ರೈತರು ಹಾಗೂ ಯುವಕರು ಶೂನ್ಯ ಬಂಡವಾಳವುಳ್ಳ ಸಾವಯವ ಮತ್ತು ನೈಸಗಿಕ ಕೃಷಿಯಿಂದ ವಿಷ ಮುಕ್ತ ಆಹಾರವನ್ನು ದೇಶಕ್ಕೆ ನೀಡುವ ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಿದಂತಾಗುತ್ತದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಞ ಸಿ.ಎಸ್. ನಿರಂಜನ್ ಕುಮಾರ್ ತಿಳಿಸಿದರು.
ಬಿಜೆಪಿ ರೈತ ಮೋರ್ಚಾ ವತಿಯಿಂದ ನೈಸರ್ಗಿಕ, ಸಾವಯವ ಕೃಷಿ ಕಾರ್ಯಾಗಾರ
ಕಾರ್ಯಕ್ರಮದಲ್ಲಿ ರಾಸಾಯನಿಕ ಮುಕ್ತ ಕೃಷಿ ಪದ್ಧತಿ ಅಳವಡಿಕೆ ಕುರಿತು ಮಾಹಿತಿ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ರೈತರು ಹಾಗೂ ಯುವಕರು ಶೂನ್ಯ ಬಂಡವಾಳವುಳ್ಳ ಸಾವಯವ ಮತ್ತು ನೈಸಗಿಕ ಕೃಷಿಯಿಂದ ವಿಷ ಮುಕ್ತ ಆಹಾರವನ್ನು ದೇಶಕ್ಕೆ ನೀಡುವ ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಿದಂತಾಗುತ್ತದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಞ ಸಿ.ಎಸ್. ನಿರಂಜನ್ ಕುಮಾರ್ ತಿಳಿಸಿದರು.
ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರಿಗಾಗಿ ಬಿಜೆಪಿ ರೈತ ಮೋರ್ಚಾದಿಂದ ನಡೆದ ನೈಸರ್ಗಿಕ ಮತ್ತು ಸಾವಯವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ವೈಜ್ಞಾನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡ ಪರಿಣಾಮ ದೇಶವು ಬಹಳಷ್ಟು ಸಂಕಷ್ಟವನ್ನು ಅನುಭವಿಸುವಂತಾಗಿದೆ. ದೇಶದ ೧೪೦ ಕೋಟಿ ಜನರಿಗೆ ನಾವೇ ವಿಷ ಆಹಾರವನ್ನು ನೀಡುವಂಥ ಪರಿಸ್ಥಿತಿ ಉದ್ಭವಾಗಿದೆ ಎಂದರು.
ಇದನ್ನು ತಪ್ಪಿಸಲು ಹಾಗೂ ಆರೋಗ್ಯವಂತ ಜೀವನ ನಡೆಸಲು ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೇ ಸಾವಯವ ಹಾಗೂ ನೈಸರ್ಗಿಕ ಕೃಷಿಯತ್ತ ರೈತರಿಗೆ ಉತ್ತೇಜನ ನೀಡಲು ಮುಂದಾಗಿದ್ದಾರೆ. ಸಾವಯವ ಕೃಷಿಯನ್ನು ಅವಲಂಬಿಸಿಕೊಳ್ಳುವ ರೈತರಿಗೆ ಕೇಂದ್ರದಿಂದ ಯೋಜನೆಗಳನ್ನು ರೂಪಿಸಿದ್ದಾರೆ. ಸಾವಯವ ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆ ವ್ಯವಸ್ಥೆ, ಇಂಥ ಉತ್ಪನ್ನಗಳಿಗೆ ಸ್ಪರ್ಧಾತ್ಮಕ ಬೆಲೆಯನ್ನು ಕೊಡಿಸಲು ಇ-ಮಾರುಕಟ್ಟೆ ವ್ಯವಸ್ಥೆ, ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ನೈಸರ್ಗಿಕ ಕೃಷಿಗೆ ಉತ್ತೇಜನ, ಕೃಷಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಈ ಬಗ್ಗೆ ಹೆಚ್ಚು ಬೋಧನೆ ಮಾಡಲಾಗುತ್ತಿದೆ. ಇದರ ಭಾಗವಾಗಿ ಬಿಜೆಪಿ ರೈತ ಮೋರ್ಚಾದಿಂದ 1 ತಿಂಗಳು ಸಾವಯವ ಕೃಷಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ವಿಧಾನಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ಮಾತನಾಡಿ, ರಾಸಾಯನಿಕ ಯುಕ್ತ ಆಹಾರವನ್ನು ಸೇವಿಸುತ್ತಿರುವ ಪರಿಣಾಮ ಮನುಷ್ಯಯ ಆಯುಷ್ಯ ಆರೋಗ್ಯವು ಕಡಿಮೆಯಾಗುತ್ತದೆ. ಕ್ಯಾನ್ಸರ್‌ರಂಥ ಮಾರಕ ಕಾಯಿಲೆಗಳು ಹೆಚ್ಚಾಗಿವೆ. ಇದನ್ನು ತಡೆಯಲು ಹಿಂದಿನ ವ್ಯವಸಾಯ ಪದ್ಧತಿಯನ್ನು ಆಳವಡಿಸಿಕೊಳ್ಳಲು ರೈತರು ಮುಂದಾಗಿದ್ದಾರೆ. ನಮ್ಮ ಹೆಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರು ಸಾವಯವ ಹಾಗೂ ನೈಸರ್ಗಿಕ ಕೃಷಿಯತ್ತ ರೈತರನ್ನು ಮರಳುವಂತೆ ಮಾಡಲು ಮುಂದಾಗಿದ್ದಾರೆ. ರೈತರು ಸಹ ಇದರ ಪ್ರಯೋಜವನ್ನು ಪಡೆದುಕೊಳ್ಳಬೇಕು ಎಂದರು.
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಧ ಎನ್.ಟಿ. ನರೇಶ್ ಮಾತನಾಡಿ, ರೈತರು ಶೂನ್ಯ ಹಾಗು ಸಾವಯವ ಕೃಷಿಯನ್ನು ಅವಲಂಬಿಸಿಕೊಂಡು ಕೃಷಿ ವಿಜ್ಞಾನಿಗಳ ಸಲಹೆ ಮಾರ್ಗದರ್ಶನದೊಂದಿಗೆ ಬೇಸಾಯ ಮಾಡಿದರೆ, ಹೆಚ್ಚಿನ ಲಾಭಗಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಕೃಷಿ ವಿಜ್ಞಾನ ಕೇಂದ್ರವನ್ನು ಸಂಪರ್ಕಿಸಿದರೆ, ಎಲ್ಲಾ ರೀತಿಯ ಮಾಹಿತಿಯನ್ನು ನೀಡುವುದಾಗಿ ತಿಳಿಸಿದರು.
ಕಾರ್ಯಾಗಾರದಲ್ಲಿ ಕೃಷಿ ವಿಜ್ಞಾನಿ ಡಾ. ಪಂಪನಗೌಡ, ಡಾ. ಶ್ರುತಿ ಹಾಗೂ ಯುವ ರೈತ ಪೃಥ್ವಿ ಕುಮಾರ್ ಸಾವಯವ ಕೃಷಿ ಬಗ್ಗೆ ಮಾಹಿತಿ ನೀಡಿದರು.
ಈ ವೇಳೆ ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಬೇಡರಪುರ ಬಸವಣ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ವೃಷಬೇಂದ್ರಪ್ಪ, ರೈತ ಮೊರ್ಚಾ ಪ್ರಧಾನ ಕಾರ್ಯದರ್ಶಿ ಹೊನ್ನಹಳ್ಳಿ ಪುರುಷೋತ್ತಮ್, ಚಂದ್ರಶೇಖರ್, ಕಾರ್ಯದರ್ಶಿ ಮರಿಯಾಲ ಮಹೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್.ಎಂ. ಬಸವಣ್ಣ, ಚುಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮುರ್ತಿ, ಹೊಸೂರು ಮಹೇಶ್, ಕುಮಾರಸ್ವಾಮಿ ಹಾಗೂ ರೈತ ಮುಖಂಡರು ಇದ್ದರು.
---
16ಸಿಎಚ್ಎನ್16
ಹರದನಹಳ್ಳಿಯಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ನೈಸರ್ಗಿಕ ಮತ್ತು ಸಾವಯವ ಕೃಷಿ ಕಾರ್ಯಾಗಾರ ನಡೆಯಿತು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ ಕುಮಾರ್ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.