ಶಾಸಕ ಟಿ.ಡಿ.ರಾಜೇಗೌಡ ಕರೆ
ಎಲ್ಲಾ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿ ಸಂಘಟಿತರಾಗಿ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಯಶಸ್ವಿಗೊಳಿಸಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಕರೆ ನೀಡಿದರು.
ಅ.27, 28ರಂದು ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆತಿಥ್ಯದಲ್ಲಿ ನಡೆಯುವ ಜಿಲ್ಲಾ ಮಟ್ಟದ 15, 17ರ ವಯೋಮಿತಿಯ ಬಾಲಕ, ಬಾಲಕಿಯರ ಅಥ್ಲೆಟಿಕ್ಸ್ ಕೀಡಾಕೂಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಸುವ ಆತಿಥ್ಯ ಒದಗಿರುವುದು ಕ್ಷೇತ್ರಕ್ಕೆ ಹೆಮ್ಮೆ ವಿಚಾರ. ಎಲ್ಲರೂ ಒಗ್ಗೂಡಿ ಕಾರ್ಯಕ್ರಮ ಮಾಡಿ ಅತ್ಯಂತ ಯಶಸ್ವಿಗೊಳಿಸಬೇಕು. ಖರ್ಚು ವೆಚ್ಚಗಳ ಬಗ್ಗೆ ಸೂಕ್ತ ಆಯವ್ಯಯ ತಯಾರಿಸಿ ಅದರಂತೆ ಕಾರ್ಯಕ್ರಮ ನಡೆಸಬೇಕು.ಸರ್ಕಾರದಿಂದ ಕ್ರೀಡಾಕೂಟಕ್ಕೆ ಅನುದಾನ ಲಭಿಸಲಿದ್ದು, ಇನ್ನುಳಿದ ಹಣ ಆಯ್ದ ದಾನಿಗಳಿಂದ ಆಯೋಜಕರು ಸಂಗ್ರಹಿ ಸಲು ಕ್ರಮಕೈಗೊಳ್ಳಬೇಕು. ಕ್ರೀಡಾಕೂಟಕ್ಕೆ ವೈಯಕ್ತಿಕವಾಗಿ ಧನ ಸಹಾಯ ಮಾಡುವುದಾಗಿ ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಮೇಶ್ ಮಾತನಾಡಿ, ಅ.27, 28ರಂದು ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದ್ದು, 2 ದಿನಗಳಲ್ಲಿ ಕ್ರೀಡಾಪಟುಗಳು, ಶಿಕ್ಷಕರು, ತೀರ್ಪುಗಾರರು ಸೇರಿದಂತೆ 4 ಸಾವಿರ ಜನ ಸೇರುವ ನಿರೀಕ್ಷೆಯಿದೆ.
ಎಸ್‌ಡಿಎಂಸಿ ಅಧ್ಯಕ್ಷ ಎಂ.ಜೆ.ಮಹೇಶ್ ಆಚಾರ್ಯ, ಸರ್ಕಾರಿ ಪಿಯು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಎಸ್.ಜಯಪ್ರಕಾಶ್, ಪಿಸಿಎಆರ್‌ಡಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಎಸ್.ಕೌಶಿಕ್ ಪಟೇಲ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಲಿಲ್ಲಿ ಪಾಯ್ಸ್, ಪಿಡಿಓ ಕಾಶಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ರವಿಚಂದ್ರ, ಬಿ.ಕೆ.ಮಧುಸೂದನ್, ಪ್ರಮುಖರಾದ ಕೊಟ್ರೇಶಪ್ಪ, ಓ.ಡಿ.ಸ್ಟೀಫನ್, ಬಿ.ಎಚ್.ಮನುಕುಮಾರ್, ಹಿರಿಯಣ್ಣ, ಕಟ್ಟೇಗೌಡ, ಸುರೇಂದ್ರ, ತಮನ್ನಾ, ಸಿದ್ದರಾಜು ಮತ್ತಿತರರು ಹಾಜರಿದ್ದರು.೦೫ಬಿಹೆಚ್‌ಆರ್ ೧: