ಅಭಿವೃದ್ಧಿ ವಿಚಾರವನ್ನು ಬಿಟ್ಟು ಬಿಜೆಪಿಯವರು ಧಾರ್ಮಿಕ ಮತ್ತು ಭಾವನಾತ್ಮಕ ವಿಚಾರವಾಗಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇದು ಆ ಪಕ್ಷಕ್ಕೆ ಹೊಸದಲ್ಲ. ನಾಡಿನ ಜನರು ಬಿಜೆಪಿಯ ಕುತಂತ್ರವನ್ನು ಅರ್ಥ ಮಾಡಿಕೊಂಡಿದ್ದಾರೆ. ಜನರು ಕೋಮು ಸೌಹಾರ್ದವನ್ನು ಕಾಪಾಡುವ ಕೆಲಸ ಮಾಡಬೇಕು.
ಕನ್ನಡಪ್ರಭ ವಾರ್ತೆ ಮದ್ದೂರು
ಗಣೇಶ ಮೂರ್ತಿ ಸೇರಿದಂತೆ ಶ್ರದ್ಧಾಭಕ್ತಿಯಿಂದ ಪೂಜಿಸುವ ಹಲವು ದೇವರುಗಳನ್ನು ವಿಪಕ್ಷದವರು ರಾಜಕೀಯಕ್ಕೆ ಬಳಸಿಕೊಂಡು ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಕಿಡಿಕಾರಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಕದಲೂರು ಉದಯ್ ಚಾರಿಟೇಬಲ್ ಟ್ರಸ್ಟ್‌ನಿಂದ ಶನಿವಾರ ರಾತ್ರಿ ನಡೆದ ಗಣೇಶೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ, ಗಣೇಶ ಮೂರ್ತಿ ವಿಚಾರವನ್ನು ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಇದ್ಯಾವುದೇ ಲಾಭ ಅವರಿಗೆ ಫಲಿಸುವುದಿಲ್ಲ. ಜನರು ಬುದ್ಧಿವಂತರಿದ್ದಾರೆ. ಅವರ ಎಲ್ಲಾ ನಡುವಳಿಕೆಗಳನ್ನು ಅರ್ಥ ಮಾಡಿಕೊಳ್ಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಅಭಿವೃದ್ಧಿ ವಿಚಾರವನ್ನು ಬಿಟ್ಟು ಬಿಜೆಪಿಯವರು ಧಾರ್ಮಿಕ ಮತ್ತು ಭಾವನಾತ್ಮಕ ವಿಚಾರವಾಗಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇದು ಆ ಪಕ್ಷಕ್ಕೆ ಹೊಸದಲ್ಲ. ನಾಡಿನ ಜನರು ಬಿಜೆಪಿಯ ಕುತಂತ್ರವನ್ನು ಅರ್ಥ ಮಾಡಿಕೊಂಡಿದ್ದಾರೆ. ಜನರು ಕೋಮು ಸೌಹಾರ್ದವನ್ನು ಕಾಪಾಡುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ರಾಜ್ಯವನ್ನು ಅಭಿವೃದ್ಧಿ ಮಾಡಿ ನಾವು ಜನರಲ್ಲಿ ಮತಯಾಚನೆ ಮಾಡುತ್ತಿದ್ದೇವೆ ಹೊರತು ಜನರನ್ನು ಮರಳು ಮಾಡಿ ಮತ ಕೇಳುತ್ತಿಲ್ಲ ಎಂದು ವಿಪಕ್ಷಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.
ಮಾಜಿ ಸಂಸದ, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಾಸಕ ಕೆ.ಎಂ.ಉದಯ್ ಆಸೆಯಂತೆ ಮದ್ದೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡುವ ಬಯಕೆ ಹೊಂದಿದ್ದಾರೆ. ಇದಕ್ಕೆ ಸಚಿವ ಸಂಪುಟದ ಎಲ್ಲಾ ಸಚಿವರು ಅಭಿವೃದ್ಧಿಗೆ ಕೈಜೋಡಿಸುತ್ತಿದ್ದಾರೆ ಎಂದರು.
ಹೆಚ್ಚಿನ ಅಭಿವೃದ್ಧಿ ದೃಷ್ಟಿಯಿಂದ ಮದ್ದೂರು ಕ್ಷೇತ್ರದ ಜನರು ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಹ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಈ ವೇಳೆ ಶಾಸಕ ಕೆ.ಎಂ.ಉದಯ್, ಚಿತ್ರನಟ ತರುಣ್ ಸುಧೀರ್, ಶಾಸಕ ಪತ್ನಿ ವಿನುತಾ ಉದಯ್, ಕೆ.ಎಂ.ರವಿ ಮತ್ತಿತರರು ಇದ್ದರು.ನಾಡಿಗೆ ಮಾದರಿಯಾದ ಈ ಬಾರಿಯ ಗಣೇಶೋತ್ಸವಕನ್ನಡ ಪ್ರಭ ವಾರ್ತೆ ಮದ್ದೂರುಕಳೆದ ವರ್ಷದ ಕಹಿ ಘಟನೆಗಳನ್ನು ಬದಿಗೊತ್ತಿ ಕೋಮು ಸೌಹಾರ್ದತೆ ಮತ್ತು ಭ್ರಾತೃತ್ವವನ್ನು ಸಾರುವ ಮೂಲಕ ಮದ್ದೂರಿನ ಗಣೇಶೋತ್ಸವ ಈ ಬಾರಿ ಇಡೀ ನಾಡಿಗೆ ಮಾದರಿಯಾಯಿತು.
ಸ್ಥಳೀಯ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಆಯೋಜಿಸಿದ ಗಣೇಶೋತ್ಸವದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಭಾವೈಕ್ಯತೆಯ ಹೊಸ ಅಧ್ಯಾಯಕ್ಕೆ ಸಾಕ್ಷಿಯಾಗಿದೆ.ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಳೆದ ಒಂದು ವಾರದಿಂದ ಗಣೇಶೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುತ್ತಿತ್ತು. ಪ್ರತಿ ದಿನ ಸಾರ್ವಜನಿಕರನ್ನು ಸೆಳೆಯುವ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.
ಕಳೆದ ವರ್ಷ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ನಡೆಸಿದ ಕಲ್ಲು ತೂರಾಟದಿಂದ ಮದ್ದೂರಿನಲ್ಲಿ ಭಾರಿ ಉದ್ವಿಗ್ನತೆ ಉಂಟಾಗಿತ್ತು. ಈ ಘಟನೆಯನ್ನು ಮೈತ್ರಿ ಪಕ್ಷಗಳ ನಾಯಕರು ರಾಜಕೀಯವಾಗಿ ಬಳಸಿಕೊಂಡಿದ್ದರು ಎಂಬ ಆರೋಪವಿತ್ತು. ಆದರೆ ಈ ಬಾರಿ ಅಂತಹ ಯಾವುದೇ ಅಹಿತಕರ ಘರ್ಷಣೆಗೆ ಅವಕಾಶ ನೀಡದಂತೆ ಎಚ್ಚರ ವಹಿಸಿದ್ದ ಶಾಸಕರು, ಎರಡೂ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ಸಾಮರಸ್ಯಕ್ಕೆ ಹಾದಿ ಸುಗಮಗೊಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.