ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಗ್ರಾಮೀಣ ಮಕ್ಕಳಲ್ಲಿ ನಮ್ಮ ಸಂಸ್ಕೃತಿ ಪರಂಪರೆ ಬಗ್ಗೆ ಅಭಿಮಾನ ಮೂಡಿಸಲು ಬಾಲ ದಸರಾವನ್ನು ಆಯೋಜಿಸಲಾಗಿದೆ. ಒಂದು ಮಗು ಒಂದು ಸ್ಪರ್ಧೆಯಲ್ಲಿ ಉಚಿತವಾಗಿ ಭಾಗವಹಿಸಲು ಅವಕಾಶವಿದೆ ಎಂದರು.
ತಾಲೂಕಿನ ಎಲ್ಲಾ ಶಾಲೆಗಳ ಎರಡರಿಂದ ಆರು ವರ್ಷದೊಳಗಿನ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿದೆ. ತಮ್ಮ ಹೆಸರನ್ನು ನೋಂದಣಿಸಿಕೊಳ್ಳಲು ಸೆಪ್ಟೆಂಬರ್ 18 ಕೊನೆ ದಿನ. ಬಾಲ ದಸರಾ ಸ್ಪರ್ಧೆಯಲ್ಲಿ ಶ್ಲೋಕಗಳು, ಕಥೆ ಹೇಳುವುದು, ಜಾನಪದ ಗೀತೆಗಳನ್ನು ಹಾಡುವುದು, ಚಿತ್ರಗಳಿಗೆ ಬಣ್ಣ ತುಂಬುವುದು, ರಂಗೋಲಿ ಮತ್ತು ಹೂವುಗಳನ್ನು ಬಿಡಿಸುವುದು, ಕ್ಲೇ ಮಾಡಲಿಂಗ್ ಮಾಡುವುದು ಸೇರಿದಂತೆ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.ಬೆಳಗ್ಗೆ 9.30ರಿಂದ 12.30 ರವರೆಗೆ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಪುಟಾಣಿ ಮಕ್ಕಳಿಗೆ ಪ್ರಶಸ್ತಿ ಪತ್ರಗಳ ಜೊತೆಗೆ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಗುವುದು ಎಂದರು.
ಪ್ರತಿಯೊಬ್ಬರಿಗೂ ಪೌಷ್ಟಿಕ ಆಹಾರ ಅಗತ್ಯ: ಶಿವಮೂರ್ತಿ
ದೇಹದ ಆರೋಗ್ಯ ಮತ್ತು ಉತ್ತಮ ಕಾರ್ಯ ನಿರ್ವಹಣೆಗೆ ಪೌಷ್ಟಿಕ ಆಹಾರ ಅಗತ್ಯವಾಗಿದೆ ಎಂದು ಗ್ರಾಪಂ ಅಧ್ಯಕ್ಷ ಶಿವಮೂರ್ತಿ ಹೇಳಿದರು.
ಪೌಷ್ಟಿಕ ಆಹಾರ ಶಿಬಿರದ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಅರಿವು ಮೂಡಿಸಿ ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಸಾರ್ವಜನಿಕರಿಗೆ ತಲುಪುವಂತೆ ನೋಡಿಕೊಳ್ಳಿ ಎಂದರು.