ನರೇಗಾ ಯೋಜನೆ ಹೆಸರು ಬದಲಾವಣೆಗೆ ವಿರೋಧ

KannadaprabhaNewsNetwork |  
Published : Feb 03, 2026, 01:45 AM IST
ಮನೇರಾಗೆ ಬದಲಾವಣೆ ಖಂಡಿಸಿ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟನೆ  | Kannada Prabha

ಸಾರಾಂಶ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಬದಲಾಯಿಸುವ ಮೂಲಕ ಗ್ರಾಮೀಣ ಜನರ ಉದ್ಯೋಗವನ್ನು ಕೇಂದ್ರ ಸರ್ಕಾರ ಕಸಿದುಕೊಂಡಿದ್ದು, ಈ ಕೂಡಲೇ ವಿಬಿ. ರಾಮ್‌ಜಿ ಯೋಜನೆಯನ್ನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿ ನಗರದಲ್ಲಿ ಸೋಮವಾರ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಬದಲಾಯಿಸುವ ಮೂಲಕ ಗ್ರಾಮೀಣ ಜನರ ಉದ್ಯೋಗವನ್ನು ಕೇಂದ್ರ ಸರ್ಕಾರ ಕಸಿದುಕೊಂಡಿದ್ದು, ಈ ಕೂಡಲೇ ವಿಬಿ. ರಾಮ್‌ಜಿ ಯೋಜನೆಯನ್ನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿ ನಗರದಲ್ಲಿ ಸೋಮವಾರ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಮಾವೇಶಗೊಂಡ ಮಹಿಳೆಯರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ದ ಘೋಷಣೆ ಕೂಗಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಾಗರತ್ನ ಕೆಂಗಾಕಿ ಮಾತನಾಡಿ, ಜಿಲ್ಲೆಯಲ್ಲಿ ಕೇಂದ್ರದ ರಾಮ್‌ಜಿ. ನರೇಗಾ ಯೋಜನೆ ವಿರುದ್ದ ಪ್ರತಿಭಟನೆ ಮಾಡಲಾಗುತ್ತಿದೆ. ಕಳೆದ ೨೦ ವರ್ಷಗಳಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯು ಗ್ರಾಮೀಣ ಪ್ರದೇಶ ಜನರ ಆಶಾಕಿರಣವಾಗಿತ್ತು. ಮಹಾತ್ಮ ಗಾಂಧಿ ಅವರ ಹೆಸರಿನಲ್ಲಿದ್ದ ಈ ಯೋಜನೆಯು ಗ್ರಾಮ ಪಂಚಾಯಿತಿಗಳ ಸಬಲೀಕರಣ ಮತ್ತು ಅರ್ಥಿಕ ಭದ್ರಸತೆಗೆ ಪೂರಕವಾಗಿತ್ತು. ಪ್ರಧಾನಿಗಳಾಗಿದ್ದ ಮನೋಹನ್ ಸಿಂಗ್ ಅವರು ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯೊಂದಿಗೆ ಈ ಯೋಜನೆಯನ್ನು ಜಾರಿ ಮಾಡಿದ್ದರು. ೨೦ ವರ್ಷಗಳಲ್ಲಿ ಲಕ್ಷಾಂತರ ಹಳ್ಳಿಗಳು ಪ್ರಗತಿಯಾಗಿವೆ. ಕೋಟ್ಯಾಂತರ ನಿರುದ್ಯೋಗಿಗಳಿಗೆ ಉದ್ಯೋಗವನ್ನು ನೀಡಿತ್ತು. ಈ ಯೋಜನೆಯ ಜನಪ್ರಿಯತೆಯ್ನು ಸಹಿಸದ ಕೇಂದ್ರ ಸರ್ಕಾರ ಬದಲಾವಣೆ ಮಾಡಿ, ಬಡವರು ಹಾಗೂ ಕೂಲಿ ಕಾರ್ಮಿಕರ ವಿರುದ್ದ ಗಧಾಪ್ರಹಾರ ಮಾಡಿದೆ. ವಿಶೇಷವಾಗಿ ಮಹಿಳೆಯರ ಹಕ್ಕು ಕಸಿದುಕೊಂಡಿದೆ. ಈ ಕೂಡಲೇ ಕೇಂದ್ರ ಸರ್ಕಾರ ಯೋಜನೆಯನ್ನು ವಾಪಸ್ ಪಡೆದು, ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಪುನರ್ ಸ್ಥಾಪನೆ ಮಾಡುವವರೆಗೆ ಮಹಿಳಾ ಕಾಂಗ್ರೆಸ್ ನಿರಂತರ ಹೋರಾಟ ಮಾಡುತ್ತದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುಸ್ವಾಮಿ, ಯುವ ಕಾಂಗ್ರೆಸ್‌ಗ್ರಾಮಾಂತರ ಅಧ್ಯಕ್ಷ ಶ್ರೀನಿವಾಸ್‌ಶೆಟ್ಟಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಭಾಗ್ಯ, ನಾಗಶ್ರೀ, ಸುವರ್ಣಾ, ಚಿನ್ನಮ್ಮ ಪದ್ಮಪುರುಷೋತ್ತಮ, ಜಿಪಂ. ಮಾಜಿ ಅಧ್ಯಕ್ಷೆ ಕಾವೇರಿಶಿವಕುಮಾರ್, ಮಹದೇವಮ್ಮ ರೇಖಾ, ಕೋಮಲ, ದುಂಡಮ್ಮ, ರತ್ನಮ್ಮ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಲತ್ಯಾಜ್ಯ ಸಂಸ್ಕರಣ ಘಟಕ ನಿರ್ಮಾಣಕ್ಕೆ ಶಾಸಕ ದರ್ಶನ್‌ ಚಾಲನೆ
ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೆ ಮಾತ್ರ ಸಾರ್ವಜನಿಕರ ಗೌರವ