ಗಜೇಂದ್ರಗಡ: ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡುವುದು ಹೈಕಮಾಂಡ್‌ಗೆ ಬಿಟ್ಟದ್ದು. ಸಂಪುಟ ವಿಸ್ತರಣೆ ಯಾವಾಗ ಮಾಡ್ತಾರೆ, ಯಾರನ್ನು ಸಚಿವರನ್ನಾಗಿ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
೨೦೨೮ಕ್ಕೆ ಸತೀಶ್ ಜಾರಕಿಹೊಳಿ ಸಿಎಂ ಆಗುತ್ತಾರೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಮಗಳು ಹೇಳಿದರೆ, ಅದು ರಾಜ್ಯದ ಅಭಿಪ್ರಾಯವಲ್ಲ. ಮುಂದೆ ಸರ್ಕಾರ ಅಧಿಕಾರಕ್ಕೆ ಬರಲಿ. ಆಗ ಚರ್ಚೆ ಮಾಡೋಣ. ಎಲ್ಲರಿಗೂ ಸಿಎಂ ಆಗುವ ಆಸೆ ಇರುತ್ತದೆ. ಕಾಯ್ದು ನೋಡೋಣ ಎಂದರು. ಕ್ರೀಡಾಂಗಣದ ಜಾಗದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ವಿರೋಧ
ಲಕ್ಷ್ಮೇಶ್ವರ: ಪಟ್ಟಣದ ಪುರಸಭೆ ಉಮಾ ವಿದ್ಯಾಲಯದ ಆಟದ ಮೈದಾನವನ್ನು ಉಳಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಕ್ರೀಡಾಪಟುಗಳು ಹಾಗೂ ಕ್ರೀಡಾಪ್ರೇಮಿಗಳು ಆಗ್ರಹಿಸಿದರು.ಮೈದಾನದ ಪಕ್ಕದಲ್ಲಿಯೇ ಕಂದಾಯ ನಿಲಾಖೆ ಪ್ರಜಾಸೌಧ ನಿರ್ಮಿಸಲು ಮುಂದಾಗಿದ್ದನ್ನು ಗಮನಿಸಿದ ಕ್ರೀಡಾಪಟುಗಳು ಮೈದಾನಕ್ಕೆ ಆಗಮಿಸಿ ತಕರಾರು ತೆಗೆದು ಮೈದಾನದಲ್ಲಿ ಯಾವುದೇ ಕಟ್ಟಡ ನಿರ್ಮಿಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದು ಮೈದಾನದಲ್ಲಿಯೇ ಕುಳಿತು ಘೋಷಣೆ ಕೂಗಿದರು.ವಿಷಯ ತಿಳಿಯುತ್ತಲೇ ತಹಸೀಲ್ದಾರ್ ಧನಂಜಯ ಎಂ. ಅವರು ಸ್ಥಳಕ್ಕೆ ಆಗಮಿಸಿ ಕ್ರೀಡಾಪಟುಗಳೊಂದಿಗೆ ಮಾತನಾಡಿ, ಆಟದ ಮೈದಾನಕ್ಕೆ ಮೀಸಲಾದ ಜಾಗದಲ್ಲಿ ಇಲಾಖೆ ಯಾವುದೇ ಕಟ್ಟಡ ನಿರ್ಮಿಸುತ್ತಿಲ್ಲ. ಜಾಗವನ್ನು ಸರ್ವೆ ಮಾಡಿದ ನಂತರವಷ್ಟೆ ಪ್ರಜಾಸೌಧ ನಿರ್ಮಿಸಲಾಗುತ್ತಿದೆ. ಇಲ್ಲಿ ಪ್ರಜಾಸೌಧ ನಿರ್ಮಾಣ ಆಗುವುದರಿಂದ ತಾಲೂಕಿನ ಜನತೆಗೆ ಸಾಕಷ್ಟು ಅನುಕೂಲ ಆಗಲಿದೆ ಎಂದರು.ಈ ವೇಳೆ ಶರಣು ಗೋಡಿ, ಸೋಮಣ್ಣ ಉಪನಾಳ, ಬಸಣ್ಣ ಬೆಂಡಿಗೇರಿ ಮಾತನಾಡಿ, ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣ ಆಗುತ್ತಿರುವುದು ಉತ್ತಮ ಬೆಳೆವಣಿಗೆ. ಆದರೆ ಅದೇ ನಮ್ಮ ನೆಪದಲ್ಲಿ ಉಮಾ ವಿದ್ಯಾಲಯದ ಕ್ರೀಡಾಂಗಣದ ಜಾಗೆ ಒತ್ತುವರಿ ಆಗಬಾರದು. ಕ್ರೀಡಾಂಗಣದಲ್ಲಿ ನೂರಾರು ಕ್ರೀಡಾಪಟುಗಳು ಸಾಧನೆ ಮಾಡಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಕ್ರೀಡಾಂಗಣಕ್ಕೆ ಮೀಸಲಿರುವ ಜಾಗದಲ್ಲಿ ಕಟ್ಟಡ ನಿರ್ಮಿಸಬಾರದು ಎಂದು ಆಗ್ರಹಿಸಿದರು. ಈ ವೇಳೆ ಇಸ್ಮಾಯಿಲ್ ಆಡೂರ, ಫಕ್ಕೀರಪ್ಪ ಭಜಕ್ಕನವರ, ಮೋಹನ ನಂದೆಣ್ಣವರ, ಚಂದ್ರು ಹಂಪಣ್ಣವರ ಮತ್ತಿತರರು ಇದ್ದರು.