
ಅರಣ್ಯ ಇಲಾಖೆ ಕೈಗೊಂಡ ಆಪರೇಷನ್ ಗಜ ಕಾರ್ಯಾಚರಣೆ ವಿರೋಧಿಸಿದ ಸರ್ವಪಕ್ಷಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್ಗೆ ಉತ್ತಮ ಬೆಂಬಲ ಸೂಚಿಸಿದರು.ಬೆಳಗ್ಗೆ 6 ಗಂಟೆಯಿಂದ ಆರಂಭವಾದ ಬಂದ್ ಸಂಜೆವರೆಗೂ ಮುಂದುವರಿಯಿತು. ಪಟ್ಟಣದ ಬಹುತೇಕ ಶಾಲಾ-ಕಾಲೇಜು ಗಳಿಗೆ ರಜೆ ಘೋಷಿಸಲಾಗಿತ್ತು. ಆಟೊಗಳು ರಸ್ತೆಗಿಳಿಯಲಿಲ್ಲ. ವಕೀಲರು ನ್ಯಾಯಾಲಯದ ಕಲಾಪದಿಂದ ದೂರ ಉಳಿದು ಮೆರವಣಿಗೆ ನಡೆಸಿ ಪ್ರತಿಭಟನೆಗೆ ಕೈಜೋಡಿಸಿದರು. ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.ಪಶ್ಚಿಮ ವಲಯ ಐಜಿಪಿ ಶಶಿಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಸ್ಥಳಕ್ಕೆ ಭೇಟಿ ನೀಡಿ ಬಂದೋಬಸ್ತ್ ಪರಿಶೀಲಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.ನಂತರ ಪ್ರತಿಭಟನಾಕಾರರು ಮೂಡಿಗೆರೆ-ಕಡೂರು ರಾ.ಹೆ. 173ರಲ್ಲಿ ಸುಮಾರು ಒಂದು ಗಂಟೆ ರಸ್ತೆ ತಡೆ ನಡೆಸಿದರು. ಕಾಡಾನೆ ದಾಳಿಯಿಂದ ಧ್ವಂಸಗೊಂಡ ಕಾಫಿ ಹಾಗೂ ಅಡಕೆ ಗಿಡಗಳನ್ನು ರಸ್ತೆಯಲ್ಲಿಟ್ಟು, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಆಪರೇಷನ್ ಗಜ ಕಾರ್ಯಾಚರಣೆ ತಕ್ಷಣ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.ಸ್ಥಳಕ್ಕೆ ಡಿಸಿಎಫ್ ಭೇಟಿ ನೀಡಿ ಮನವಿ ಸ್ವೀಕರಿಸುವವರೆಗೂ ಪ್ರತಿಭಟನೆ ಕೈಬಿಡಲ್ಲ ಎಂದು ಪಟ್ಟು ಹಿಡಿದ ಪ್ರತಿಭಟ ನಾಕಾರರು ಬಳಿಕ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಡಿಸಿಎಫ್ ಬೋರಯ್ಯ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾತನಾಡಿ, ಬೆಂಗಳೂರಿನಲ್ಲಿ ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಲಿದ್ದು, ಅಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವವರೆಗೂ ಕಾಡಾನೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂದರು.-- ಬಾಕ್ಸ್...
ಶಾಶ್ವತ ಪರಿಹಾರಕ್ಕೆ ಆಗ್ರಹಮಲೆನಾಡಲ್ಲಿ ಈಗಾಗಲೇ ಕಾಡಾನೆ ಹಾಗೂ ಕಾಡೆಮ್ಮೆಗಳ ಹಾವಳಿಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬೆಳೆ ನಷ್ಟದ ಜತೆಗೆ ಜೀವಹಾನಿ ಸಂಭವಿಸುತ್ತಿದ್ದು, ಕೃಷಿಯನ್ನೇ ನಂಬಿದ ಕುಟುಂಬಗಳ ಬದುಕು ಅತಂತ್ರವಾಗಿದೆ. ಇಂತಹ ಸಂದರ್ಭದಲ್ಲಿ 50ಕ್ಕೂ ಅಧಿಕ ಕಾಡಾನೆಗಳನ್ನು ಏಕಕಾಲದಲ್ಲಿ ಮಲೆನಾಡಿನ ಮೂಲಕ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತ ರಿಸಲು ಮುಂದಾಗಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಬೇಲೂರು ಗಡಿ ದಾಟಿರುವ ಆನೆಗಳು ಈಗಾಗಲೇ ಮೂಡಿಗೆರೆ ತಾಲೂಕಿನ ಬೊಮ್ಮೇನಹಳ್ಳಿ, ಘಟ್ಟದಹಳ್ಳಿ ಹಾಗೂ ಕಾರ್ ಬೈಲ್ ಭಾಗದ ಎಸ್ಟೇಟ್ಗಳಲ್ಲಿ ಬೀಡುಬಿಟ್ಟು ತೋಟಗಳನ್ನು ಹಾನಿಗೊಳಿಸುತ್ತಿವೆ. ಕಾಫಿ ಮತ್ತು ಅಡಕೆ ಬೆಳೆಗಾರರ ನಷ್ಟಕ್ಕೆ ಯಾರು ಹೊಣೆ? ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರಿಗೆ ತೊಂದರೆಯಾದರೆ ಯಾರು ಪರಿಹಾರ ನೀಡುತ್ತಾರೆ ಎಂದು ಪ್ರಶ್ನಿಸಿದರು.ಮಾಜಿ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ ತಾಲೂಕಿನ ಜನರ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸ ಬಾರದು. ನಾಗರಹೊಳೆ ಅಥವಾ ಬಂಡೀಪುರ ಅರಣ್ಯಕ್ಕೆ ಆನೆಗಳನ್ನು ಸ್ಥಳಾಂತರಿಸುವ ನಿರ್ಧಾರ ಕೈಗೊಳ್ಳಬೇಕು. ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ನೀಡುವ ಮೂಲಕ ಜನರ ದಿಕ್ಕು ತಪ್ಪಿಸುವ ಬದಲು ಆಡಳಿತ ಪಕ್ಷದ ಶಾಸಕರಾಗಿ ಸರ್ಕಾರದ ಮೇಲೆ ಒತ್ತಡ ಹೇರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿತ್ತು ಎಂದು ಹೇಳಿದರು....
....
...
...
..ಬಾಕ್ಸ್...ಅರಣ್ಯ ಸಚಿವರ ರಾಜಿನಾಮೆಗೆ ಒತ್ತಾಯ:ಜಿಲ್ಲೆಯ ಕಾಂಗ್ರೆಸ್ ಶಾಸಕರು ಹಾಗೂ ಜನಪ್ರತಿನಿಧಿಗಳು ಸಮಸ್ಯೆ ಮುಂದಾಗದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮೂಡಿಗೆರೆ ಶಾಸಕರು ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು. ಕಾಡಾನೆ ಸಮಸ್ಯೆಗೆ ಕಾರಣವಾದ ಸಚಿವ ಶಿವಲಿಂಗೇಗೌಡ ಹಾಗೂ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.