ಆಶಾ ಕಾರ್ಯಕರ್ತೆಯರ ಬಾಯಿ ಆರೋಗ್ಯ ತಪಾಸಣಾ ಶಿಬಿರ

KannadaprabhaNewsNetwork | Published : Apr 23, 2025 12:35 AM

ಸಾರಾಂಶ

ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಬಾಯಿಯ ಆರೋಗ್ಯ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೆಎಲ್ಇ ವಿಶ್ವನಾಥ ‌ಕತ್ತಿ ದಂತ ಮಹಾವಿದ್ಯಾಲಯದ ಸಹಯೋಗದೊಂದಿಗೆ ಆಶಾ ಕಾರ್ಯಕರ್ತೆಯರ ಬಾಯಿ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಗಾವಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಬಾಯಿಯ ಆರೋಗ್ಯ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೆಎಲ್ಇ ವಿಶ್ವನಾಥ ‌ಕತ್ತಿ ದಂತ ಮಹಾವಿದ್ಯಾಲಯದ ಸಹಯೋಗದೊಂದಿಗೆ ಆಶಾ ಕಾರ್ಯಕರ್ತೆಯರ ಬಾಯಿ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಗಾವಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿತ್ತು.

ಬೆಳಗಾವಿಯ ಕೆಎಲ್ಇ ವಿ.ಕೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್‌ನ ಸಾರ್ವಜನಿಕ ಆರೋಗ್ಯ ದಂತ ವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥೆ ಡಾ.ರೂಪಾಲಿ ಎಂ.ಸಂಕೇಶ್ವರಿ ನೇತೃತ್ವದ ತಂಡವು ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಟೂತ್‌ ಬ್ರಷ್ ಹಾಗೂ ಪೇಸ್ಟ್ ವಿತರಣೆ ಕಾರ್ಯಕ್ರಮ ಜರುಗಿತು.ಈ ಶಿಬಿರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಬಾಯಿ ಆರೋಗ್ಯದ ಕುರಿತು ಜಾಗೃತಿ ಹೊಂದುವುದು ಹಾಗೂ ಇದರಿಂದ ಆಗುವ ಅಡ್ಡ ಪರಿಣಾಮಗಳ ಕುರಿತು ಮಾಹಿತಿ ನೀಡಿಡಲಾಯಿತು.‌ ಶಿಬಿರದ ಪ್ರಮುಖ ಉದ್ದೇಶ ಬಾಯಿ ಆರೋಗ್ಯದ ಕುರಿತು ಆಶಾ ಕಾರ್ಯಕರ್ತೆರಿಗೆ ಮಾಹಿತಿ ನೀಡುವ ಜೊತೆಗೆ ಬಾಯಿ ಆರೋಗ್ಯ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಟೂತ್‌ ಪೇಸ್ಟ್ ಹಾಗೂ ಬ್ರಷ್ ವಿತರಿಸಲಾಯಿತು.

80ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಶಿಬಿರದಲ್ಲಿ ಭಾಗವಹಿಸಿ ಬಾಯಿ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಕುರಿತು ಡಾ.ರೂಪಾಲಿ ಎಂ.ಸಂಕೇಶ್ವರಿ ಮಾತನಾಡಿದರು.ಬೆಳಗಾವಿಯ ತಾಲೂಕು ಆರೋಗ್ಯ ಅಧಿಕಾರಿ ಡಾ. ರಮೇಶ್ ದಂಡಗಿ ಅವರ ಸಹಕಾರದಿಂದ‌ ಬಾಯಿ ಆರೋಗ್ಯ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ಕುರಿತು ಆಯೋಜಕರು ಕೃತಜ್ಞತೆ ಸಲ್ಲಿಸಿದರು.

ಆಶಾ ಕಾರ್ಯಕರ್ತೆಯರು ಪ್ರತಿನಿತ್ಯ ಗ್ರಾಮೀಣ ಭಾಗದ ಜನರ ಜೊತೆ ಸಂಪರ್ಕದಲ್ಲಿ ಇರುವುದರಿಂದ ಸಮುದಾಯದ ಆರೋಗ್ಯ ವೃದ್ಧಿಯಲ್ಲಿ ಮಹತ್ವದ ಬದಲಾವಣೆ ತರಲು ಸಾಧ್ಯ.

- ಡಾ.ರೂಪಾಲಿ ಎಂ.ಸಂಕೇಶ್ವರಿ, ಆರೋಗ್ಯ ದಂತ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ.

Share this article