ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಿವಿವಿ ಸಂಘದ ಪಿಎಂಎನ್ಎಂ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಬಾಯಿ ಮತ್ತು ಮುಖದ ಶಸ್ತ್ರಚಿಕಿತ್ಸಕರ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಬಾಯಿ ಆರೋಗ್ಯದ ಅಗತ್ಯವನ್ನರಿತು ಭಾರತ ಸರ್ಕಾರ ರಾಷ್ಟ್ರೀಯ ಬಾಯಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಆರಂಭಿಸಿದೆ. ಈ ದಿಸೆಯಲ್ಲಿ ದಂತ ಕಾಲೇಜಿನಲ್ಲಿ ಆಶಾ ಕಾರ್ಯಕರ್ತೆಯರಿಗಾಗಿ ಬಾಯಿ ಮತ್ತು ಮುಖದ ಶಸ್ತ್ರಚಿಕಿತ್ಸೆ ಬಗ್ಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ಲಾಘನೀಯ ಪ್ರಯತ್ನ. ಆಶಾ ಕಾರ್ಯಕರ್ತೆಯರ ಮೂಲಕ ದಂತ ಆರೋಗ್ಯದ ಅರಿವು ಸಾರ್ವಜನಿಕರಿಗೆ ತಲುಪಲಿ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ.ರವಿರಾಜ ದೇಸಾಯಿ, ದಂತ ಚಿಕಿತ್ಸೆಗಾಗಿ ಸರ್ಕಾರ ದಂತ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಪಿಎಂಎನ್ಎಂ ದಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಸೌಲಭ್ಯವಿದೆ. ಈ ಸೌಲಭ್ಯದ ಕುರಿತು ಆಶಾ ಕಾರ್ಯಕರ್ತೆಯರು ಸಾರ್ವಜನಿಕರಿಗೆ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ಅರಿವು ಮೂಡಿಸಬೇಕು. ಸಾರ್ವಜನಿಕರ ಆರೋಗ್ಯಕ್ಕಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು ಹಳ್ಳಿಗಳಲ್ಲಿ ಗುರುಸಮಾನರಾಗಿರುವರು ಎಂದರು.
ಕುಮಾರಿ ಪ್ರಿಯಾ ಮತ್ತು ಪ್ರಾರ್ಥನಾ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಬಾಯಿ ಮತ್ತು ಮುಖದ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ.ಸುಮಾ ಸರಾಫ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಡಾ.ಗಿರೀಶ ಚೌರ ವಿಭಾಗದ ಚಟುವಟಿಕೆಗಳನ್ನು ವಿವರಿಸಿ ಕಿರುಚಿತ್ರಗಳನ್ನು ಪ್ರದರ್ಶಿಸಿದರು. ಡಾ.ಸೌಮ್ಯ ದೇಸಾಯಿ ಅತಿಥಿಗಳನ್ನು ಪರಿಚಯಿಸಿದರು. ಡಾ.ಶ್ರಾವ್ಯ ದೇವರಕೊಂಡ ವಂದಿಸಿದರು. ಡಾ.ಸೌಮ್ಯ ಸೂಳಿಭಾವಿ ಮತ್ತು ಡಾ.ಪಾರ್ವತಿ ನಿರೂಪಿಸಿದರು.ಬಾಯಿ ಮತ್ತು ಮುಖದ ಶಸ್ತ್ರಚಿಕಿತ್ಸಕರ ದಿನದ ಅಂಗವಾಗಿ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳನ್ನು ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬಾಗಲಕೋಟೆಯ ಮುಖ್ಯ ದಂತವೈದ್ಯಾಧಿಕಾರಿ ಡಾ.ಜಯಂತಕುಮಾರ, ದಂತ ವೈದ್ಯಾಧಿಕಾರಿ ಡಾ.ವಾಣಿ ಹುಣಸಿಕಟ್ಟಿ, ಆಶಾ ಕಾರ್ಯಕರ್ತೆಯರು, ಬಾಯಿ ಮತ್ತು ಮುಖದ ಶಸ್ತ್ರಚಿಕಿತ್ಸಾ ವಿಭಾಗದ ಡಾ.ಸತ್ಯಜೀತ ದಂಡಗಿ, ಡಾ.ಭೀಮಪ್ಪ, ಡಾ.ಆಶಾ ಬಡದೇಸಾಯಿ, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಮಹಾವಿದ್ಯಾಲಯದ ಎಲ್ಲ ವಿಭಾಗಳ ಮುಖ್ಯಸ್ಥರು, ವೈದ್ಯ ಸಿಬ್ಬಂದಿ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸಾರ್ವಜನಿಕರಲ್ಲಿ ಬಾಯಿ ಮತ್ತು ದಂತ ಆರೊಗ್ಯದ ಜಾಗೃತಿ ಮೂಡಿಸಲು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಕ್ಕಾಗಿ ಕಾಲೇಜಿನ ಬಾಯಿ ಮತ್ತು ಮುಖದ ಶಸ್ತ್ರಚಿಕಿತ್ಸಾ ತಜ್ಞರನ್ನು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಅಥಣಿ ಮತ್ತು ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಮ್.ಸಜ್ಜನ (ಬೇವೂರ) ಅಭಿನಂದಿಸಿರುವರು.