ಸಮನ್ವಯ ಸಮಿತಿ ಸಭೆಯಲ್ಲಿ ಎಡಿಸಿ ಬಿ.ಟಿ.ಕುಮಾರಸ್ವಾಮಿಕನ್ನಡಪ್ರಭವಾರ್ತೆ ಚಿತ್ರದುರ್ಗ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತ ಉತ್ಪಾದಕ ಸಂಸ್ಥೆಗಳಿಗೆ ಮೂರು ತಿಂಗಳ ಸ್ಯಾಚುರೇಷನ್ ಡ್ರೆವ್ ತರಬೇತಿಗಾಗಿ ಜಿಲ್ಲಾ ಮಟ್ಟದ ರೈತ ಉತ್ಪಾದಕರ ಸಂಸ್ಥೆಗಳ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಹಾಗೂ ಸಂಬಂಧಿತ ವಿವಿಧ ಇಲಾಖೆಗಳು ಆಸಕ್ತಿ ವಹಿಸಿ ತಿಂಗಳಿಗೆ ಕನಿಷ್ಟ ಎರಡು ರೈತ ಉತ್ಪಾದಕ ಸಂಸ್ಥೆಗಳ ರಚನೆ ಮಾಡಬೇಕು. ರೈತರಿಗೆ ಅಧ್ಯಯನ ಶಿಬಿರ, ತರಬೇತಿ, ಕಡಿಮೆ ಬಂಡಾವಳ ಹೂಡಿಕೆ ಮಾಡಿ ಹೆಚ್ಚಿನ ಆಧಾಯ ಗಳಿಸುವುದು ಹೇಗೆ ಎಂಬುವುದ ಕುರಿತು ರೈತರಿಗೆ ಅರಿವು ಮೂಡಿಸಿ, ಕೃಷಿ ಕ್ಷೇತ್ರದ ಸುಧಾರಣೆಗೆ ಹಾಗೂ ಕೃಷಿಯಲ್ಲಿ ಆಧುನಿಕರಣಕ್ಕೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ಕೃಷಿ ಇಲಾಖೆಯಡಿ 20, ತೋಟಗಾರಿಕೆ ಇಲಾಖೆಯಡಿ 6, ನಬಾರ್ಡ್ ಅಡಿ 7 ಸೇರಿ ಒಟ್ಟು33 ರೈತ ಉತ್ಪಾದಕ ಸಂಘಗಳನ್ನು ರಚನೆ ಮಾಡಲಾಗಿದೆ. ಇದರಲ್ಲಿ 21 ರೈತ ಉತ್ಪಾದಕ ಸಂಘಗಳು ಬೀಜ ಮಾರಾಟ, ರಸಗೊಬ್ಬರ ಹಾಗೂ ಕೀಟ ನಾಶಕ ಮಾರಾಟ ಮಾಡುವ ಪರವಾನಿಗೆ ಪಡೆದಿವೆ. 17ಎಪಿಎಂಸಿ ಹಾಗೂ 9 ಎಫ್‌ಎಸ್‌ಎಸ್‌ಎಐ ಪರವಾನಿಗೆ ಪಡೆದಿವೆ. 22 ರೈತ ಸಂಘಗಳು ಜಿಎಸ್‌ಟಿ ನೊಂದಣಿ ಮಾಡಿಕೊಂಡಿವೆ ಎಂದು ತಿಳಿಸಿದರು.ಈಖ ವೇಳೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಪಶುವೈದ್ಯಕೀಯ ತುರ್ತು ಚಿಕಿತ್ಸೆಯ ಟೋಲ್ ಫ್ರೀ ಸಂಖ್ಯೆ 1962 ಪೋಸ್ಟರ್ ಬಿಡುಗಡೆ ಮಾಡಲಾಯಿತು.