ಡೆಂಘೀ ಪ್ರಕರಣ ತಡೆಗೆ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಆಯೋಜಿಸಿ: ಡೀಸಿ ಡಾ.ಕುಮಾರ

KannadaprabhaNewsNetwork |  
Published : Aug 07, 2024, 01:00 AM IST
5ಕೆಎಂಎನ್ ಡಿ15 | Kannada Prabha

ಸಾರಾಂಶ

ಜುಲೈನಲ್ಲಿ ಒಟ್ಟು 395 ಪ್ರಕರಣ ದಾಖಲಾಗಿವೆ. ಮಂಡ್ಯ ನಗರ - 75, ಮಂಡ್ಯ ಗ್ರಾಮಾಂತರ - 147, ಮದ್ದೂರು - 61, ಮಳವಳ್ಳಿ - 24, ಪಾಂಡವಪುರ- 19, ಶ್ರೀರಂಗಪಟ್ಟಣ - 34, ಕೆ ಆರ್ ಪೇಟೆ - 14, ನಾಗಮಂಗಲ - 21 ಪ್ರಕರಣಗಳು ದಾಖಲಾಗಿವೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಆರೋಗ್ಯಾಕಾರಿಗಳಿಗೆ ಸಲಹೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡೆಂಘೀ ನಿಯಂತ್ರಣ ಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿ, ಜುಲೈನಲ್ಲಿ ಒಟ್ಟು 395 ಪ್ರಕರಣ ದಾಖಲಾಗಿವೆ. ಮಂಡ್ಯ ನಗರ - 75, ಮಂಡ್ಯ ಗ್ರಾಮಾಂತರ - 147, ಮದ್ದೂರು - 61, ಮಳವಳ್ಳಿ - 24, ಪಾಂಡವಪುರ- 19, ಶ್ರೀರಂಗಪಟ್ಟಣ - 34, ಕೆ ಆರ್ ಪೇಟೆ - 14, ನಾಗಮಂಗಲ - 21 ಪ್ರಕರಣಗಳು ದಾಖಲಾಗಿವೆ ಎಂದರು.

ಹಾಟ್ ಸ್ಪಾಟ್ ಗ್ರಾಮ, ಪ್ರದೇಶದಲ್ಲಿ 100 ಮೀಟರ್ ಅಂತರದಲ್ಲಿ 2 ಡೆಂಘೀ ಪ್ರಕರಣಗಳು ವರದಿಯಾದಲ್ಲಿ ಅಂತಹ ಗ್ರಾಮ ಪ್ರದೇಶವನ್ನು ಡೆಂಘೀ ಹಾಟ್ ಸ್ಪಾಟ್ ಎಂದು ಗುರುತಿಸಿ ರೋಗ ನಿಯಂತ್ರಣವನ್ನು ಸಮರೋಪಾದಿಯಲ್ಲಿ ಮಾಡಲಾಗುತ್ತಿದೆ. ತ್ವರಿತ ಜ್ವರ ಸಮೀಕ್ಷೆ ಹಾಗೂ ಈಡಿಸ್ ಲಾರ್ವ ಸಮೀಕ್ಷೆ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಡಿಎಚ್ ಒ ಡಾ.ಮೋಹನ್ ತಿಳಿಸಿದರು.

ಫಿವರ್ ಕ್ಲಿನಿಕ್ ಹಾಟ್ ಸ್ಪಾಟ್ ಗ್ರಾಮಗಳಲ್ಲಿ ತಾತ್ಕಾಲಿಕ ಕ್ಲಿನಿಕ್ ತೆರೆದು ಡೆಂಘೀ ಜ್ವರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜ್ವರ ಪ್ರಕರಣಗಳಿಗೆ ರಕ್ತ ಲೇಪನ ಪರೀಕ್ಷೆ ಹಾಗೂ ಸಂಶಯಾಸ್ಪದ ಡೆಂಘೀ ಪ್ರಕರಣಗಳಿಂದ ರಕ್ತ ಮಾದರಿ ಸಂಗ್ರಹಿಸಿ ಜಿಲ್ಲಾ ಸರ್ವೆಲೆ ಲ್ಯಾಬ್‌ನಲ್ಲಿ ಪರೀಕ್ಷೆಗೋಳಪಡಿಸಲಾಗುತ್ತಿದೆ. ಇದುವರೆಗೂ 6 ಫಿವರ್ ಕ್ಲಿನಿಕ್ ಕರ್ತವ್ಯ ನಿರ್ವಹಿಸುತ್ತಿದೆ ಎಂದರು.

ನೀಮ್ ಆಯಿಲ್ ವಿತರಣೆ ಹಾಟ್ ಸ್ಪಾಟ್ ವರದಿಯಾದ ಗ್ರಾಮಗಳಲ್ಲಿ ಬಿಪಿಎಲ್ ಕುಟುಂಬದವರಿಗೆ ಬೇವಿನ ಎಣ್ಣೆ ವಿತರಿಸಲಾಗುತ್ತಿದೆ. ಜೊತೆಗೆ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಹಾಸ್ಟಲ್ ವಿದ್ಯಾರ್ಥಿಗಳಿಗೆ ಡೆಂಘೀ ನಿಯಂತ್ರಣದ ಬಗ್ಗೆ ಆರೋಗ್ಯ ಶಿಕ್ಷಣ ನೀಡಿ ಅರಿವು ಮೂಡಿಸಿ ಬೇವಿನ ಎಣ್ಣೆ ವಿತರಿಸಲಾಗುತ್ತಿದೆ. ಇದುವರೆಗೂ 50 ಎಂ ಎಲ್ ನ 4903 ಬಾಟಲಿಗಳನ್ನು ವಿತರಿಸಲಾಗಿದೆ ಎಂದರು.

ಸಭೆಯಲ್ಲಿ ಜಿಪಂ ಸಿಇಒ ಶೇಕ್ ತನ್ವಿರ್ ಆಸೀಫ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ನಿವೃತ್ತ ಡಿಹೆಚ್‌ಒ ಡಾ.ಮರೀಗೌಡ, ಮಲೇರಿಯಾ ನಿಯಂತ್ರಣಾಕಾರಿ ಡಾ. ಕಾಂತಾರಾಜು, ಶಿಕ್ಷಣಾಧಿಕಾರಿ ಚಂದ್ರಕಾಂತ, ಮಿಮ್ಸ ವೈದ್ಯ ಡಾ. ಹರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ