ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ಅವಕಾಶ

KannadaprabhaNewsNetwork |  
Published : Aug 08, 2025, 02:00 AM IST
ಮಡಿಕೇರಿ  | Kannada Prabha

ಸಾರಾಂಶ

ದೇಶಾದಾದ್ಯಂತ ಅ. 7ರವರೆಗೆ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣಗಳನ್ನು ಮಧ್ಯಸ್ಥಿಕೆಗಾರಿಕೆಯ ಮೂಲಕ ಇತ್ಯರ್ಥಪಡಿಸಲು ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು ದೇಶಾದಾದ್ಯಂತ ಅ.7 ರವರೆಗೆ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ’ ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಅದರಂತೆ ಜಿಲ್ಲೆಯ ನ್ಯಾಯಾಲಯದಲ್ಲಿರುವ ರಾಜಿಯಾಗುವಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುತ್ತಿದ್ದು, ಕಕ್ಷಿದಾರರು ಈ 90 ದಿನಗಳ ವಿಶೇಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ತಿಳಿಸಿದ್ದಾರೆ.ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ 90 ದಿನಗಳ ಡ್ರೈವ್‌ ಅನ್ನು ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಮೋಟಾರು ಅಪಘಾತ ನ್ಯಾಯಾಧೀಕರಣ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ, ಸೇವಾ ಪ್ರಕರಣಗಳು, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕ ವ್ಯಾಜ್ಯ ಪ್ರಕರಣಗಳು, ಡಿಆರ್‌ಟಿ ಪ್ರಕರಣಗಳು, ಪಾಲುಗಾರಿಕೆ ಪ್ರಕರಣಗಳು, ಭೂಸ್ವಾಧೀನ ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ವಿಶೇಷ ಅಭಿಯಾನ ಸಂದರ್ಭದಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸುವರ್ಣ ಅವಕಾಶವಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದ್ದಲ್ಲಿ ನ್ಯಾಯಾಲಯದಿಂದ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ಸೂಚಿಸಿಕೊಂಡಲ್ಲಿ ಅಂತಹ ಪ್ರಕರಣಗಳಲ್ಲಿ ಉಭಯ ಪಕ್ಷಗಾರರನ್ನು ಕರೆಸಿಕೊಂಡು ಜಿಲ್ಲಾ ನ್ಯಾಯಾಲಯದ ಸಮುಚ್ಚಯದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ನ್ಯಾಯಾಲಯದಲ್ಲಿರುವ ಮಧ್ಯಸ್ಥಿಕೆ ಕೇಂದ್ರದಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಬಹುದು.ಹಾಗೆಯೇ ಪ್ರಕರಣಗಳು ಉಚ್ಛ ನ್ಯಾಯಾಲಯದಲ್ಲಿ ಬಾಕಿ ಇದ್ದಲ್ಲಿ ಬೆಂಗಳೂರು, ಧಾರವಾಡ, ಕಲ್ಬುರ್ಗಿ ಉಚ್ಛನ್ಯಾಯಾಲಯದಲ್ಲಿ ಮಧ್ಯಸ್ಥಿಕೆ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ