ಕನ್ನಡಪ್ರಭ ವಾರ್ತೆ ಗದಗ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ನಿಮಿತ್ತ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ಬಹುಮಾನ ವಿತರಣೆ ಹಾಗೂ ವಿಶೇಷ ಸಾಧನೆ ಮಾಡಿದ ವಿಕಲಚೇತನರಿಗೆ ಸನ್ಮಾನ ಕಾರ್ಯಕ್ರಮವು ದಿನಾಚರಣೆಯ ದಿನದಂದೇ ಜರುಗಲಿದೆ. ವೇದಿಕೆ ವ್ಯವಸ್ಥೆ, ಊಟೋಪಹಾರದ ವ್ಯವಸ್ಥೆ, ಆಸನದ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಲೋಪದೋಷಗಳಾಗದಂತೆ ಕ್ರಮ ವಹಿಸಬೇಕು ಎಂದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ ಎಸ್.ಎನ್. ದಿನಾಚರಣೆಯ ಸಿದ್ಧತೆ ಮತ್ತು ಕ್ರೀಡಾಕೂಟದ ವಿವರ ತಿಳಿಸಿದರು.ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ, ನಗರಸಭೆ ಪೌರಾಯುಕ್ತ ರಾಜರಾಮ ಪವಾರ, ವಾರ್ತಾ ಇಲಾಖೆಯ ವಸಂತ ಮಡ್ಲೂರ, ಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವಿವಿಧ ಸಂಘ ಸಂಸ್ಥೆ ಮತ್ತು ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.ವಿಕಲಚೇತನರ ದಿನಾಚರಣೆ ನಿಮಿತ್ತ ನ. 24ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9ಕ್ಕೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗುತ್ತಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಸ್ಥಳದಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸೌಲಭ್ಯಕ್ಕಾಗಿ ಆ್ಯಂಬುಲೆನ್ಸ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳು ಒದಗುವಂತೆ ಕ್ರಮ ವಹಿಸಬೇಕು.