-ಮುಸ್ಲಿಂ ಧಾರ್ಮಿಕ ಮುಖಂಡ ಶಾಹುಲ್ ಹಮೀದ್ ಮುಕ್ತಿಯಾರ್ ಆರೋಪ । ವಕ್ಫ್ ಕಾಯ್ದೆ(ತಿದ್ದುಪಡಿ) ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ, ಮೆರವಣಿಗೆ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕಳೆದ 10 ವರ್ಷಗಳಿಂದ ಈ ದೇಶದಲ್ಲಿ ಒಂದು ಧರ್ಮವನ್ನು ಗುರಿಯಾಗಿರಿಸಿ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಮುಸ್ಲಿಂ ಧಾರ್ಮಿಕ ಮುಖಂಡ ಶಾಹುಲ್ ಹಮೀದ್ ಮುಕ್ತಿಯಾರ್ ಆರೋಪಿಸಿದರು.ವಕ್ಫ್ ಕಾಯ್ದೆ(ತಿದ್ದುಪಡಿ) 2025 ಅನ್ನು ತಕ್ಷಣ ರದ್ದುಗೊಳಿಸಲು ಆಗ್ರಹಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ನಗರದ ಸರ್ ಎಂ.ವಿಶ್ವೇಶ್ವರಯ್ಯ ರಸ್ತೆಯಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಚಿಂತಕ ಸುಧೀರ್ ಕುಮಾರ್ ಮರೊಳ್ಳಿ ಮಾತನಾಡಿ, ಪ್ರಧಾನಿ ಮೋದಿಯುವರು ದೇಶವನ್ನು ಕಟ್ಟುವ ಕೆಲಸ ಮಾಡುತ್ತಿಲ್ಲ, ಕೋಮುಗಳ ನಡುವೆ ಹೊಡೆದಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಕ್ಫ್ ಆಸ್ತಿ ಯಾರ ವೈಯುಕ್ತಿಕ ಆಸ್ತಿ ಅಲ್ಲ, ಅದು ಪರಮಾತ್ಮನ ಆಸ್ತಿ. ವಕ್ಫ್ ಆಸ್ತಿಗೂ ಅಮಿತ್ ಷಾ ಗೂ ಮೋದಿಗೂ ಏನ್ ಸಂಬಂಧ ಎಂದು ಪ್ರಶ್ನಿಸಿದ ಅವರು, ಮತ ರಾಜಕಾರಣ ಕೈಬಿಡುವಂತೆ ಆಗ್ರಹಿಸಿದರು.
ಕೇಂದ್ರ ಹಾಗೂ ರಾಜ್ಯ ವಕ್ಪ್ ಮಂಡಳಿಗಳಿಗೆ ಮುಸ್ಲಿಮೇತರರನ್ನು ಕಡ್ಡಾಯವಾಗಿ ಸೇರಿಸುವುದು ಸಂವಿಧಾನದ ೨೬ನೇ ವಿಧಿಯ ಅನ್ವಯ ಉಲ್ಲಂಘನೆಯಾಗುತ್ತದೆ. ಇದು ಮುಸ್ಲಿಮರಿಗೆ ತಮ್ಮ ಧಾರ್ಮಿಕ ಸಂಸ್ಥೆಗಳನ್ನು ನಿರ್ಮಿಸುವ ಹಕ್ಕನ್ನು ಕಸಿದುಕೊಳ್ಳುತ್ತದೆ. ಹಿಂದೂ, ಸಿಖ್ ಅಥವಾ ಇತರ ಧಾರ್ಮಿಕ ಆಸ್ತಿಗಳಿಗೆ ಇಂತರ ನಿಯಮ ಇಲ್ಲ ಎಂದರು.
ವಕ್ಪ್ ಆಸ್ತಿಯ ಮಾಲೀಕತ್ವವನ್ನು ಜಿಲ್ಲಾಧಿಕಾರಿಗಳೇ ನಿರ್ಧರಿಸುವ ಅಧಿಕಾರ ನೀಡುವುದು ನ್ಯಾಯಾಲಯದ ಮೇಲ್ವಿಚಾರಣೆ ಇಲ್ಲದೇ ಸ್ವೇಚ್ಛಾಚಾರ ತೀರ್ಮಾನಕ್ಕೆ ದಾರಿ ಮಾಡುತ್ತದೆ. ಅಲ್ಲದೇ, ಇದು ವಕ್ಫ್ ಮಂಡಳಿಗಳ ಸ್ವಾಯತ್ತತೆಗೆ ಧಕ್ಕೆ ತರುತ್ತದೆ ಎಂದರು.
---
--
ಪೊಲೀಸರು ಹೈಅಲರ್ಟ್: ಮುಸ್ಲಿಮರು ನಗರದಲ್ಲಿ ಭಾರೀ ಪ್ರತಿಭಟನೆಯ ಮೂಲಕ ಮೆರವಣಿಗೆ ನಡೆಸುತ್ತಾರೆ ಎಂಬ ಸುದ್ದಿ ತಿಳಿದ ಕೂಡಲೇ ಪೊಲೀಸರು ಅಲರ್ಟ್ ಆಗಿದ್ದರು. ಪ್ರತಿಭಟನೆ, ಯಾವುದೇ ಕ್ಷಣದಲ್ಲಿ ಏನಾದರೂ ತಿರುವು ತೆಗೆದುಕೊಳ್ಳಬಹುದೆಂಬ ಅನುಮಾನವಿದ್ದುದರಿಂದ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿತ್ತು. ನಗರವಲ್ಲದೇ ಸುತ್ತಮುತ್ತಲ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿತ್ತು. ಪ್ರತಿಭಟನೆ ನಡೆಯುವ ಮುಖ್ಯ ರಸ್ತೆಯಲ್ಲಿ ಭಾರೀ ಭದ್ರತೆ ಹಾಕಿದ್ದು, ಸಂಪರ್ಕ ರಸ್ತೆಗಳನ್ನು ಬಂದ್ ಮಾಡಲಾಗಿತ್ತು.ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಮತ್ತು ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸ್ಥಳದಲ್ಲೇ ಇದ್ದು, ಬಂದೋಬಸ್ತ್ ಮೇಲ್ವಿಚಾರಣೆ ವಹಿಸಿದ್ದರು. ಪ್ರತಿಭಟನೆಯಲ್ಲಿ 5 ಸಾವಿರಕ್ಕೂ ಮುಸ್ಲಿಂ ಸಮುದಾಯದವರು ಭಾಗವಹಿಸಿದ್ದರು.----------------------
ಪೋಟೋ: 03ಎಸ್ಎಂಜಿಕೆಪಿ01ಶಿವಮೊಗ್ಗದ ನಗರದ ಮುಸ್ಲಿಂ ಹಾಸ್ಟೆಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ವಕ್ಫ್ ಕಾಯ್ದೆ(ತಿದ್ದುಪಡಿ) 2025 ಅನ್ನು ತಕ್ಷಣ ರದ್ದುಗೊಳಿಸಲು ಆಗ್ರಹಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ಪ್ರತಿಭಟನೆ ಮೆರವಣಿಗೆ ನಡೆಯಿತು.
--------------------------ಪೋಟೋ: 03ಎಸ್ಎಂಜಿಕೆಪಿ02
ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ಪ್ರತಿಭಟನೆ ಹಿನ್ನೆಲೆ ಶಿವಮೊಗ್ಗ ಮಹಾವೀರ ವೃತ್ತದ ಬಳಿ ಬ್ಯಾರಿಕೇಡ್ ಹಾಕಿರುವುದು.-------------------
ಪೋಟೋ: 03ಎಸ್ಎಂಜಿಕೆಪಿ03ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ನಗರದ ಸರ್ ಎಂ.ವಿಶ್ವೇಶ್ವರಯ್ಯ ರಸ್ತೆಯಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು.