ಬೂತ್‌ ಮಟ್ಟದಿಂದ ಸಂಘಟನೆ ಮಾಡಿ: ಅರುಣಕುಮಾರ

KannadaprabhaNewsNetwork |  
Published : Feb 05, 2024, 01:50 AM IST
ಫೋಟೋ೪ಬಿವೈಡಿ೨ | Kannada Prabha

ಸಾರಾಂಶ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಷೇತ್ರವನ್ನು ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿಗೊಳಿಸಲಾಗಿದೆ.

ಬಿಜೆಪಿ ಕಾರ್ಯಕರ್ತರಿಗೆ ನೂತನ ಜಿಲ್ಲಾಧ್ಯಕ್ಷ ಕರೆ

ಕನ್ನಡಪ್ರಭ ವಾರ್ತೆ ಬ್ಯಾಡಗಿ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಳೆದ ಬಾರಿಗಿಂತ ಹೆಚ್ಚು ಮತಗಳನ್ನು ನೀಡಿ ಆಯ್ಕೆಗೊಳಿಸಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಪಕ್ಷ ಮತ್ತೊಮ್ಮೆ ಆಡಳಿತಕ್ಕೆ ತರಲು ಬೂತ್‌ ಮಟ್ಟದಿಂದ ಸಂಘಟನೆ ಮಾಡುವಂತೆ ನೂತನ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಕಾರ್ಯಕರ್ತರಿಗೆ ಕರೆ ನೀಡಿದರು.

ಪಟ್ಟಣದ ಬಿಜೆಪಿ ಮುಖಂಡ ಬಸವರಾಜ ಛತ್ರದ ನಿವಾಸದಲ್ಲಿ ಭಾನುವಾರ ಜರುಗಿದ ಕಾರ್ಯಕರ್ತರ ಆಪ್ತ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಷೇತ್ರವನ್ನು ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿಗೊಳಿಸಲಾಗಿದೆ. ಹತ್ತಾರು ಜನಪರ ಯೋಜನೆ ಜಾರಿಗೊಳಿಸುವ ಮೂಲಕ ಕ್ಷೇತ್ರಗಳಲ್ಲಿ ಸಾಕಷ್ಟು ಕಾಮಗಾರಿಗಳು ನಡೆದಿವೆ. ಕೇಂದ್ರದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ವಿಶ್ವಮಟ್ಟದಲ್ಲಿ ಗುರುತಿಸುವ ಮೂಲಕ ಭಾರತದ ಕೀರ್ತಿ ಹೆಚ್ಚಿಸಿದ್ದಾರೆ. ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಮೂಲಭೂತ ಸೌಲಭ್ಯ ನೀಡುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ತಂದಿದ್ದಾರೆ. ಈ ಹಿನ್ನೆಲೆ ಪ್ರಧಾನಿಯವರಿಗೆ ಮತ್ತೊಮ್ಮೆ ಆಡಳಿತ ನೀಡಲು ಜನತೆ ನಿರ್ಧರಿಸಿದ್ದು, ಹಿಂದಿನ ಬಾರಿ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಪಡೆದ ಮತಗಳಿಗಿಂತ ಹೆಚ್ಚು ಬೆಂಬಲ ನೀಡಬೇಕು. ಇದಕ್ಕಾಗಿ ಜಿಲ್ಲೆಯ ಎಲ್ಲ ಕಾರ್ಯಕರ್ತರು ಬೂತ್‌ ಮಟ್ಟದಿಂದ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿದರು.

ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡುವ ಮೂಲಕ ಕಾರ್ಯಕರ್ತರ ಸಮಾಲೋಚನೆ ಸಭೆ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಅಧ್ಯಕ್ಷರು, ಸೇರಿದಂತೆ ಎಲ್ಲ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ ಎಂದರು.

ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಹಿಂದಿನ ಅವಧಿಯಲ್ಲಿ ತಾಲೂಕಿಗೆ ಹೆಚ್ಚು ಅನುದಾನ ತಂದು ಅಭಿವೃದ್ಧಿಪಡಿಸಿರುವೆ. ಜನರು ಸತ್ಯವನ್ನು ಎಂದಿಗೂ ಮರೆಯುವುದಿಲ್ಲ. ಹಿಂದಿನ ಬಾರಿ ಲೋಕಸಭೆ ಚುನಾವಣೆಯಲ್ಲಿ ತಾಲೂಕಿನಿಂದ ಅತಿಹೆಚ್ಚು ಮತ ನೀಡಿ ಅಭ್ಯರ್ಥಿಗೆ ಹೆಚ್ಚು ಬೆಂಬಲ ನೀಡಲಾಗಿತ್ತು. ಈ ಬಾರಿಯೂ ಅಭ್ಯರ್ಥಿಗೆ ನಾವು ಹೆಚ್ಚು ಮತ ನೀಡಬೇಕಿದ್ದು, ಇದಕ್ಕಾಗಿ ಪಕ್ಷವನ್ನು ಗ್ರಾಮ ಮಟ್ಟದಿಂದ ಸಂಘಟಿಸಬೇಕಿದೆ ಎಂದರು.

ಈ ವೇಳೆ ಪುರಸಭೆ ಸದಸ್ಯರಾದ ಬಸವರಾಜ ಛತ್ರದ, ಚಂದ್ರಪ್ಪ ಶೆಟ್ಟರ, ಚಂದ್ರಪ್ಪ ಶೆಟ್ಟರ, ವಿನಯಕುಮಾರ ಹಿರೇಮಠ, ಕಲಾವತಿ ಬಡಿಗೇರ, ಸರೋಜ ಉಳ್ಳಾಗಡ್ಡಿ, ಪಕ್ಕೀರಮ್ಮ ಚಲವಾದಿ, ಬಿಜೆಪಿ ಪದಾಧಿಕಾರಿಗಳಾದ ಶಿವಯೊಗಿ ಶಿರೂರು, ಪ್ರಶಾಂತ ಯಾದವಾಡ, ವಿರೇಂದ್ರ ಶೆಟ್ಟರ, ನಾಗರಾಜ ಹಾವನೂರು, ಪರಶುರಾಮ ಉಜನಿಕೊಪ್ಪ, ಸುರೇಶ ಉದ್ಯೊಗಣ್ಣನವರ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!