ಕನ್ನಡಪ್ರಭ ವಾರ್ತೆ ಮೈಸೂರು
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನ ಕೇಂದ್ರ ವತಿಯಿಂದ ಘಟಿಕೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಅಭಿವೃದ್ಧಿ ದೃಷ್ಟಿಕೋನ ಮತ್ತು ಸಮಕಾಲಿನ ಜಗತ್ತು ವಿಷಯ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಬಾ ಸಾಹೇಬರು ದೇಶಕಟ್ಟಲು, ಜನರನ್ನು ಬೆಸೆಯಲು, ಸಾಂಸ್ಕೃತಿಕವಾದ ಬದುಕಿನ ನಿರೂಪಣೆಗೆ ನೀಡಿರುವ ಸತ್ವಭರಿತ ಅನೇಕ ಕೊಡುಗೆಯ ಬಗ್ಗೆ ಎಲ್ಲರೂ ಚಿಂತನೆ ಮಾಡಬೇಕಿದೆ. ಅಸಮಾನತೆ ತೊರೆದು ಸಮ ಸಮಾಜದ ಸಾಧನೆಯ ಗುರಿಯ ಕಡೆಗೆ ಹೆಜ್ಜೆ ಇಡಬೇಕಿದೆ ಎಂದು ಅವರು ಹೇಳಿದರು.ಸಂವಿಧಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅದರಂತೆ ವಿಶ್ವವಿದ್ಯಾಲಯಗಳಲ್ಲಿ ಸಂವಿಧಾನ ಕುರಿತು ಸಮಗ್ರವಾದ ಅಧ್ಯಯನ ನಡೆಸಬೇಕಿದೆ. ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ಸಂವಿಧಾನದ ಆಶಯಗಳನ್ನು ಬಿತ್ತಬೇಕಿದೆ. ಈ ಮೂಲಕ ಅಂಬೇಡ್ಕರ ಅವರ ಕನಸಾದ ಸಮೃದ್ಧ ಭಾರತದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದು ಅವರು ಕರೆ ನೀಡಿದರು.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಮಾತನಾಡಿ, ಶಿಕ್ಷಣವು ಸುಲಭವಾಗಿ ಕೈಗೆಟುಕದ ವೇಳೆ ಶೋಷಿತ ಸಮುದಾಯದ ವ್ಯಕ್ತಿ ವರ್ಣಬೇದ, ಜಾತಿಭೇದದ ನಡುವೆ ಸ್ವಾತಂತ್ರ್ಯ ಪೂರ್ವದಲ್ಲಿ ವಿದೇಶದಲ್ಲಿ ಉನ್ನತ ಪದವಿ ಪಡೆದವರು ಡಾ.ಬಿ.ಆರ್. ಅಂಬೇಡ್ಕರ್ ಅವರಾಗಿದ್ದಾರೆ. ಈ ದೇಶದ ಜಾತಿ ಪದ್ಧತಿ, ಅಸ್ಪೃಶ್ಯತೆ ತೊಲಿಗಿಸಲು ಅವರು ನೀಡಿರುವ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದೆ ಎಂದರು.
ಈ ವೇಳೆ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ.ಹಲಸೆ, ಕುಲಸಚಿವ ಪ್ರೊ.ಕೆ.ಎಲ್.ಎನ್. ಮೂರ್ತಿ, ಪರಿಕ್ಷಾಂಗ ಕುಲಸಚಿವ ಪ್ರೊ. ಪ್ರವೀಣ್, ಪ್ರೊ.ಎನ್. ಲಕ್ಷ್ಮಿ, ಡಾ. ಶಿವಕುಮಾರಸ್ವಾಮಿ, ವ್ಯವಸ್ಥಾಪನ ಮಂಡಳಿ ಸದಸ್ಯ ಬಿ.ಜಿ. ಪಾಟೀಲ್, ಬಾಲಕ ತೇಜಸ್ವಿ ಚಕ್ರವರ್ತಿ ಸೇರಿದಂತೆ ಮೊದಲಾದವರು ಇದ್ದರು.