ಪ್ರತಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಒದಗಿಸುವುದು ಸಂಸ್ಥೆ ಉದ್ದೇಶ: ಡಾ.ವಿಜಯ್‌ಕುಮಾರ್‌

KannadaprabhaNewsNetwork | Published : Dec 29, 2023 1:31 AM

ಸಾರಾಂಶ

ನಗರದ ಎಂಇಎಸ್ ವಿದ್ಯಾಸಂಸ್ಥೆಯ ಕಮಲಾಬಾಯಿ ನಾಗರಾಜಸಿಂಗ್ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದಲ್ಲಿ ಸಮಾಜದ ಪ್ರತಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಸಲುವಾಗಿ ಹಲವಾರು ವರ್ಷಗಳ ಹಿಂದೆಯೇ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಭದ್ರ ಬುನಾದಿ ಹಾಕಿ ಕೊಟ್ಟವರು ಸಂಸ್ಥೆ ಹಿರಿಯರು ಎಂದು ಮಲೆನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯ್‌ಕುಮಾರ್‌ ಹೇಳಿದರು.

- ನಗರದ ಎಂಇಎಸ್ ವಿದ್ಯಾಸಂಸ್ಥೆಯ ಕಮಲಾಬಾಯಿ ನಾಗರಾಜಸಿಂಗ್ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸಮಾಜದ ಪ್ರತಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಸಲುವಾಗಿ ಹಲವಾರು ವರ್ಷಗಳ ಹಿಂದೆಯೇ ವಿದ್ಯಾ ಸಂಸ್ಥೆ ಸ್ಥಾಪಿಸಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಭದ್ರ ಬುನಾದಿ ಹಾಕಿ ಕೊಟ್ಟವರು ಸಂಸ್ಥೆ ಹಿರಿಯರು ಎಂದು ಮಲೆನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯ್‌ಕುಮಾರ್‌ ಹೇಳಿದರು.ನಗರದ ಎಂಇಎಸ್ ವಿದ್ಯಾಸಂಸ್ಥೆಯ ಕಮಲಾಬಾಯಿ ನಾಗರಾಜಸಿಂಗ್ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಾಲಾ ವಾರ್ಷಿಕೋತ್ಸವ ಪೂರಕವಾಗಿದ್ದು ಮಕ್ಕಳು ಇಂತಹ ಅವಕಾಶವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ತಮ್ಮಲ್ಲಿ ಹುದುಗಿರುವ ಪ್ರತಿಭೆ ಅನಾವರಣಕ್ಕೆ ಮುಂದಾಗಬೇಕು ಎಂದು ಸಲಹೆ ಮಾಡಿದರು.

ನಗರದ ಹೃದಯ ಭಾಗದಲ್ಲಿರುವ ವಿದ್ಯಾಸಂಸ್ಥೆ ಪ್ರಾರಂಭದಲ್ಲಿ ಬೆರಳೆಣಿಕೆಯಷ್ಟು ಮಾತ್ರ ಮಕ್ಕಳು ಸೇರ್ಪಡೆ ಗೊಳ್ಳುತ್ತಿದ್ದು ಇದೀಗ ಸಾವಿರಾರು ವಿದ್ಯಾರ್ಥಿಗಳು ಸಂಸ್ಥೆ ಅಭ್ಯಾಸಿಸುವ ಮೂಲಕ ದೇಶ-ವಿದೇಶಗಳಲ್ಲಿ ಉದ್ಯೋಗದಲ್ಲಿದ್ದಾರೆ. ಜೊತೆಗೆ ಸುತ್ತಮುತ್ತಲಿನ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವಾರು ಶಾಖೆಗಳನ್ನು ತೆರೆದು ಸರ್ಕಾರಿ ಶಾಲೆಯಂತೆ ಬಿಂಬಿತ ವಾಗಿದೆ ಎಂದರು. ವಿದ್ಯಾಸಂಸ್ಥೆ ಉಪಾದ್ಯಕ್ಷೆ ರಾಧಾ ಸುಂದ್ರೇಶ್ ಮಾತನಾಡಿ, ಇಂದಿನ ಕಾಲದಲ್ಲಿ ಆಂಗ್ಲಭಾಷೆ ವ್ಯಾಮೋಹಕ್ಕೆ ಒಳಗಾಗಿ ಅಂಕಗಳಿಗಷ್ಟೇ ಸೀಮಿತರಾಗಬಾರದು. ಬಾಲ್ಯದಿಂದಲೇ ಮಕ್ಕಳಿಗೆ ಸಮಾಜ ಎದುರಿಸುವ ಆತ್ಮ ಸ್ಥೈರ್ಯ ತುಂಬಿಸುವ ಕೆಲಸ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಪೋಷಕರು ಮುಂದಾಗಬೇಕು ಎಂದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶಾರದಾ ಮಾತನಾಡಿ, ಪ್ರಸ್ತುತ ಪ್ರಾಥಮಿಕ ಶಾಲಾ ವಿಭಾಗದಲ್ಲಿ 400 ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸದಲ್ಲಿ ತೊಡಗಿದ್ದು ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಮಕ್ಕಳಿಗೆ ಆಯೋಜಿಸಿ ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಇಎಸ್ ಅಧ್ಯಕ್ಷ ಎಂ.ಕೇಶವಮೂರ್ತಿ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯೆ ಜಯಶ್ರೀ, ಆಡಳಿತ ವ್ಯವಸ್ಥಾಪಕಿ ಲಕ್ಷ್ಮೀ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಾದ ರಮ್ಯ, ಪೂರ್ಣೇಶ್. ಶಿಕ್ಷಕರಾದ ಅನುಷಾ, ಪಾರ್ವತಿ, ಸರಸ್ವತಿ ಉಪಸ್ಥಿತರಿದ್ದರು.

28 ಕೆಸಿಕೆಎಂ 2ಚಿಕ್ಕಮಗಳೂರಿನ ಎಂಇಎಸ್‌ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಡಾ. ಡಿ.ಎಲ್‌. ವಿಜಯಕುಮಾರ್‌ ಉದ್ಘಾಟಿಸಿದರು.

Share this article