ಅ. 22ರ ವರೆಗೆ ಮತದಾರ ಚೀಟಿ ತಿದ್ದುಪಡಿಗೆ ಅವಕಾಶ

KannadaprabhaNewsNetwork |  
Published : Sep 06, 2026, 02:45 AM IST
ಫೋಟೋ : ೪ಕೆಎಂಟಿ_ಎಸ್‌ಇಪಿ_ಕೆಪಿ೩ : ಪಿ.ಶ್ರವಣಕುಮಾರ  | Kannada Prabha

ಸಾರಾಂಶ

ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಮಾಹಿತಿ ಸರಿಯಾಗಿರದ ೮೩೬೦ ಮತದಾರರಿಗೆ ಈಗಾಗಲೇ ನೋಟಿಸ್ ನೀಡಿ ಸಮರ್ಪಕ ಮಾಹಿತಿ ಪಡೆಯಲಾಗುತ್ತಿದೆ. ಉಳಿದಂತೆ ಮತದಾರರ ಮಾಹಿತಿ ತಿದ್ದುಪಡಿಗಾಗಿ ಅ. ೨೨ರ ವರೆಗೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಪಿ. ಶ್ರವಣಕುಮಾರ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕುಮಟಾ

ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಮಾಹಿತಿ ಸರಿಯಾಗಿರದ ೮೩೬೦ ಮತದಾರರಿಗೆ ಈಗಾಗಲೇ ನೋಟಿಸ್ ನೀಡಿ ಸಮರ್ಪಕ ಮಾಹಿತಿ ಪಡೆಯಲಾಗುತ್ತಿದೆ. ಉಳಿದಂತೆ ಮತದಾರರ ಮಾಹಿತಿ ತಿದ್ದುಪಡಿಗಾಗಿ ಅ. ೨೨ರ ವರೆಗೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಪಿ. ಶ್ರವಣಕುಮಾರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿವರಿಸಿ, ಕ್ಷೇತ್ರದಲ್ಲಿ ಒಟ್ಟು ೧,೭೭,೪೩೪ ಮತದಾರರಿದ್ದು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ೮೩೬೦ ಮತದಾರರ ಮಾಹಿತಿ ಸರಿಯಾಗಿಲ್ಲದಿರುವುದು ಕಂಡುಬಂದಿದೆ. ಇವರೆಲ್ಲರಿಗೂ ಈಗಾಗಲೇ ಹಂತ- ಹಂತವಾಗಿ ನೋಟಿಸ್ ನೀಡಲಾಗುತ್ತಿದ್ದು, ಅವರು ಸಮರ್ಪಕ ದಾಖಲೆಗಳನ್ನು ಬಿಎಲ್‌ಒಗಳಿಗೆ ನೀಡಬೇಕು.

ಈ ಪ್ರಕ್ರಿಯೆ ಆ. ೨೪ರಿಂದಲೇ ಆರಂಭವಾಗಿದ್ದು, ಅ. ೨೨ರ ವರೆಗೆ ಅವಕಾಶ ನೀಡಲಾಗಿದೆ. ಕೆಲ ಆಯ್ದ ಪ್ರದೇಶದಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಿ, ಪರಿಶೀಲನೆಗೆ ಅವಕಾಶ ಮಾಡಿಕೊಡಲಾಗಿದೆ. ಈಗಾಗಲೇ ೬೫೯ ಅರ್ಜಿಗಳು ಸ್ವೀಕೃತವಾಗಿವೆ. ಪುರಸಭೆ, ಗ್ರಾಮ ಪಂಚಾಯಿತಿಗಳ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುವ ವಾಹನಗಳ ಮೂಲಕ ಜಾಗೃತಿ ಮೂಡಿಸಲು ಸೂಚಿಸಲಾಗಿದೆ.

ಉಳಿದಂತೆ ಮತದಾರರ ಕಾರ್ಡ್‌ನಲ್ಲಿ ಏನಾದರೂ ತಿದ್ದುಪಡಿ ಮಾಡಲು ತಹಸೀಲ್ದಾರ್ ಕಚೇರಿ, ಬಿಎಲ್‌ಒ ಕಚೇರಿ ಮತ್ತು ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅಂತಿಮವಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮುಗಿದ ಬಳಿಕ ಅ. ೨೭ರಂದು ಪರಿಷ್ಕರಣೆಗೊಂಡ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ನಿಗದಿತ ಅವಧಿಯೊಳಗೆ ಈ ಅವಕಾಶವನ್ನು ಉಪಯೋಗಿಸಿಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸ್ ನಿಲ್ಲದಿದ್ದರೆ ಹೆದ್ದಾರಿ ಬಂದ್: ಗ್ರಾಮಸ್ಥರ ಎಚ್ಚರಿಕೆ
ಸಮಾಜಕ್ಕೆ ಮೌಲ್ಯಾಧಾರಿತ ಕಲೆಯ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಿದೆ: ಸ್ವರ್ಣವಲ್ಲೀ ಗಳು