ಕಂಪ್ಯೂಟರ್ ಕಲಿಕೆಯಿಂದ ಅವಕಾಶಗಳು ಹೆಚ್ಚು: ಚಿನ್ನಸ್ವಾಮಿ

KannadaprabhaNewsNetwork |  
Published : May 14, 2024, 01:09 AM IST
ಉನ್ನತ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಕಲಿಕೆಯಿಂದ  ಉದ್ಯೋಗಾವಕಾಶಗಳು ಹೆಚ್ಚು : ಚಿನ್ನಸ್ವಾಮಿ  | Kannada Prabha

ಸಾರಾಂಶ

ಶಿಕ್ಷಣದ ಜೊತೆಗೆ ಕಂಪ್ಯೂಟರ್ ತರಬೇತಿ ಪಡೆದುಕೊಂಡರೆ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗವನ್ನು ಪಡೆದುಕೊಳ್ಳುವುದು ಸುಲಭವಾಗುತ್ತದೆ ಎಂದು ಜೆಎಸ್‌ಎಸ್ ರುಡ್‌ಸೆಟ್ ಸಂಸ್ಥೆಯ ನಿವೃತ್ತ ಸಂಯೋಜಕ ಹಾಗೂ ಸಂಪನ್ಮೂಲ ವ್ಯಕ್ತಿ ಚಿನ್ನಸ್ವಾಮಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ ಶಿಕ್ಷಣದ ಜೊತೆಗೆ ಕಂಪ್ಯೂಟರ್ ತರಬೇತಿ ಪಡೆದುಕೊಂಡರೆ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗವನ್ನು ಪಡೆದುಕೊಳ್ಳುವುದು ಸುಲಭವಾಗುತ್ತದೆ ಎಂದು ಜೆಎಸ್‌ಎಸ್ ರುಡ್‌ಸೆಟ್ ಸಂಸ್ಥೆಯ ನಿವೃತ್ತ ಸಂಯೋಜಕ ಹಾಗೂ ಸಂಪನ್ಮೂಲ ವ್ಯಕ್ತಿ ಚಿನ್ನಸ್ವಾಮಿ ತಿಳಿಸಿದರು.

ನಗರದ ವಾಸವಿ ಮಹಲ್‌ನಲ್ಲಿ ದೇವಾಂಗ ಬೀದಿಯಲ್ಲಿರುವ ಶ್ರೀ ಕಂಪ್ಯೂಟರ್ಸ್‌ನ ೧೧ನೇ ವಾರ್ಷಿಕೋತ್ಸವ ಹಾಗೂ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಜಿಲ್ಲಾ ಕೇಂದ್ರದಲ್ಲಿ ಕಳೆದ ೧೦ ವರ್ಷಗಳಿಂದ ಯಶಸ್ವಿಯಾಗಿ ಕಂಪ್ಯೂಟರ್ ತರಬೇತಿ ನೀಡಿ ಸಾವಿರಾರು ಮಕ್ಕಳಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿಕೊಂಡಿರುವ ಸಂಸ್ಥೆಯು ಬಹಳ ಹೆಮ್ಮರವಾಗಿ ಬೆಳೆಯಲಿ. ಇನ್ನು ಹೆಚ್ಚಿನ ಮಕ್ಕಳು ಕಂಪ್ಯೂಟರ್ ಕಲಿತು ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಅವಕಾಶ ಸಂಸ್ಥೆಯಿಂದ ಆಗಲಿ ಎಂದು ಶುಭ ಕೋರಿದರು. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಮತ್ತು ಡಿಜಿಟಲಿಕರಣದಿಂದಾಗಿ ಕಂಪ್ಯೂಟರ್ ಕಲಿಕೆಗೆ ಹೆಚ್ಚಿನ ಅವಕಾಶಗಳಿವೆ. ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲಿ ಕಂಪ್ಯೂಟರ್ ಪ್ರಥಮ ಹಂತದ ಜ್ಞಾನವಾಗಿದೆ. ಶಾಲಾ ಹಂತಗಳಲ್ಲಿಯೇ ಕಂಪ್ಯೂಟರ್ ಕಲಿಕಗೆ ಹೆಚ್ಚಿನ ಅದ್ಯತೆ ನೀಡಲಾಗಿತ್ತಿದೆ. ಗ್ರಾಮಾಂತರ ಪ್ರದೇಶ ಮಕ್ಕಳು ಎಸ್ಸೆಸ್ಸೆಲ್ಸಿ, ಪಿಯುಸಿ ಪೂರ್ಣವಾಗುತ್ತಿದ್ದಂತೆ ಪದವಿ ಜೊತೆಗೆ ಇಂಥಹ ಸಂಸ್ಥೆಗಳಲ್ಲಿ ಕಂಪ್ಯೂಟರ್ ತರಬೇತಿ ಪಡೆದುಕೊಂಡು ಕೌಶಲ್ಯಾಭಿವೃದ್ದಿ ಪಡೆದು ಅರ್ಜಿ ಸಲ್ಲಿಸಿದರೆ ಕೆಲಸ ಗ್ಯಾರಂಟಿಯಾಗಲಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿರುವ ಹೆಣ್ಣು ಮಕ್ಕಳು ಸ್ವಾವಲಾಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು. ಉದ್ಯೋಗಂ ಪುರುಷ ಲಕ್ಷಣಂ ಎಂಬ ಕಾಲ ಹೋಗಿದೆ. ಹೆಣ್ಣು, ಗಂಡು ಬೇಧವಿಲ್ಲದೇ ಎಲ್ಲರು ಸಮಾನವಾಗಿ ವಿದ್ಯೆ, ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ. ಇಬ್ಬರು ಸಹ ಎಲ್ಲಾ ರಂಗದಲ್ಲಿ ಪ್ರಾಭಲ್ಯ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಮಕ್ಕಳು ಸ್ವಂತ ಉದ್ಯೊಗ ಹಾಗೂ ಕಂಪನಿಗಳಲ್ಲಿ ಕೆಲಸ ಪಡೆದುಕೊಳ್ಳುವಷ್ಟು ಮಟ್ಟಕ್ಕೆ ಕಂಪ್ಯೂಟರ್ ಹಾಗೂ ಆಂಗ್ಲ ಭಾಷೆಯ ಪರಿಣಿತಿಯನ್ನು ಹೊಂದಿರಬೇಕು. ಇದನ್ನು ತಾವೆಲ್ಲರು ಸಾಧಿಸಿಕೊಂಡು ಅಭಿವೃದ್ದಿಯತ್ತ ಮುನ್ನಡೆಯಬೇಕು ಎಂದು ಚಿನ್ನಸ್ವಾಮಿ ವೃತ್ತಿ ಜೀವನ ಹಾಗೂ ಬದುಕುವ ಅತ್ಮಸ್ಥೈಯ ಕುರಿತು ಮಕ್ಕಳಿಗೆ ತಿಳಿಸಿದರು. ಶ್ರೀ ಕಂಪ್ಯೂಟರ್ ಸಂಸ್ಥೆಯ ವ್ಯವಸ್ಥಾಪಕ ಬಿ.ವೆಂಕಟೇಶ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ೧೦ ವರ್ಷಗಳಿಂದ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಕಂಪ್ಯೂಟರ್ ತರಬೇತಿ ನೀಡುವ ಮೂಲಕ ಯುವ ಜನಾಂಗದ ಸಬಲೀಕರಣಕ್ಕಾಗಿ ಶ್ರಮಿಸಲಾಗುತ್ತಿದೆ. ಸರ್ಕಾರದ ಯಾವುದೇ ನೆರವು ಪಡೆದುಕೊಳ್ಳದೇ ಸ್ವಂತಿಕೆ ಹೊಂದಿ ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡಬೇಕೆಂಬ ಆಶಯಕ್ಕೆ ಎಲ್ಲರ ಸಹಕಾರ ಮುಖ್ಯವಾಗಿದೆ. ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿಯನ್ನು ಪಡೆದು, ಸ್ವಂತ ಉದ್ಯೋಗ ಹಾಗೂ ಕಂಪನಿಗಳಿಗೆ ಸೇರಿರುವ ಮೂಲಕ ಜೀವನವನ್ನು ರೂಪಿಸಿಕೊಳ್ಳಲು ಮುಂದಾಗಿದ್ದಾರೆ. ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಿರಲಿ ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಕಂಪ್ಯೂಟರ್ಸ್‌ ಸಂಚಾಲಕರಾದ ರಾಜಲಕ್ಷ್ಮಿ, ನವೀನ್, ಯಶಸ್ವಿನಿ, ಶಿಕ್ಷಕರಾದ ಶೃತಿ, ಮೌನ, ಹಾಗೂ ಶಿಬಿರಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ