ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಯಾದಗಿರಿ ವತಿಯಿಂದ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಬರುವ 2024ರ ಮಾರ್ಚ್ 9 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯದ ಆವರಣಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಅದಾಲತ್‌ನಲ್ಲಿ 2383 ಪ್ರಕರಣಗಳನ್ನು ಜಿಲ್ಲೆಯಲ್ಲಿ ಗುರುತಿಸಿದ್ದು, ಇನ್ನೂ ಹೆಚ್ಚಿಗೆ ಆಗಲಿವೆ. ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೈಮ್‌ಗಳು, ಭೂಸ್ವಾಧೀನ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾರ್ವಜನಿಕ ಉಪಯಕ್ತತೆ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಅದಾಲತ್‌ನಲ್ಲಿ ಇತ್ಯರ್ಥಕ್ಕೆ ಅವಕಾಶವಿದೆ ಎಂದು ನ್ಯಾ. ರೇಖಾ ತಿಳಿಸಿದರು.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಪ್ರಕರಣಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಮಾಹಿತಿಗಾಗಿ ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಟೋಲ್ ಫ್ರಿ ಸಂ.1800-425-90900, ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ ಆವರಣ ಯಾದಗಿರಿ ಇವರನ್ನು ಸಂಪರ್ಕಿಸಬಹುದು ಅಥವಾ ದೂ. 08473 253243 ಇಲ್ಲಿಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.