ನೇತ್ರಜ್ಯೋತಿ ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

KannadaprabhaNewsNetwork |  
Published : Oct 11, 2026, 03:45 AM IST
09ನೇತ್ರ | Kannada Prabha

ಸಾರಾಂಶ

ಇಲ್ಲಿನ ಪ್ರಸಿದ್ಧ ನೇತ್ರಜ್ಯೋತಿ ಕಾಲೇಜಿನಲ್ಲಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಓರಿಯಂಟೇಷನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಉಡುಪಿ: ಇಲ್ಲಿನ ಪ್ರಸಿದ್ಧ ನೇತ್ರಜ್ಯೋತಿ ಕಾಲೇಜಿನಲ್ಲಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಓರಿಯಂಟೇಷನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಆದರ್ಶ ಆಸ್ಪತ್ರೆಯ ಪ್ರಸಿದ್ಧ ನ್ಯೂರೋ ಸರ್ಜನ್ ಡಾ. ಜಸ್ಪ್ರೀತ್ ಸಿಂಗ್ ದಿಲ್, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಹಾಗೂ ಉತ್ತಮ ಅಭ್ಯಾಸಗಳನ್ನು ಬೆಳೆಸಿಕೊಂಡರೆ ಭವಿಷ್ಯ ಉಜ್ವಲವಾಗುತ್ತದೆ ಎಂದರು.

ಇನ್ನೋರ್ವ ಅತಿಥಿ, ಕಾರ್ಕಳದ ಪ್ರಸಿದ್ಧ ಕ್ರಿಯೇಟಿವ್ ಪಿಯು ಕಾಲೇಜಿನ ಸಂಸ್ಥಾಪಕರಲ್ಲೊಬ್ಬರಾದ ಡಾ. ಗಣನಾಥ್ ಶೆಟ್ಟಿ ಬಿ., ಔಪಚಾರಿಕ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣವನ್ನು ಪಡೆಯುವುದರ ಮೂಲಕ ವ್ಯಕ್ತಿ ಪರಿಪೂರ್ಣತೆಯನ್ನು ಪಡೆಯಲು ಸಾಧ್ಯ. ಪಾಲಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಹೊಂದಾಣಿಕೆ ಅಗತ್ಯ. ತಂದೆ-ತಾಯಿ, ಗುರುಗಳು, ರೈತರು ಹಾಗೂ ಸೈನಿಕರಿಗೆ ಯಾವಾಗಲೂ ಗೌರವ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್, ಸತತ ಪ್ರಯತ್ನದಿಂದ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ತಲುಪಲು ಸಾಧ್ಯ ಎಂದು ಹೇಳುತ್ತಾ, ನೇತ್ರಜ್ಯೋತಿ ಕಾಲೇಜು ನಡೆದು ಬಂದ ಹಾದಿಯ ಬಗ್ಗೆ ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲು, ವಿದ್ಯಾರ್ಥಿಗಳು ಯಾವಾಗಲೂ ಆಶಾವಾದಿಗಳಾಗಿರಬೇಕು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಿರುವ ಎಲ್ಲ ಸೌಕರ್ಯಗಳನ್ನು ನೇತ್ರಜ್ಯೋತಿ ಕಾಲೇಜಿನಲ್ಲಿ ಒದಗಿಸಲಾಗುತ್ತದೆ ಎಂದು ತಿಳಿಸಿದರು.ಉಪನ್ಯಾಸಕಿಯರಾದ ಅಶ್ವಿನಿ ಅವರು ಸ್ವಾಗತಿಸಿದರು. ಶಿವಾನಿ ವಂದಿಸಿದರು. ಶ್ರೀನಿಧಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಸುಮಿತ್ ಕೌರ್ ದಿಲ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ದಕ್ಷ ಬಳಕೆ ಎಲ್ಲರಿಗೂ ಅನಿವಾರ್ಯ: ಅನಂತ ಪದ್ಮನಾಭ
ಪ್ರಜಾಪ್ರಭುತ್ವ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ.ಆಲೂರ