ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ದಿ. ಸೀತಾರಾಮ್ ಯೆಚೂರಿ ವೇದಿಕೆಯಡಿ ಆಯೋಜಿಸಿದ ಸಿಪಿಐ(ಎಂ)ನ 4ನೇ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ರೈತರು ಎಷ್ಟೇ ಬೆಳೆ ಬೆಳೆದರೂ ಕೈಗೆ ಆದಾಯ ಬಾರದಿದ್ದರೆ ಗ್ರಾಮೀಣ ಪ್ರದೇಶದಲ್ಲಿ ಜೀವನ ನಡೆಸಲು ಸಾಧ್ಯವಿಲ್ಲ. ಇದರ ಬಗ್ಗೆ ನಾವು ಸಂಘಟಿತರಾಗಿ ಧ್ವನಿ ಎತ್ತಬೇಕು. ರೈತರು ಬದುಕಬೇಕಾದರೆ ಮೊದಲು ಕೂಲಿ ಪ್ರಮಾಣ ಹೆಚ್ಚಳವಾಗಬೇಕೆಂದರು.ಬೆಳೆ ವಿಮೆ ಹೆಸರಿನಲ್ಲಿ ಕೇಂದ್ರ ಸರ್ಕಾರ ರೈತರಿಂದ ಹಣ ಸಂಗ್ರಹಿಸಿ ಉದ್ಯಮಿಗಳಿಗೆ ಲಾಭ ಮಾಡಿಕೊಡುವ ಮೂಲಕ ರೈತರ ಎದೆಗೆ ಚೂರಿಯಾಗುವ ಕೆಲಸ ಮಾಡುತ್ತಿದೆ. ರೈತರು ಸಾಮಾನ್ಯವಾಗಿ ಬೆಳೆ ಬೆಳೆಯಲು ಬ್ಯಾಂಕ್ ಗಳಲ್ಲಿ ಮಾಡುವ ಸಾಲಕ್ಕೆ ಕಡ್ಡಾಯವಾಗಿ ವಿಮೆ ಮಾಡಿಸಬೇಕಾಗಿದೆ ಎಂದರು.
ಕೇಂದ್ರ ಸರ್ಕಾರ ಧರ್ಮದ ಹೆಸರಿನಲ್ಲಿ ವಂಚಿಸುವ ಕೆಲಸ ಮಾಡುತ್ತಿದೆ. ವ್ಯವಸ್ಥಿತವಾಗಿ ನಮ್ಮ ಶ್ರಮವನ್ನು ಕದ್ದು ಶ್ರೀಮಂತರಿಗೆ ಮಾರಾಟ ಮಾಡುತ್ತಿರುವ ನೀತಿಗಳ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ಮೂಡಿಸಬೇಕಿದೆ ಎಂದರು.
ರಾಜ್ಯ ಸಮಿತಿ ಸದಸ್ಯ ಎಂ.ಪುಟ್ಟಮಾಧು ಮಾತನಾಡಿ, ಪ್ರಸ್ತುತ ದೇಶಕ್ಕೆ ಪ್ರಾಮಾಣಿಕ, ಭ್ರಷ್ಟಾಚಾರ ರಹಿತ, ಜನಪರ ಆಡಳಿತ ನಡೆಸುವವರ ಅಗತ್ಯವಿದೆ. ಕೇರಳ ರಾಜ್ಯದಲ್ಲಿ ಸಿಪಿಐ(ಎಂ) ಜನಪರ ಆಡಳಿತ ನಡೆಸಿ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಎನ್.ಎಲ್. ಭರತ್ ರಾಜ್, ಸದಸ್ಯ ಜಿ.ರಾಮಕೃಷ್ಣ, ತಾಲೂಕು ಸಮಿತಿ ಸದಸ್ಯೆ ಸರೋಜಮ್ಮ, ಪ್ರಮುಖರಾದ ಯಶವಂತ್, ಟಿ.ಎಚ್.ಆನಂದ್, ಎನ್. ಲಿಂಗರಾಜಮೂರ್ತಿ, ಮಂಜುಳಾ ಇದ್ದರು.