ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ರಾಷ್ಟ್ರಧ್ವಜ ಹಿಡಿದು ಭಾರತ್ ಮಾತಾಕಿ ಜೈ, ದೇಶದ ಸೈನಿಕರಿಗೆ ಶುಭವಾಗಲಿ ಎಂದು ಜಯಘೋಷಣೆಗಳನ್ನು ಕೂಗುತ್ತಾ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಸಂಭ್ರಮಿಸಿದರು.
ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ, ವಿಶ್ರಾಂತ ಸೈನಿಕರಾದ ಸುಕುಮಾರ್, ಜಯರಾಮು, ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಮುಡಾ ಮಾಜಿ ಅಧ್ಯಕ್ಷ ಕೆ. ಶ್ರೀನಿವಾಸ್ ಪಟ್ಟಣದ ಪ್ರವಾಸಿ ಮಂದಿರದ ಆವರಣದಿಂದ ಆರಂಭವಾದ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು.ಪಟ್ಟಣದ ಮುಖ್ಯ ರಸ್ತೆಯಲ್ಲಿ ರಾಷ್ಟ್ರಧ್ವಜ ಎತ್ತಿ ಹಿಡಿದು ಜಯ ಘೋಷಣೆಗಳನ್ನು ಕೂಗುತ್ತಾ ತಿರಂಗ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಪಟ್ಟಣದ ಮೈಸೂರು, ಚನ್ನರಾಯಪಟ್ಟಣ ರಸ್ತೆಯ ಎಂ.ಕೆ.ಬೊಮ್ಮೆಗೌಡ ವೃತ್ತಕ್ಕೆ ಸಂಚಾರ ಮುಗಿಸಿ ಯಾತ್ರೆಯನ್ನು ಯಶಸ್ವಿಯಾಗಿ ಅಂತಿಮಗೊಳಿಸಿದರು.
ದೇಶವನ್ನು ಶತ್ರುಗಳಿಂದ ಕಾಪಾಡುತ್ತಿರುವ ಸೈನಿಕರಿಗೆ ನೈತಿಕವಾಗಿ ಬೆಂಬಲ ನೀಡಿ ದೇಶವನ್ನು ಗೌರವಿಸಿ ನಾವೆಲ್ಲಾ ಒಂದು ನಾವು ಭಾರತೀಯರು ಎಂಬ ಸಂದೇಶ ನೀಡಲು ತಿರಂಗ ಯಾತ್ರೆ ನಡೆಸಲಾಗಿದೆ ಎಂದು ಹೇಳಿದರು. ಈ ವೇಳೆ ವಿಶ್ರಾಂತ ಸೈನಿಕರಾದ ಸುಕುಮಾರ್, ಜಯರಾಮ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.