ಅನ್ಯ ಜಾತಿ ಎಸ್ಟಿ ಮೀಸಲಾತಿ ಸೇರ್ಪಡೆಗೆ ಹಾವೇರಿಯಲ್ಲಿ ವಿರೋಧ

KannadaprabhaNewsNetwork |  
Published : Sep 26, 2025, 01:00 AM IST
25ಎಚ್‌ವಿಆರ್‌1 | Kannada Prabha

ಸಾರಾಂಶ

ರಾಜ್ಯದ ಅನ್ಯ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರ್ಪಡೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಭಾದ ಜಿಲ್ಲಾ ಘಟಕ ಮತ್ತು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದಿಂದ ಗುರುವಾರ ಇಲ್ಲಿನ ಜಿಲ್ಲಾಡಳಿತದ ಬಳಿ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಹಾವೇರಿ: ರಾಜ್ಯದ ಅನ್ಯ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರ್ಪಡೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಭಾದ ಜಿಲ್ಲಾ ಘಟಕ ಮತ್ತು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದಿಂದ ಗುರುವಾರ ಇಲ್ಲಿನ ಜಿಲ್ಲಾಡಳಿತದ ಬಳಿ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಮಹಾ ಸಭಾದ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ ಮಾತನಾಡಿ, ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಗೆ ಸದೃಢವಾಗಿ ಮುಂದುವರೆದಿರುವ ಅನ್ಯ ಸಮಾಜವನ್ನು ಸೇರ್ಪಡೆ ಮಾಡಲು ಸರ್ಕಾರ ಕೈಗೆತ್ತಿಕೊಳ್ಳುತ್ತಿರುವ ನಿರ್ಧಾರದಿಂದ ಕೂಡಲೇ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.ಸಂವಿಧಾನದ ಆಶಯದಂತೆ ಹಾಲಿ ಇರುವ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ ಜಾತಿಯ ಸಮಾಜದವರಿಗೆ ವಿವಿಧ ರೀತಿಯ ಸೌಲಭ್ಯಗಳು ಸಿಗುವಲ್ಲಿ ತುಂಬಲಾರದಷ್ಟು ಘೋರ ಅನ್ಯಾಯವಾಗುತ್ತಿದೆ. ಸಂವಿಧಾನದ ಹಿತವನ್ನು ಕಾಪಾಡುವ ಪ್ರಬುದ್ಧತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗೌರವ ಪೂರ್ವಕವಾಗಿ ಈ ನಿರ್ಧಾರವನ್ನು ಕೈ ಬಿಡಬೇಕೆಂದು ಆಗ್ರಹಿಸಿದರು.ವಾಲ್ಮೀಕಿ ಸಮಾಜದ ಶಾಸಕರಾದ ನಾಗೇಂದ್ರ, ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಹೊರಗೆ ಹಾಕಲಾಗಿದೆ. ವ್ಯವಸ್ಥಿತವಾಗಿ ವಾಲ್ಮೀಕಿ ಸಮಾಜದವರನ್ನು ಹೊರಗೆ ಹಾಕಿ ವಾಲ್ಮೀಕಿ ಸಮಾಜವನ್ನು ತುಳಿಯುವ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ ಒಂದರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಂಚಿಸುತ್ತಿದ್ದಾರೆ. ರಾಜ್ಯದಲ್ಲಿ ಎಸ್ಟಿ ಸಮಾಜಕ್ಕೆ ಸೇರದೇ ಇರುವ ಅನ್ಯ ಜಾತಿಯವರು ನಕಲಿ ಎಸ್ಟಿ ಜಾತಿ ಪ್ರಮಾಣ ಪತ್ರವನ್ನು ಪಡೆಯುತ್ತಿರುವ ಹಾಗೂ ಎಸ್ಟಿ ಪ್ರಮಾಣ ಪತ್ರವನ್ನು ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಯುವ ಘಟಕದ ಜಿಲ್ಲಾಧ್ಯಕ್ಷ ನಾಗರಾಜ ಬಡಮ್ಮನವರ್, ತಾಲೂಕು ಅಧ್ಯಕ್ಷ ಮಾಲತೇಶ್ ರಿತ್ತಿ, ಮುಖಂಡರುಗಳಾದ ಮಲ್ಲಿಕಾರ್ಜುನ್ ಬುದಗಟ್ಟಿ, ರಾಘವೇಂದ್ರ ಬಾಸೂರ್, ನೀಲಪ್ಪ ಕನಕಪುರ, ಜಗದೀಶ್ ಕೊಂಡೆಮ್ಮನವರ್, ಕುಮಾರ್ ಅಗಸನಮಟ್ಟಿ, ಮಾರುತಿ ಕನವಳ್ಳಿ, ಗೀತಾ ಆರ್., ಬಾಲರಾಜ್ ಹೊನ್ನನಾಯಕ್, ಶ್ರೀಕಾಂತ್ ತಳವಾರ್, ಚಂದ್ರಪ್ಪ ಕರೆಬಸಪ್ಪನವರ, ಶಿವನಗೌಡ ಪಾಟೀಲ್, ಉದಯಕುಮಾರ್ ಅಗಸನಮಟ್ಟಿ, ಚಂದ್ರಶೇಖರ ಕದರಮಂಡಲಗಿ, ರಮೇಶ್ ಯಂಕಣ್ಣನವರ, ನಾಗರಾಜ್ ಬಾಳೆಹೊಸೂರ್, ವಿಠ್ಠಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

PREV

Recommended Stories

ಕಾಸರಗೋಡಲ್ಲಿ ಕನ್ನಡ ಫಲಕ: ಕೇರಳಕ್ಕೆ ಕೇಂದ್ರ ನಿರ್ದೇಶನ
ಒಂದು ತಿಂಗಳಾದ್ರೂ ಬೈಕ್‌ ಟ್ಯಾಕ್ಸಿಗೆ ನೀತಿ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ