ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿ.ಎಲ್.ಎ-೨ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಮುಂದಿನ ದಿನಗಳಲ್ಲಿ ಗ್ರಾಪಂ, ತಾಪಂ ಹಾಗೂ ಜಿಪಂ ಚುನಾವಣೆಗಳು ಜರುಗಲಿದ್ದು, ಈಗಿನಿಂದಲೇ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಮೂಲಕ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಯೋಜನೆ ರೂಪಿಸುವಂತೆ ಕಾರ್ಯಕರ್ತರು ಹಾಗೂ ಮುಖಂಡರು ತಮ್ಮಲ್ಲಿರುವ ಭಿನ್ನಾಭಿಪ್ರಾಯವನ್ನು ಬದಿಗೊತ್ತಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವಂತೆ ಹೇಳಿದರು.ಕೇಂದ್ರ ಸರ್ಕಾರ ಮತದಾರರ ಪಟ್ಟಿ ಪರಿಷ್ಕರಣೆ ಯೋಜನೆ ಜಾರಿಗೊಳಿಸಿದೆ. ಬೂತ್ ಮಟ್ಟದ ಕಾರ್ಯಕರ್ತರು ಸೇರ್ಪಡೆಗೊಳಿಸುವ ಜತೆಗೆ ಅನಧಿಕೃತ ಮತದಾರರನ್ನು ಪತ್ತೆ ಹಚ್ಚಿ ಸಂಬಂಧಿಸಿದವರಿಗೆ ಮಾಹಿತಿ ನೀಡಬೇಕು. ಕಾಂಗ್ರೆಸ್ ಪಕ್ಷವು ಮತದಾರರ ಪಟ್ಟಿ ಪರಿಷ್ಕರಣೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಪ್ರತಿಯೊಬ್ಬರೂ ಜಾಗೃತರಾಗಿ ಕಾರ್ಯ ನಿರ್ವಹಿಸುವಂತೆ ಸಲಹೆ ನೀಡಿದರು.
ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಸ್ತುವಾರಿ ಅಶ್ವಿನಿ ಮಾತನಾಡಿ, ಮುಂದಿನ ೨೦೨೮ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಅದರಂತೆಯೇ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಶಾಸಕರಾಗಿ ಆಯ್ಕೆಯಾಗಲಿದ್ದು, ಕಾರ್ಯಕರ್ತರು, ಮುಖಂಡರು ಹೆಚ್ಚಿನ ಶಕ್ತಿ ತುಂಬಬೇಕೆಂದು ಮನವಿ ಮಾಡಿದರು.
ಈ ವೇಳೆ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಸಿ.ಕೆ.ಸತೀಶ್, ಯುವ ಮೋರ್ಚ ಜಿಲ್ಲಾಧ್ಯಕ್ಷ ಹಾಗಲಹಳ್ಳಿ ರಘು, ನಗರ ಘಟಕದ ಅಧ್ಯಕ್ಷ ಎನ್.ಜೆ.ಮಧುಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಸಿದ್ದು, ಮುಖಂಡರಾದ ಎಂ.ಸತೀಶ್, ಚಿಕ್ಕಅಂಕನಹಳ್ಳಿ ಮನುಕುಮಾರ್, ಯುವ ಮೋರ್ಚಾ ಉಪಾಧ್ಯಕ್ಷ ಎಸ್.ಕೆ.ಅಭಿಷೇಕ್‌ಗೌಡ ಇತರರಿದ್ದರು.