ಪಾಕ್‌ ಪರ ಘೋಷಣೆಗೆ ವಿರೋಧ: ಕುಶಾಲನಗರ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Feb 29, 2024, 02:00 AM IST
ಕುಶಾಲನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ | Kannada Prabha

ಸಾರಾಂಶ

ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಷ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕೂಡಲೇ ದೇಶದ್ರೋಹಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರವಿಧಾನಸೌಧದಲ್ಲಿ ನಡೆದಿದೆ ಎನ್ನಲಾದ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಖಂಡಿಸಿ ಕುಶಾಲನಗರದಲ್ಲಿ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಷ ವ್ಯಕ್ತಪಡಿಸಿದರು. ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕೂಡಲೇ ದೇಶದ್ರೋಹಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಕಾಂಗ್ರೆಸ್ ಸರ್ಕಾರ ಓಟಿಗಾಗಿ‌ ಯಾವ ಮಟ್ಟಕ್ಕೆ ತಲುಪಿದೆ ಎಂಬುದು ಈ ಪ್ರಕರಣದಿಂದ ಮತ್ತೆ ಸಾಬೀತಾಗಿದೆ. ಪಾಕಿಸ್ತಾನ‌ ಪರ ಘೋಷಣೆ ಕೂಗಿದವರನ್ನು ರಕ್ಷಿಸುವ ಕೆಲಸಕ್ಕೆ ಮುಂದಾಗಿದೆ. ಇಲ್ಲಿನ ಅನ್ನ ತಿಂದು ದೇಶಾಭಿಮಾನ‌ ಮರೆತವರು ನಮಗೆ ಅಗತ್ಯವಿಲ್ಲ. ಪಾಕಿಸ್ತಾನದ ಪರ ಒಲವಿರುವವರನ್ನು ನೇರವಾಗಿ ಪಾಕಿಸ್ತಾನಕ್ಕೆ ಕಳುಹಿಸಿ ಎಂದ ಅವರು, ಕಾಂಗ್ರೆಸ್ ಸರಕಾರದಿಂದ ಮುಂದಿನ ದಿನಗಳಲ್ಲಿ ಉಂಟಾಗಲಿರುವ ಅನಾಹುತಗಳ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ರಾಜ್ಯ ಸರ್ಕಾರ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಪ್ರಕರಣ ದಾಖಲಿಸಲು‌ ವಿಳಂಬ ನೀತಿ‌ ಅನುಸರಿಸುತ್ತಿರುವುದು ಖಂಡನೀಯ.‌ ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು, ಗೆದ್ದಾಗ ಘೋಷಣೆ ಕೂಗುವುದು ಸಾಮಾನ್ಯ. ಅದರೆ ದೇಶದೊಳಗಿನ ವ್ಯವಸ್ಥೆ ಬದಲಿಗೆ ನೆರೆಯ ದೇಶಕ್ಕೆ ಪರವಾಗಿ ಜೈಕಾರ ಹಾಕಿರುವುದು ನಮ್ಮ‌ ನಡುವೆ ವಿಷವರ್ತುಲಗಳಿವುದನ್ನು ಸಾಬೀತುಪಡಿಸಿದೆ. ದೇಶ ಗಂಡಾಂತರದಲ್ಲಿದೆ ಎಂಬ ಆತಂಕ ಕಾಡುತ್ತಿದೆ ಎಂದರು. ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ‌ ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ರಾಜ್ಯ ಎಸ್ಟಿ‌ ಮೋರ್ಚಾ ಉಪಾಧ್ಯಕ್ಷೆ ಮಂಜುಳಾ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಇಂದಿರಾ ರಮೇಶ್, ವಿವಿಧ ಘಟಕಗಳ ಪ್ರಮುಖರಾದ ಮೋಹಿತ್ ತಿಮ್ಮಯ್ಯ, ಮೋಕ್ಷಿತ್ ರಾಜ್, ದರ್ಶನ್ ಜೋಯಪ್ಪ, ಪ್ರಮುಖರಾದ ಮನುಕುಮಾರ್ ರೈ, ಜಿ.ಎಲ್.ನಾಗರಾಜ್, ಕುಮಾರಪ್ಪ, ಎಂ.ಡಿ.ಕೃಷ್ಣಪ್ಪ, ಸುಮನ್, ಹೇರೂರು ಚಂದ್ರಶೇಖರ್, ಎಂ ಎಂ ಚರಣ್, ನವನೀತ್ ಪೊನ್ನಟಿ ಮತ್ತಿತರರು ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...