ಸುಜ್ಞಾನದಿಂದ ಶೇ. 100 ವಿದ್ಯಾರ್ಥಿವೇತನದ ಅವಕಾಶ

KannadaprabhaNewsNetwork |  
Published : Nov 23, 2026, 02:45 AM IST
ಸುದ್ದಿಗೋಷ್ಠಿಯಲ್ಲಿ ಡಾ. ರಮೇಶ್ ಶೆಟ್ಟಿ ಮತ್ತು ಭರತ್ ಶೆಟ್ಟಿ ಮಾತನಾಡಿದರು. | Kannada Prabha

ಸಾರಾಂಶ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಆರ್ಥಿಕ ನೆರವಿನ ಬಲ ನೀಡುವ ಉದ್ದೇಶದಿಂದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಡಿ. 6ರಂದು ವಿದ್ಯಾರ್ಥಿವೇತನ ಪರೀಕ್ಷೆ ಆಯೋಜಿಸಿದೆ. ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಪಿಯುಸಿ ಶಿಕ್ಷಣಕ್ಕೆ ಶೇ. 100ರಷ್ಟು ವಿದ್ಯಾರ್ಥಿವೇತನ ಪಡೆಯುವ ಅವಕಾಶವಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ತಿಳಿಸಿದರು.

ಕುಂದಾಪುರ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಆರ್ಥಿಕ ನೆರವಿನ ಬಲ ನೀಡುವ ಉದ್ದೇಶದಿಂದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಡಿ. 6ರಂದು ವಿದ್ಯಾರ್ಥಿವೇತನ ಪರೀಕ್ಷೆ ಆಯೋಜಿಸಿದೆ. ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಪಿಯುಸಿ ಶಿಕ್ಷಣಕ್ಕೆ ಶೇ. 100ರಷ್ಟು ವಿದ್ಯಾರ್ಥಿವೇತನ ಪಡೆಯುವ ಅವಕಾಶವಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳು ಸೇರಿದಂತೆ ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಪಠ್ಯಕ್ರಮದ ವಿದ್ಯಾರ್ಥಿಗಳೂ ಪರೀಕ್ಷೆಯಲ್ಲಿ ಭಾಗವಹಿಸಬಹುದು ಎಂದರು. 5 ಕೋಟಿ ರು. ವಿದ್ಯಾರ್ಥಿವೇತನ: ಹಲವು ವರ್ಷಗಳಿಂದ ವಿದ್ಯಾರ್ಥಿವೇತನ ಪರೀಕ್ಷೆ ಆಯೋಜಿಸುತ್ತಿದ್ದು, ಕಳೆದ ವರ್ಷ ಸುಮಾರು 5 ಕೋಟಿ ರು. ವಿದ್ಯಾರ್ಥಿವೇತನ ವಿತರಿಸಲಾಗಿದೆ. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಮೊತ್ತದ ವಿದ್ಯಾರ್ಥಿವೇತನ ನೀಡುವ ಗುರಿ ಹೊಂದಲಾಗಿದೆ. ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಪಿಯುಸಿ ಶುಲ್ಕದಲ್ಲಿ ಶೇ. 100, ಶೇ. 75, ಶೇ. 50 ಹಾಗೂ ಶೇ. 25ರಷ್ಟು ವಿದ್ಯಾರ್ಥಿವೇತನ ಪಡೆಯಲು ಅವಕಾಶವಿದೆ ಎಂದರು.

ಡಿ. 6ರ ಬೆಳಗ್ಗೆ 10 ಗಂಟೆಗೆ ಯಡಾಡಿ–ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿರುವ ಸುಜ್ಞಾನ ಪಿಯು ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ. ಆಯಾ ಪಠ್ಯಕ್ರಮಕ್ಕೆ ಅನುಗುಣವಾಗಿ 100 ಅಂಕಗಳ ಪರೀಕ್ಷೆ ನಡೆಯಲಿದ್ದು, ಗಣಿತ, ವಿಜ್ಞಾನ, ಇಂಗ್ಲಿಷ್ ಹಾಗೂ ಸಮಾಜ ವಿಜ್ಞಾನ ವಿಷಯಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಆಧಾರ್ ಕಾರ್ಡ್, ಪೆನ್ನು ಹಾಗೂ ಪೆನ್ಸಿಲ್ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ 6366976744, 9964291755 ಅಥವಾ 8217527362 ಸಂಪರ್ಕಿಸಬಹುದು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಯಲ್ಲಿ ಭಾಗವಹಿಸುವಂತೆ ಡಾ. ರಮೇಶ್ ಶೆಟ್ಟಿ ಮನವಿ ಮಾಡಿದರು. ಸಂಸ್ಥೆಯ ಗಮನಾರ್ಹ ಸಾಧನೆ: 2025-26ನೇ ನೀಟ್ ಪರೀಕ್ಷೆಯಲ್ಲಿ ಸಮ್ಮೇದ್ ಪ್ಯಾರಿಸ್ ಅಖಿಲ ಭಾರತ ಮಟ್ಟದಲ್ಲಿ 2135ನೇ ರ‍್ಯಾಂಕ್ (ವರ್ಗವಾರು) ಪಡೆದು ಬ್ರಹ್ಮಾವರ, ಕುಂದಾಪುರ, ಬೈಂದೂರು ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಸಂಸ್ಥೆಯ ಗಮನಾರ್ಹ ಸಾಧನೆಯಾಗಿದೆ. ಧನುಷ್ ದೇವಾಡಿಗ, ಜೈರಾಜ್, ರುಮೇಜ್ ಶೇಖ್, ಇಂಚರಾ, ಅಲಿಜಾ ಕರಾಮತುಲ್ಲಾ ಹಾಗೂ ಅರ್ಜುನ್ ಜಿ. ಶೆಟ್ಟಿ ಸೇರಿದಂತೆ ಹಲವು ವಿದ್ಯಾರ್ಥಿಗಳು ಸರ್ಕಾರಿ ಕೋಟಾದಡಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದಾರೆ ಎಂದರು.15 ಎಕ್ರೆ ವಿಶಾಲ ಕ್ಯಾಂಪಸ್: ಟ್ರಸ್ಟ್ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, 15 ಎಕರೆ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಸುಜ್ಞಾನ ಪಿಯು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕಾರ್ಯ ನಿರ್ವಹಿಸುತ್ತಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿ ಅತ್ಯಾಧುನಿಕ ವಸತಿ ನಿಲಯವಿದೆ. 24×7 ರೆಸಿಡೆನ್ಷಿಯಲ್ ಟೀಚರ್ ವ್ಯವಸ್ಥೆ ಇಲ್ಲಿನ ವೈಶಿಷ್ಟ್ಯವಾಗಿದ್ದು, ವಿದ್ಯಾರ್ಥಿಗಳಿಗೆ ಅಧ್ಯಯನದ ವೇಳೆ ಎದುರಾಗುವ ಸಂದೇಹಗಳನ್ನು ಪರಿಹರಿಸಲು ಶಿಕ್ಷಕರು ವಸತಿ ನಿಲಯದಲ್ಲಿಯೇ ಲಭ್ಯವಿರುತ್ತಾರೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರದಲ್ಲಿ ಆಸರೆಯಾದ ಕಳಸಕೊಪ್ಪ ಕೆರೆ
ಬೆಳಗಾವಿಯಲ್ಲಿ ಮಟಕಾ ದಂಧೆ ಮೇಲೆ ಪೊಲೀಸರ ಸರಣಿ ದಾಳಿ