ಉನ್ನತ ಆಲೋಚನೆಗಳೊಂದಿಗೆ ಅವಕಾಶ ಸೃಷ್ಟಿ ಮಾಡಿಕೊಳ್ಳಬೇಕು: ಡಾ.ಕೆ.ಜಿ.ಕಾಂತರಾಜ್

KannadaprabhaNewsNetwork |  
Published : May 10, 2025, 01:03 AM IST
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಭೆ | Kannada Prabha

ಸಾರಾಂಶ

ತರೀಕೆರೆ, ವಿದ್ಯಾರ್ಥಿಗಳು ಉನ್ನತ ಆಲೋಚನೆಗಳೊಂದಿಗೆ ಅತ್ಯುತ್ತಮ ಅವಕಾಶಗಳನ್ನು ಸೃಷ್ಠಿಮಾಡಿಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ತಿಳಿಸಿದರು.

ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಭೆ

ಕನ್ನಡಪ್ರಭ ವಾರ್ತೆ, ತರೀಕೆರೆ

ವಿದ್ಯಾರ್ಥಿಗಳು ಉನ್ನತ ಆಲೋಚನೆಗಳೊಂದಿಗೆ ಅತ್ಯುತ್ತಮ ಅವಕಾಶಗಳನ್ನು ಸೃಷ್ಠಿಮಾಡಿಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ತಿಳಿಸಿದರು.

ಶುಕ್ರವಾರ ಉಪವಿಭಾಗಾಧಿಕಾರಿಗಳ ಕಚೇರಿ, ತಾಲೂಕು ಅಡಳಿತ ತರೀಕೆರೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ತರೀಕೆರೆ ಶಾಖೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾಶ್ರಯದಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಭಿನಂದನಾ ಸಮಾರಂಭಕ್ಕೆ ಎಲ್ಲರೂ ಸಹಕರಿಸಿದ್ದಾರೆ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತರೀಕೆರೆ ತಾಲೂಕು ಉತ್ತಮ ಫಲಿತಾಂಶ ಪಡೆಯಲು ಕ್ಷೇತ್ರ ಶಿಕ್ಷಣಾಧಿಕಾರಿ ಕಾರಣರಾಗಿದ್ದಾರೆ. ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿಗಳನ್ನು ತೆಗೆದು ಕೊಂಡು ಉತ್ತಮ ಮಾರ್ಗದರ್ಶನ ನೀಡಲಾಗಿದೆ. ಅದರಲ್ಲೂ ಸರ್ಕಾರಿ ಶಾಲೆಗಳಿಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ ಎಂದರು.

ಉತ್ತಮ ಫಲಿತಾಂಶ ದೊರಕಿರುವುದು ಎಲ್ಲರಿಗೂ ಸಂತೋಷ ತಂದಿದೆ. ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ.ಮತ್ತು ಪಿಯುಸಿ ಬಹಳ ಮುಖ್ಯವಾದ ಹಂತವಾಗಿದೆ. ಪೋಷಕರು ಮಕ್ಕಳಿಗೆ ಈ ಹಂತದಲ್ಲಿ ಪ್ರೋತ್ಸಾಹ ಕೊಡಬೇಕು. ಅವರಲ್ಲಿರುವ ಪ್ರತಿಭೆ ಗುರುತಿಸಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಆರ್.ಅನಂತಪ್ಪ ಮಾತನಾಡಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ. ಬಹಳ ಮುಖ್ಯವಾದ ಘಟ್ಟ. ವಿದ್ಯಾರ್ಥಿಗಳು ಮುಂದೆಯೂ ಇದೇ ರೀತಿ ಮುಂದುವರಿಯ ಬೇಕು. ಎಲ್ಲ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಯುವಜನರು ಭವಿಷ್ಯ ರೂಪಿಸಿಕೊಳ್ಳಬೇಕು. ಇಂದಿನ ವಿದ್ಯಾರ್ಥಿಗಳೇ ದೇಶದ ಆಸ್ತಿ ಎಂದು ಹೇಳಿದರು.ತಹಸೀಲ್ದಾರ್ ವಿಶ್ವಜೀತ ಮೇಹತಾ ಮಾತನಾಡಿ ವಿದ್ಯಾರ್ಥಿಗಳಿಗೆ ತಂದೆ ತಾಯಿ ಮತ್ತು ಶಿಕ್ಷಕರು ಸ್ಟೂರ್ತಿ, ವಿದ್ಯಾರ್ಥಿಗಳು ಬಹಳ ಕಷ್ಟಪಟ್ಟು ಓದಿ ಅತ್ಯಂತ ಹೆಚ್ಚಿನ ಅಂಕ ಗಳಿಸಿರುವುದು ಎಲ್ಲರಿಗೂ ಸಂತೋಷ ತಂದಿದೆ ಎಂದುತಿಳಿಸಿದರು.ಸಾರ್ವಜನಿಕ ಆಸ್ಪತ್ರೆ ಅಡಳಿತಾಧಿಕಾರಿ ಡಾ.ಟಿ.ಎಂ.ದೇವರಾಜ್ ಮಾತನಾಡಿ ವಿದ್ಯಾರ್ಥಿಗಳಿಗೆ ದೊಡ್ಡ ಯೋಜನೆಗಳು ಇರಬೇಕು. ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಗುರಿ ತಲುಪಬಹುದು ಎಂದು ಸಲಹೆ ಮಾಡಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ವಿದ್ಯಾರ್ಥಿಗಳೀಗೆ ಶುಭಾಷಯ ಕೋರಿ ಮಾತನಾಡಿ ಮೌಲ್ಯಾಧಾರಿತ ಶಿಕ್ಷಣವನ್ನು ರೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಡಾ.ರಾಜಪ್ಪ ದಳವಾಯಿ ಅವರ ಪತ್ನಿ ದಿ.ಬಿ.ಸಿ.ಮಂಜುಳಾ ಅವರ ಸ್ಮರಣೆಯಲ್ಲಿ ಪ್ರತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮ್ ಎಚ್.ಎ. ಮಾತನಾಡಿ ಸರ್ಕಾರಿ ನೌಕರರ ಸಂಘ ಸಮಾಜಮುಖಿ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಶಿಕ್ಷಣ ಮಕ್ಕಳ ಆಸ್ತಿ, ಜ್ಞಾನ ಸಂಪಾದನೆ ಮಾಡಬೇಕು. ಸತತ ಪರಿಶ್ರಮದಿಂದ ತಾಲೂಕಿಗೆ ಉತ್ತಮ ಫಲಿತಾಂಶ ದೊರಕಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಅತ್ಯಂತ ಹೆಚ್ಚಿನ ಅಂಕ ಗಲಿಸಿದ ವಿದ್ಯಾರ್ಥಿಗಳಾದ ನಮನಾ ಕೆ. ಸುದೀಕ್ಷಾ ಸಿ. ಸುಜಯ್ ಜಿ.ವರ್ಣೆಕರ್, ರಕ್ಷಿತಾ ಕೆ. ಪೂಜಿತಾ ಕಶ್ಯಪ್ ಅವರನ್ನು ಅಭಿನಂದಿಸಿ, ಗೌರವಿಸಲಾಯಿತು.ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಎಂ.ಬಿ.ರಾಮಚಂದ್ರಪ್ಪ, ಗ್ರೇಡ್-2 ತಹಸೀಲ್ದಾರ್ ನೂರುಲ್ಲಾ ಉದಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರಣೇಶ್, ಡಾ.ಗೋವಿಂದಪ್ಪ. ಶಿರಸ್ತೆದಾರ್ ಕೃಷ್ಣಮೂರ್ತಿ, ಕನ್ನಡಶ್ರೀ ಬಿ.ಎಸ್. ಭಗವಾನ್, ಉಪನ್ಯಾಸಕ ದಾದಾಪೀರ್, ಸುನಿತಾ ಕಿರಣ್ ಮತ್ತಿತರರು ಕಾರ್ಯಕ್ರಮದಲ್ಲಿ ಬಾಗವಹಿಸಿದ್ದರು.9ಕೆಟಿಆರ್.ಕೆ.12ಃ

ತರೀಕೆರೆಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್, ತಹಸೀಲ್ದಾರ್ ವಿಶ್ವಜೀತ್ ಮೇಹತಾ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಚ್.ಎ. ಸ.ನೌ.ಸಂಘದ ನಿರ್ದೇಶಕ ಎಂ.ಬಿ.ರಾಮಚಂದ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರಣೇಶ್ ಮತ್ತಿತರರು ಇದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ