3ಕ್ಕೆ. (ಬಾಟಂ) ಸಂಘಟನೆ ಬಲ ಇದ್ದಲ್ಲಿ ಭಯ ಎಂಬುದು ಇರೋದಿಲ್ಲ

KannadaprabhaNewsNetwork |  
Published : Oct 31, 2023, 01:15 AM IST
ಚಿತ್ರ: ಡಿ೩೦-ಬಿಡಿವಿಟಿ೨ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ವಿಜಯದಶಮಿ ಹಬ್ಬದ ಅಂಗವಾಗಿ ಭದ್ರಾವತಿಯಲ್ಲಿ ಪಥ ಸಂಚಲನ ನಡೆಯಿತು. | Kannada Prabha

ಸಾರಾಂಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘ

ಕನ್ನಡಪ್ರಭ ವಾರ್ತೆ, ಭದ್ರಾವತಿ ಹಿಂದೂ ಧರ್ಮದಲ್ಲಿನ ಪ್ರತಿಯೊಂದು ಹಬ್ಬ, ಸಂಪ್ರದಾಯ, ಸಂಸ್ಕೃತಿಗಳು ಆಚಾರ-ವಿಚಾರಗಳ ವಾಹಕವಾಗಿವೆ. ವಿಜಯದಶಮಿ ದುಷ್ಟಶಕ್ತಿಗಳ ಸಂಹಾರ ಹಾಗೂ ವಿಜಯದ ಸಂಕೇತವಾಗಿದೆ ಎಂದು ಆರ್‌ಎಸ್‌ಎಸ್ ಶಿವಮೊಗ್ಗ ವಿಭಾಗದ ಬೌದ್ಧಿಕ್ ಪ್ರಮುಖ್ ರಾಮಚಂದ್ರ ಭರಣಿ ಹೇಳಿದರು. ನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ವತಿಯಿಂದ ವಿಜಯದಶಮಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪಥ ಸಂಚಲನದಲ್ಲಿ ಪಾಲ್ಗೊಂಡು ಹಳೇ ನಗರದ ಕನಕ ಮಂಟಪ ಮೈದಾನದಲ್ಲಿ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ಸಂಘಟನೆ ಬಲ ಇದ್ದಲ್ಲಿ ಭಯ ಎಂಬುದು ಇರುವುದಿಲ್ಲ. ಬಲ ವಿರೋಧಿಗಳ ವಿರುದ್ಧ ಶಕ್ತಿ ಪ್ರದರ್ಶನವೂ ಅಲ್ಲ. ಆಕ್ರಮಣದ ಉದ್ದೇಶವೂ ಅಲ್ಲ. ಆದರೆ ಯಾರೆ ಆಗಲಿ ಅಥವಾ ಶತ್ರುಗಳು ನಮ್ಮ ಮೇಲೆ ದಾಳಿ ಮಾಡಬಾರದು ಎಂಬ ಉದ್ದೇಶವಾಗಿದೆ ಎಂದರು. ದುಷ್ಟಶಕ್ತಿಗಳ ಉಪಟಳ ಎಲ್ಲ ಕಾಲದಲ್ಲೂ ಇದ್ದು, ಹಿಂದೆಯೂ ಇತು, ಇಂದೂ ಇದೆ, ಮುಂದೆಯೂ ಇರುತ್ತದೆ. ಇದರ ಜೊತೆಯಲ್ಲಿ ಈಗ ನಮ್ಮೊಳಗೆ ಇದೆ. ದುಷ್ಟಶಕ್ತಿ ಶಿಷ್ಟಶಕ್ತಿಯನ್ನು ತನ್ನ ಹಿಡಿತದೊಳಗೆ ತೆಗೆದುಕೊಳ್ಳಬೇಕು ಎಂದು ಹವಣಿಕೆ ಮಾಡುತ್ತಿದೆ. ದೈವಶಕ್ತಿಯನ್ನು ನಿರ್ನಾಮ ಮಾಡಲು ಪ್ರಯತ್ನಿಸುತ್ತಿದೆ. ಇದರ ಕಾರಣ ನಾವು ಯಾವಾಗಲೂ ಶಿಷ್ಟಶಕ್ತಿಗಳ ಆರಾಧಕರಾಗಿರಬೇಕು, ಅವುಗಳು ನಮ್ಮನ್ನು ಕಾಪಾಡುತ್ತವೆ ಎಂದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಾರಂಭ ಆಗಿದ್ದು, ಕೇವಲ ಕಾಕತಾಳೀಯ ಅಲ್ಲ. ಅಥವಾ ಹತ್ತಾರು ಸಂಘದ ಜೊತೆ ಇದು ಒಂದು ಎಂಬ ಭಾವನೆಯಿಂದ ಅಲ್ಲ. ಇದರ ಪ್ರಾರಂಭದ ಮೊದಲು ಸುಮಾರು 8ರಿಂದ 10 ವರ್ಷಗಳ ಸುರ್ದೀಘ ಚರ್ಚೆಗಳು ನಡೆದು, ದೈತ್ಯಶಕ್ತಿಯ ಸಂಘಟನೆ ಪ್ರಾರಂಭವಾಯಿತು. ಇಂದು ಈ ಸಂಘಟನೆ ವಿಶ್ವದ ಅತ್ಯಂತ ಬಲಿಷ್ಠ ಸಂಘಟನೆಯಾಗಿ ಬೆಳೆದಿದೆ ಎಂದರು. ಆನಂದ್ ಅಧ್ಯಕ್ಷತೆ ವಹಿಸಿದ್ದರು. ಗಣವೇಷಧಾರಿ ಸ್ವಯಂ ಸೇವಕರ ಆಕರ್ಷಕ ಪಥ ಸಂಚಲನ ಬಿ.ಎಚ್. ರಸ್ತೆ ರೈಲ್ವೆ ನಿಲ್ದಾಣದಿಂದ ಪ್ರಾರಂಭವಾಗಿ ಹಾಲಪ್ಪ ಸರ್ಕಲ್, ಅಂಬೇಡ್ಕರ್ ವೃತ್ತ, ಹೊಸ ಸೇತುವೆ ರಸ್ತೆ, ಕೋಟೆ ಏರಿಯಾ, ದೊಡ್ಡ ಕುರುಬರ ಬೀದಿ, ಹಳದಮ್ಮ ಬೀದಿ, ಪೇಟೆ ಬೀದಿ, ಎನ್‌ಎಸ್‌ಟಿ ರಸ್ತೆ, ಸಿ.ಎನ್. ರಸ್ತೆ, ಶ್ರೀ ಬಸವೇಶ್ವರ ವೃತ್ತ ಮುಖಾಂತರ ಕನಕ ಮಂಟಪ ಮೈದಾನ ತಲುಪಿತು. - - - -ಡಿ30ಬಿಡಿವಿಟಿ2: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ವಿಜಯದಶಮಿ ಹಬ್ಬದ ಅಂಗವಾಗಿ ಭದ್ರಾವತಿಯಲ್ಲಿ ಪಥ ಸಂಚಲನ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ