ಅರ್ಹರಿಗೆ ಪಿಂಚಣಿ ಸೌಲಭ್ಯ ಕಲ್ಪಿಸಲು ಪಿಂಚಣಿ ಅದಾಲತ್ ನಡೆಸಿ

KannadaprabhaNewsNetwork |  
Published : Nov 25, 2026, 01:45 AM IST
24ಎಚ್ಎಸ್ಎನ್3 :  | Kannada Prabha

ಸಾರಾಂಶ

ಹೋಬಳಿವಾರು ಪಿಂಚಣಿ ಅದಾಲತ್ ನಡೆಸುವಂತೆ ನಿರ್ದೇಶನ ನೀಡಿದರು. ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ಪಿಂಚಣಿ ಆದಾಲತ್ ಕಾರ್ಯಕ್ರಮ ಆಯೋಜಿಸಿ ರದ್ದಾಗಿರುವಂತಹ ಅರ್ಹ ಪಿಂಚಣಿಗಳನ್ನು ಮರು ಚಾಲನೆಗೊಳಿಸುವಂತೆ ತಿಳಿಸಿದರಲ್ಲದೆ, ರದ್ದಾಗಿರುವ ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ನಾಡಕಚರಿ ಅಥವಾ ತಾಲ್ಲೂಕು ಕಚೇರಿಗಳಿಗೆ ಸೂಕ್ತ ದಾಖಲಾತಿಗಳನ್ನು ನೀಡಿ ರದ್ದಾಗಿರುವ ಪಿಂಚಣಿಯನ್ನು ಮರು ಚಾಲನೆಗೆ ಸಹಕರಿಸುವಂತೆ ತಿಳಿಸಿದರು. ಕಂದಾಯ ಗ್ರಾಮಗಳ ರಚನೆಗೆ ಗುರುತಿಸಿರುವ ಗ್ರಾಮವಾರು ಮಾಹಿತಿಯನ್ನೊಳಗೊಂಡ ಪಟ್ಟಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಕಲಚೇತನರ ವೇತನವನ್ನು ಅರ್ಹರಿಗೆ ದೊರೆಯಬೇಕು, ಈ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕಂದಾಯ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಹೋಬಳಿವಾರು ಪಿಂಚಣಿ ಅದಾಲತ್ ನಡೆಸುವಂತೆ ನಿರ್ದೇಶನ ನೀಡಿದರು. ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ಪಿಂಚಣಿ ಆದಾಲತ್ ಕಾರ್ಯಕ್ರಮ ಆಯೋಜಿಸಿ ರದ್ದಾಗಿರುವಂತಹ ಅರ್ಹ ಪಿಂಚಣಿಗಳನ್ನು ಮರು ಚಾಲನೆಗೊಳಿಸುವಂತೆ ತಿಳಿಸಿದರಲ್ಲದೆ, ರದ್ದಾಗಿರುವ ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ನಾಡಕಚರಿ ಅಥವಾ ತಾಲ್ಲೂಕು ಕಚೇರಿಗಳಿಗೆ ಸೂಕ್ತ ದಾಖಲಾತಿಗಳನ್ನು ನೀಡಿ ರದ್ದಾಗಿರುವ ಪಿಂಚಣಿಯನ್ನು ಮರು ಚಾಲನೆಗೆ ಸಹಕರಿಸುವಂತೆ ತಿಳಿಸಿದರು. ಕಂದಾಯ ಗ್ರಾಮಗಳ ರಚನೆಗೆ ಗುರುತಿಸಿರುವ ಗ್ರಾಮವಾರು ಮಾಹಿತಿಯನ್ನೋಳಗೊಂಡ ಪಟ್ಟಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಹಸೀಲ್ದಾರ್‌ ಕಚೇರಿಗಳ ದುರಸ್ತಿ, ಹೊಸ ಕಟ್ಟಡ ನಿರ್ಮಾಣ ಹಾಗೂ ನಾಡ ಕಚೇರಿಗಳ ದುರಸ್ತಿಗೆ ಸಂಬಧಿಸಿದಂತೆ ಪ್ರಸ್ತಾವನೆ ಸಲ್ಲಿಸಲು ಹಾಗೂ ಕಚೇರಿ ನಿರ್ವಹಣೆಗೆ ಅಗತ್ಯವಿರುವ ಅನುದಾನಕ್ಕೆ ಮನವಿ ಸಲ್ಲಿಸಲು ನಿರ್ದೇಶನ ನೀಡಿದರು. ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಿ ನೋಂದಣಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಪ್ರಭಾರ ಉಪ ವಿಭಾಗಾಧಿಕಾರಿಗಳಾದ ರಮೇಶ್, ತಹಸೀಲ್ದಾರ್ ಗಳು ಹಾಗೂ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಪಾನಿಂದಲೇ ಆಶಾ ಮನವೊಲಿಕೆಗೆ ಸಿಎಂ ಯತ್ನ
ವೈದ್ಯರ ಚೀಟಿ ಇಲ್ಲದೆ ಗರ್ಭಪಾತ ಮಾತ್ರೆಗಳ ಮಾರಾಟ: ಅಧಿಕಾರಿಗಳ ದಾಳಿ