ನನ್ನ ಜನಬಲ ಕಂಡು ಎದುರಾಳಿಗಳಿಗೆ ಸೋಲಿನ ಭೀತಿ: ಕೆ.ಎಸ್‌.ಈಶ್ವರಪ್ಪ

KannadaprabhaNewsNetwork |  
Published : Apr 15, 2024, 01:19 AM ISTUpdated : Apr 15, 2024, 10:23 AM IST
ಫೋಟೋ 14 ಎ, ಎನ್, ಪಿ 1 ಆನಂದಪುರದಲ್ಲಿ  ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಗ್ರಾಮಗಳಿಗೆ ತೆರಳಿ  ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದರು. | Kannada Prabha

ಸಾರಾಂಶ

ಆನಂದಪುರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಗ್ರಾಮಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದರು.

 ಆನಂದಪುರ :  ಜಾತಿ ಮತ ಧರ್ಮ ಭೇದ ಮರೆತು ಜನರು ಈ ಬಾರಿ ನನನ್ನು ಬೆಂಬಲಿಸುತ್ತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತವಾಗಿದೆ ಎಂದು ಸ್ವತಂತ್ರ ಅಭ್ಯರ್ಥಿ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಇಲ್ಲಿನ ಕೈರಾ ಗ್ರಾಮಕ್ಕೆ ಭಾನುವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ದಿನದಿಂದ ದಿನಕ್ಕೆ ನನ್ನ ಬೆಂಬಲಿಸುತ್ತಿರುವವ ಸಂಖ್ಯೆ ಹೆಚ್ಚುತ್ತಲೇ ಇದೆ. ಬರುತ್ತಿರುವ ಜನಸಾಗರವನ್ನು ನೋಡಿ ಎರಡು ಪಕ್ಷದ ಅಭ್ಯರ್ಥಿಗಳಿಗೆ ಸೋಲಿನ ಭೀತಿ ಕಾಡುತ್ತಿದೆ ಎಂದರು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅನೇಕ ನಾಯಕರು ಈಶ್ವರಪ್ಪನವರನ್ನು ಬೆಂಬಲಿಸಲಿಸುವುದಾಗಿ ದೂರವಾಣಿ ಮೂಲಕ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಬಂದಂತಹ ಸಾವಿರಾರು ಜನರು ಸ್ವಯಂ ಪ್ರೇರಿತವಾಗಿ ಬಂದಿದ್ದ ಜನಸಾಗರವನ್ನು ನೋಡಿ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹತಾಶ ಗೊಂಡಿದ್ದಾರೆ. ಯಾರು ಏನೇ ಹೇಳಿದರೂ ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಅದು ಮುಗಿದ ಹೋದ ಕಥೆ ಎಂದು ಹೇಳಿದರು.

ಜಗದೀಶ್ ಶೆಟ್ಟರ್ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿ ವಿಧಾನಸಭೆಯ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಸ್ಪರ್ಧೆ ಮಾಡಿ ಸೋತಿದ್ದರು. ಈಗ ಅವರನ್ನು ಮತ್ತೆ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡು ಲೋಕಸಭಾ ಚುನಾವಣೆಗೆ ಟಿಕೆಟ್‌ ಕೊಟ್ಟಿದ್ದಾರೆ. ನಾನು ಯಾವತ್ತು ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋಗಿಲ್ಲ. ನನ್ನ ಜೀವನದ ಕೊನೆಯ ಕ್ಷಣದವರೆಗೂ ಬಿಜೆಪಿಯಲ್ಲೇ ಇರುತ್ತೇನೆ ಎಂದರು.

ಈ ಸಂದರ್ಭದಲ್ಲಿ ಹೇಮಾ ರವಿ, ಎಸ್. ವಿ.ಕೃಷ್ಣಮೂರ್ತಿ, ಸತೀಶ್ ಗೌಡ, ರಕ್ಷಿತಾ, ಅನಿಲ್ ಕುಮಾರ್, ಸುರೇಶ್, ವೆಂಕಟೇಶ್, ರಾಕೇಶ್, ಅಣ್ಣಪ್ಪ ಸೇರಿದಂತೆ ಅನೇಕರು ಇದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ