಜೆಯ ಚಿಕಿತ್ಸೆ ನೀಡಿದ್ದು, ಮತ್ತು ಮಾರಣಾಂತಿಕ ಸಮಸ್ಯೆಯನ್ನು ಹೊಂದಿರುವ ರೋಗಿಗೆ ಅತ್ಯಾಧುನಿಕ ತಂತ್ರಜ್ಞಾನದ ಚಿಕಿತ್ಸಾ ವಿಧಾನಗಳಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ನಿರ್ದೇಶಕ ರೆ.ಫಾ. ಫೋಸಿನ್ ಲೂಕಸ್ ಲೋಬೋರವರು ವೈದ್ಯಕೀಯ ತಂಡದ ಗಮನಾರ್ಹ ಸಾಧನೆಯಾಗಿದೆ.