ಜನರಿಗೆ ಮೂಲ ಸೌಕರ್ಯ ಕಲ್ಪಿಸುವುದು ನಮ್ಮ ಕರ್ತವ್ಯ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

KannadaprabhaNewsNetwork |  
Published : Jun 13, 2025, 02:20 AM IST
12ಕೆಎಂಎನ್ ಡಿ13 | Kannada Prabha

ಸಾರಾಂಶ

ಮುಖಂಡರು ಕೂಡ ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ತಾಲೂಕಿನಲ್ಲಿ ಹಲವು ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿಗೆ ಆದ್ಯತೆ ನೀಡಿ ಕ್ಷೇತ್ರದ ಪ್ರಗತಿಗೆ ಶ್ರಮಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಕ್ಷೇತ್ರದ ಜನರಿಗೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಲಾಗುತ್ತಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.ತಾಲೂಕಿನ ಕಿರುಗಾವಲು ಗ್ರಾಮದಲ್ಲಿ 10 ಲಕ್ಷ ರು. ವೆಚ್ಚದಲ್ಲಿ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ- 209ರಿಂದ ತಾಲೂಕಿನ ಅಮೃತೇಶ್ವರನಹಳ್ಳಿ ಗ್ರಾಮಕ್ಕೆ ಹೋಗುವ 80 ಲಕ್ಷ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿ ಮಾತನಾಡಿದರು.

ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಬೇಕಾದ ಅನುದಾನ ಬಿಡುಗಡೆಗೊಳಿಸಿ ಕೆಲಸ ಆರಂಭಿಸಲಾಗಿದೆ. ತ್ವರಿತಗತಿಯಲ್ಲಿ ಗುಣಮಟ್ಟ ಕಾಮಗಾರಿ ನಡೆಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.

ಮುಖಂಡರು ಕೂಡ ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ತಾಲೂಕಿನಲ್ಲಿ ಹಲವು ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿಗೆ ಆದ್ಯತೆ ನೀಡಿ ಕ್ಷೇತ್ರದ ಪ್ರಗತಿಗೆ ಶ್ರಮಿಸಲಾಗುತ್ತಿದೆ ಎಂದರು.

ಇದೇ ವೇಳೆ ಕಿರುಗಾವಲು ಕಾಂಗ್ರೆಸ್ ಮುಖಂಡರಿಂದ ಶಾಸಕರನ್ನು ಅಭಿನಂದಿಸಲಾಯಿತು. ಈ ವೇಳೆ ಜಿಪಂ ಮಾಜಿ ಸದಸ್ಯೆ ಸುಜಾತಾ ಕೆ.ಎಂ.ಪುಟ್ಟು, ಮನ್ಮುಲ್ ನಿರ್ದೇಶಕರಾದ ಆರ್.ಎನ್.ವಿಶ್ವಾಸ್, ಡಿ.ಕೃಷ್ಣೇಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಕಾಂಗ್ರೆಸ್ ಮುಖಂಡರಾದ ಕೆ.ಎಂ.ಬಾಲಚಂದ್ರು(ಬಾಲು), ನರೇಂದ್ರ ಕೆ.ಎಂ ಪುಟ್ಟು, ಅಜ್ಮತ್ ಉಲ್ಲಾ ಖಾನ್, ಬಿ.ಸಿದ್ದರಾಜು, ಸಿದ್ದಯ್ಯ, ಎಚ್.ಕೆ.ಕೃಷ್ಣಮೂರ್ತಿ, ಕೆ.ಎಸ್.ದ್ಯಾಪೇಗೌಡ, ರೋಹಿತ್ ಗೌಡ(ದೀಪು), ಶಿವಮಾದೇಗೌಡ, ಶಶಿರಾಜ್, ಸತೀಶ್, ಮಾದೇಶ್, ಸಿದ್ದರಾಜು ಪಾಲ್ಗೊಂಡಿದ್ದರು.

ಇಂದಿನಿಂದ 27ರವರೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ

ಮಂಡ್ಯ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜೂನ್ 13 ರಿಂದ 27ರವರೆಗೆ ಜಿಲ್ಲೆಯ ವಿವಿಧೆಡೆ ಉದರ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ. ಜೂನ್ 13 ರಂದು ಬೆಳಗ್ಗೆ 10 ಗಂಟೆಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆ, ಜೂ.17ರಂದು ಬೆಳಗ್ಗೆ 10 ಗಂಟೆಗೆ ಮದ್ದೂರು ತಾಲೂಕು ಆಸ್ಪತ್ರೆ, ಜೂ.18 ರಂದು ಬೆಳಗ್ಗೆ 10 ಗಂಟೆಗೆ ಪಾಂಡವಪುರ ಉಪ ವಿಭಾಗ ಆಸ್ಪತ್ರೆಯಲ್ಲಿ, ಜೂ.20 ರಂದು ಬೆಳಗ್ಗೆ 10 ಗಂಟೆಗೆ ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆಯಲ್ಲಿ, ಜೂ. 21 ರಂದು ಬೆಳಗ್ಗೆ 10 ಗಂಟೆಗೆ ಮಂಡ್ಯದ ಮೀಮ್ಸ್ ಆಸ್ಪತ್ರೆಯಲ್ಲಿ, ಜೂ. 24 ರಂದು ಬೆಳಗ್ಗೆ 10 ಗಂಟೆಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ, ಜೂ.27ರಂದು ಬೆಳಗ್ಗೆ 10 ಗಂಟೆಗೆ ಪಾಂಡವಪುರ ಉಪವಿಭಾಗ ಆಸ್ಪತ್ರೆಯಲ್ಲಿ ಹಾಗೂ ಪ್ರತಿ ಮಂಗಳವಾರ ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಗ್ಗೆ 10 ಗಂಟೆಗೆ ಉದರ ಶಸ್ತ್ರ ಚಿಕಿತ್ಸೆ ಶಿಬಿರವನ್ನು ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಕಿ ಲಕ್ಷ್ಮಿ ಶನಿವಾರದೊಳಗೆ ಮಹಿಳೆಯರ ಬ್ಯಾಂಕ್‌ ಖಾತೆಗೆ
ರಾಜಣ್ಣ ಸಿಎಂಗಷ್ಟೇ ಅಲ್ಲ, ನನಗೂ ಪರಮಾಪ್ತ: ಡಿಕೆಶಿ