ಸಾಮಾಜಿಕ ಸಮೀಕ್ಷೆಗೆ ವಿರೋಧ: ಖಂಡನೆ

KannadaprabhaNewsNetwork |  
Published : Oct 07, 2025, 01:02 AM IST
್ಿ್ಿ್ಿ್ಿ | Kannada Prabha

ಸಾರಾಂಶ

ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸುತ್ತಿರುವ ಸಾಮಾಜಿ, ಅರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ವಿರೋಧಿಸುತ್ತಿದ್ದು, ಇದನ್ನು ಜಾಗೃತ ಕರ್ನಾಟಕ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಜಾಗೃತ ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅನಿಲ್ ಕುಮಾರ್ ಚಿಕ್ಕದಾಳವಾಟ ತಿಳಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸುತ್ತಿರುವ ಸಾಮಾಜಿ, ಅರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ವಿರೋಧಿಸುತ್ತಿದ್ದು, ಇದನ್ನು ಜಾಗೃತ ಕರ್ನಾಟಕ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಜಾಗೃತ ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅನಿಲ್ ಕುಮಾರ್ ಚಿಕ್ಕದಾಳವಾಟ ತಿಳಿಸಿದರು.ತುಮಕೂರು ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 1903ರ ಮಿಲ್ಲರ್‌ ಆಯೋಗದಿಂದ ಹಿಡಿದು, ನ್ಯಾ.ಕಾಂತರಾಜು ಆಯೋಗದ ವರದಿಯವರೆಗೆ ಮುಂದುವರೆದು, ಈಗಲೂ ಸಹ ವರದಿ ಸರಿಯಾಗಿ ನಡೆದಿಲ್ಲ ಎಂಬ ನೆಪವೊಡ್ಡಿ ವರದಿಯ ಶಿಫಾರಸ್ಸುಗಳನ್ನು ವಿರೋಧಿಸಲು ಕೆಲ ಪಕ್ಷಗಳ ಮುಖಂಡರು ಸಂಚು ರೂಪಿಸುತ್ತಿದ್ದಾರೆ. ಇವರಿಗೆ ಸಂಪತ್ತಿನ ಸಮಾನ ಹಂಚಿಕೆ ಆಗುವುದು ಬೇಕಿಲ್ಲ ಎಂದು ಆರೋಪಿಸಿದರು.ಸರ್ಕಾರ ರಾಜ್ಯದಲ್ಲಿ ವಾಸಿಸುತ್ತಿರುವ ಜನರ ಸಾಮಾಜಿಕ, ಅರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯುವ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲು ಹೊರಟಿದೆ. ಇದು ಸ್ವಾಗತಾರ್ಹ ಬೆಳವಣಿಗೆ. ಸರ್ಕಾರ ನಡೆಸುತ್ತಿರುವ ಈಗಣತಿಯಿಂದ ಇದುವರೆಗೂ ಕುಲಕಸುಬುಗಳನ್ನೇ ನಂಬಿ ಅತಂತ್ರ ಸ್ಥಿತಿಯಲ್ಲಿದ್ದ ಹತ್ತಾರು ಹಿಂದುಳಿದ ಮತ್ತು ಅತಿ ಹಿಂದುಳಿದ ಜಾತಿಗಳ ಜನರನ್ನು ಮೇಲೆತ್ತಲು ಅವಶ್ಯವಿರುವ ಯೋಜನೆಗಳನ್ನು ರೂಪಿಸಲು ಕಲೆ ಹಾಕುತ್ತಿರುವ ದತ್ತಾಂಶ ಇದಾಗಿದೆ. ಈ ದತ್ತಾಂಶದಿಂದ ಒಬಿಸಿ ಪಟ್ಟಿಯಲ್ಲಿರುವ ಹಲವಾರು ತಳ ಸಮುದಾಯಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಸರ್ಕಾರ ಈಗಾಗಲೇ ಶೇ. 75 ರಷ್ಟು ಸಮೀಕ್ಷೆ ಕಾರ್ಯವನ್ನು ಪೂರ್ಣ ಗೊಳಿಸಿದೆ. ಶೇ100 ರಷ್ಟು ಸಮೀಕ್ಷೆ ಪೂರ್ಣಗೊಳ್ಳಲು ನಾಡಿನಎಲ್ಲ ವರ್ಗದಜನರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದರು.ಜಾಗೃತಕರ್ನಾಟಕದ ಮುಖಂಡ ಹರೀಶ್‌ ಕಮ್ಮನಕೋಟೆ ಮಾತನಾಡಿದರು. ಈ ವೇಳೆ ಕಿಶೋರ್ , ಆದಮ್‌ಖಾನ್, ದಯಾನಂದ್, ಮಲ್ಲಿಕಾರ್ಜುನ , ಮಂಜುಳಮ್ಮ , ಚಂದನ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುಸ್ತಕಗಳಲ್ಲಿ ಬೆಂಗಳೂರು ನಗರಕ್ಕೆ ಬರೋಬ್ಬರಿ ₹38 ಕೋಟಿ ಡ್ರಗ್ಸ್‌ ಸಾಗಾಟ
ಸರ್ಕಾರದಿಂದ ಗೋಬ್ಯಾಕ್‌ ಗೌರ್ನರ್‌ ಅಭಿಯಾನ ಚಿಂತನೆ