ಆಪರೇಷನ್‌ ಸಿಂದೂರ ಯಶಸ್ವಿ: ಉಡುಪಿ ಬಿಜೆಪಿ ಸಂಭ್ರಮಾಚರಣೆ

KannadaprabhaNewsNetwork | Published : May 9, 2025 12:41 AM
Follow Us

ಸಾರಾಂಶ

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಹಲ್ಗಾಮ್ ಹತ್ಯಾಕಾಂಡದ ಪ್ರತೀಕಾರಕ್ಕಾಗಿ ‘ಆಪರೇಷನ್ ಸಿಂಧೂರ’ ಮೂಲಕ ಭಾರತ ಕೈಗೊಂಡಿರುವ ಐತಿಹಾಸಿಕ ಕ್ರಮ ಅಭಿನಂದಿಸಿ ಸಂಭ್ರಮಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಪಹಲ್ಗಾಮ್ ನಲ್ಲಿ 26 ಅಮಾಯಕ ಭಾರತೀಯರ ಹತ್ಯಾಕಾಂಡ ನಡೆಸಿದ ಪಾಕಿಸ್ತಾನದ ಮೇಲೆ ಕೇಂದ್ರ ಸರ್ಕಾರದ ಏರ್‌ಸ್ಟ್ರೈಕ್‌ ಭಾರತೀಯರೆಲ್ಲರೂ ಪಕ್ಷಾತೀತ, ಜಾತ್ಯತೀತ, ಧರ್ಮಾತೀತವಾಗಿ ಸಂಭ್ರಮಿಸುವ ಅತ್ಯಂತ ಸಂತಸದ ಕ್ಷಣವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದ್ದಾರೆಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾರ್ಯತಂಡದ ಸಭೆಯ ಅಧ್ಯಕ್ಷತೆ ವಹಿಸಿ, ಪಹಲ್ಗಾಮ್ ಹತ್ಯಾಕಾಂಡದ ಪ್ರತೀಕಾರಕ್ಕಾಗಿ ‘ಆಪರೇಷನ್ ಸಿಂಧೂರ’ ಮೂಲಕ ಭಾರತ ಕೈಗೊಂಡಿರುವ ಐತಿಹಾಸಿಕ ಕ್ರಮವನ್ನು ಅಭಿನಂದಿಸಿ ಅವರು ಮಾತನಾಡಿದರು.ಇಂತಹ ದಿಟ್ಟ ನಡೆಗಳಿಂದಲೇ ನರೇಂದ್ರ ಮೋದಿ ಇಡೀ ಜಗತ್ತೇ ಮೆಚ್ಚುವಂತಹ ಪ್ರಧಾನಿ ಎಂದೆನಿಸಿಕೊಂಡಿದ್ದಾರೆ. ದೇಶವಾಸಿಗಳ ಮೇಲಿನ ಪ್ರೀತಿ, ಗೌರವ ಹಾಗೂ ಬದ್ಧತೆಯಿಂದ ಇಂತಹ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ. ಕಾರ್ಯಾಚರಣೆ ಯಶಸ್ವಿಗೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ದೇಶದ ಭದ್ರತೆ ಮತ್ತು ಸುರಕ್ಷತೆಗೆ ಕಟಿಬದ್ಧರಾಗಿ ಹೋರಾಡುವ ವೀರ ಯೋಧರಿಗೆ 140 ಕೋಟಿ ಭಾರತೀಯರ ಪ್ರಾರ್ಥನೆ, ಶುಭ ಹಾರೈಕೆ ಸದಾ ಶ್ರೀರಕ್ಷೆಯಾಗಲಿ ಎಂದು ಅವರು ಹೇಳಿದರು.ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಇದ್ದರು.ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಪೆರಣಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಯರಾಮ್ ಸಾಲ್ಯಾನ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಪಕ್ಷದ ಪ್ರಮುಖರಾದ ಶ್ರೀಕಾಂತ್ ನಾಯಕ್, ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರಿಯದರ್ಶಿನಿ ದೇವಾಡಿಗ, ಸಂಧ್ಯಾ ರಮೇಶ್, ನಳಿನಿ ಪ್ರದೀಪ್ ರಾವ್, ರಶ್ಮಿತಾ ಬಿ. ಶೆಟ್ಟಿ ಮುಂತಾದವರು ಇದ್ದರು.ಜಿಲ್ಲೆಯ ಎಲ್ಲಾ 6 ಮಂಡಲ ಕೇಂದ್ರಗಳಲ್ಲಿ ಸಿಹಿ ಹಂಚಿ ಕಾರ್ಯಾಚರಣೆಯ ಸಂಭ್ರಮಾಚರಣೆ ನಡೆಸಲಾಯಿತು.