ಖಾಸಗಿ ಕಾಲೇಜಿನಲ್ಲಿ ಹಾವೇರಿ ವಿವಿ ಘಟಿಕೋತ್ಸವಕ್ಕೆ ವಿರೋಧ

KannadaprabhaNewsNetwork |  
Published : Apr 02, 2026, 02:15 AM IST
ಸವಣೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಎದುರು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಸಂಘಟನಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರಾಚಾರ್ಯರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವವನ್ನು ಖಾಸಗಿ ಕಾಲೇಜ್‌ನಲ್ಲಿ ನಡೆಸುತ್ತಿರುವುದನ್ನು ವಿರೋಧಿಸಿ, ಸವಣೂರು ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಎದುರು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಸಂಘಟನಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರಾಚಾರ್ಯ ಡಾ. ಪ್ರವೀಣ್ ಎಂ. ಆನಂದಕಂದ ಅವರ ಮೂಲಕ ಕುಲಪತಿ ಪ್ರೊ. ಸುರೇಶ ಜಂಗಮಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.

ಸವಣೂರು: ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವವನ್ನು ಖಾಸಗಿ ಕಾಲೇಜ್‌ನಲ್ಲಿ ನಡೆಸುತ್ತಿರುವುದನ್ನು ವಿರೋಧಿಸಿ, ಸವಣೂರು ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಎದುರು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಸಂಘಟನಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರಾಚಾರ್ಯ ಡಾ. ಪ್ರವೀಣ್ ಎಂ. ಆನಂದಕಂದ ಅವರ ಮೂಲಕ ಕುಲಪತಿ ಪ್ರೊ. ಸುರೇಶ ಜಂಗಮಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.

ಎಸ್‌ಎಫ್‌ಐ ಜಿಲ್ಲಾ ಪ್ರಮುಖ ಅರುಣ ನಾಗವತ ಮಾತನಾಡಿ, ಹಾವೇರಿ ಜಿಲ್ಲೆಯಾಗಿ 27 ವರ್ಷಗಳು ಪೂರೈಸಿದೆ. ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರತ್ಯೇಕ ಸರ್ಕಾರಿ ವಿಶ್ವವಿದ್ಯಾಲಯ, ಶಾಲಾ-ಕಾಲೇಜ್, ಹಾಸ್ಟೆಲ್ ಹಾಗೂ ವಿವಿಧ ರೀತಿಯ ಕೋರ್ಸ್‌ಗಳನ್ನು ಮಂಜೂರು ಮಾಡಬೇಕು ಎಂದು ಸಂಘಟನೆಯ ನಿರಂತರ ಹೋರಾಟ, ಕಾರ್ಯಕ್ರಮ, ಸಮಾವೇಶಗಳನ್ನು ನಡೆಸುತ್ತಾ ಬಂದಿದೆ. ಹೋರಾಟದ ಪ್ರತಿಫಲವಾಗಿ ವಿವಿಧ ಸರ್ಕಾರಿ ಶಾಲಾ-ಕಾಲೇಜ್‌ಗಳು, ಹಾಸ್ಟೆಲ್‌ಗಳ ಜತೆಗೆ ಇಡೀ ರಾಜ್ಯದಲ್ಲಿ 9 ವಿವಿಗಳ ಪೈಕಿ 2023ರಂದು ಹಾವೇರಿ ಪಟ್ಟಣದಿಂದ ಸುಮಾರು 7 ಕಿ.ಮೀ. ದೂರದಲ್ಲಿರುವ ಕೆರಿಮತ್ತಿಹಳ್ಳಿಯಲ್ಲಿ 42 ಎಕರೆಗಳಷ್ಟು ವಿಸ್ತಾರವಾದ ಕ್ಯಾಂಪಸ್‌ನಲ್ಲಿ ಮಂಜೂರಾಗಿದೆ. ನೂತನ ವಿವಿಯನ್ನು ಪ್ರತ್ಯೇಕಗೊಳಿಸದೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸ್ನಾತಕೋತ್ತರ ಕೇಂದ್ರದ ಕಟ್ಟಡದಲ್ಲಿಯೇ ಸ್ಥಾಪನೆ ಮಾಡಲಾಗಿದೆ. ಹೀಗಿರುವಾಗ ಹಾವೇರಿ ಜಿಲ್ಲೆಯ ಹೆಮ್ಮೆಯ ಕ್ಷಣವಾದ ಮೊದಲ ಘಟಿಕೋತ್ಸವವು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಡೆಸಬೇಕೆಂದು ವಿದ್ಯಾರ್ಥಿ ಸಮುದಾಯದ ಪರವಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ, ಶಿಕ್ಷಣ ಪ್ರೇಮಿಗಳು, ಉಪನ್ಯಾಸಕರು ಹಾವೇರಿ ಜಿಲ್ಲೆಯ ಜನತೆಯ ಪರವಾಗಿ ವಿನಂತಿಸಿಕೊಳ್ಳುತ್ತೇವೆ ಎಂದರು.

ಯಾವುದೇ ಕಾರಣಕ್ಕೂ ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವವನ್ನು ಕ್ಯಾಂಪಸ್‌ನಲ್ಲಿ ಬಿಟ್ಟು ಬೇರೆಡೆಗೆ ನಡೆಸಲು ಆಲೋಚನೆ, ಯೋಜನೆ, ತೀರ್ಮಾನವನ್ನು ಕೈಗೊಳ್ಳಬಾರದು. ಒಂದು ವೇಳೆ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎಸ್‌ಎಫ್‌ಐ ಕಾಲೇಜ್ ಘಟಕದ ಅಧ್ಯಕ್ಷ ಅವೇಶ ಪಟೇಲ್, ಕಾರ್ಯದರ್ಶಿ ರೆಹನ್ ಪಠಾಣ, ಪ್ರಮುಖರಾದ ಕುಸುಮ ಎನ್., ಮಿನಾಜ್ ದ್ಯಾಮನಕೊಪ್ಪ, ಶಾಬರ್ ಮನಿಯಾಜ್, ಮುಸ್ತಾಕ್ ಕಫಜ್, ಉಸ್ಮಾನ್ ಜಮದಾರ, ತಸ್ಮೀಯ ಎಚ್., ಸಂಗೀತಾ ಸವಣೂರ, ನೇಹಾ ಎಂ., ಅಕ್ಕಮ್ಮ ಉಡುಪಿ, ಫಿಜಾ ಮುಲ್ಲಾ, ಸಾನಿಯಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರಿಗೆ ಸಾಮೂಹಿಕ ವಿವಾಹ ಅನುಕೂಲ: ಮುದುಕೇಶ್ವರ ಶಿವಾಚಾರ್ಯರು ಸ್ವಾಮಿಗಳು
ಲಿಂ. ಸಿದ್ಧಗಂಗಾ ಡಾ. ಶಿವಕುಮಾರ ಶ್ರೀ ಸದಾ ಸ್ಮರಣೀಯರು: ಜಗದೀಶ ಸಂಕನೂರ