ಸಂಡೂರು: ತಾಲೂಕಿನ ಹಳೆ ಮಾದಾಪುರ ಗ್ರಾಮದಲ್ಲಿ ಗುರುವಾರ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಪಾಲಕರು ಎಐಡಿಎಸ್‌ಒ ಸಂಘಟನೆಯ ನೇತೃತ್ವದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಎಐಡಿಎಸ್‌ಒ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಆದೇಶಗಳ ಪ್ರಕಾರ, ರಾಜ್ಯಾದ್ಯಂತ 5900 ಗ್ರಾಮ ಪಂಚಾಯ್ತಿಗಳ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರ ನಿರ್ಧರಿಸಿದೆ. ಈ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಐದು ಕಿಮೀ ವ್ಯಾಪ್ತಿಯಲ್ಲಿನ ಉಳಿದ ಸರ್ಕಾರಿ ಶಾಲೆಗಳನ್ನು ಕೊಲ್ಲುವ ಹುನ್ನಾರ ಇದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಕೆ. ಈರಣ್ಣ, ಉಪಾಧ್ಯಕ್ಷ ಶಾಂತಿ, ಗ್ರಾಮಸ್ಥರಾದ ಕೆ.ಎಸ್. ವೆಂಕಟೇಶ್, ಸುನಿಲ್, ವೆಂಕಟೇಶ್, ಶೆಕ್ಷಾವಲಿ, ವೀರೇಶ್ ಮುಂತಾದವರು ಭಾಗವಹಿಸಿದ್ದರು.
ಸಂಡೂರು ತಾಲೂಕಿನ ಹಳೆ ಮಾದಾಪುರ ಗ್ರಾಮದಲ್ಲಿ ಗುರುವಾರ ಎಐಡಿಎಸ್‌ಒ ಸಂಘಟನೆಯ ನೇತೃತ್ವದಲ್ಲಿ ಗ್ರಾಮಸ್ಥರು ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.