ನಮ್ಮ ಹಿರಿಯರು ಪುರಾಣ ಕಲಿತದ್ದೇ ಯಕ್ಷಗಾನದಿಂದ: ಅದಮಾರು ಶ್ರೀ

KannadaprabhaNewsNetwork |  
Published : Oct 16, 2025, 02:01 AM IST
15ಸಂತೋಷ್ - ಸ್ತ್ರೀವೇಷಧಾರಿ ಸಂತೋಷ್ ರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಉಡುಪಿ ಪುತ್ತೂರಿನ ಭಗವತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಶ್ರೀ ಭಗವತಿ ಯಕ್ಷ ಕಲಾ ಬಳಗದ ವತಿಯಿಂದ ೧೧ ದಿನಗಳ ‘ಯಕ್ಷ ನವಮಿ ೨೦೨೫’ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ನಮ್ಮ ದೇಶದ ಎಲ್ಲ ಕಲೆಗಳು ಪೌರಾಣಿಕ ಹಿನ್ನೆಲೆಯನ್ನು ಪಡೆದುಕೊಂಡಿವೆ. ನಮ್ಮ ಪುರಾಣದ ಕಥೆಗಳು ಇದಕ್ಕೆ ಉದಾಹರಣೆ. ನಮ್ಮ ಹಿರಿಯರು ಪೌರಾಣಿಕ ಪ್ರಸಂಗಗಳನ್ನು ಕಲಿತಿರುವುದೇ ಈ ಯಕ್ಷಗಾನದಿಂದಾಗಿ. ಹೀಗಾಗಿ ಅಂದು ನರಹರಿ ತೀರ್ಥರಿಂದ ಆರಂಭಗೊಂಡಿದೆ ಎನ್ನಲಾದ ಈ ಯಕ್ಷಗಾನವನ್ನು ಉಳಿಸಿ ಬೆಳೆಸುವ ಆವಶ್ಯಕತೆಯಿದೆ ಎಂದು ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು.ಅವರು ಉಡುಪಿ ಪುತ್ತೂರಿನ ಭಗವತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಶ್ರೀ ಭಗವತಿ ಯಕ್ಷ ಕಲಾ ಬಳಗದ ವತಿಯಿಂದ ಹಮ್ಮಿಕೊಂಡ ೧೧ ದಿನಗಳ ‘ಯಕ್ಷ ನವಮಿ ೨೦೨೫’ ಕಾರ್ಯಕ್ರಮದ ಸಮಾರೋಪದಲ್ಲಿ ಆಶೀರ್ವಚನ ನೀಡಿದರು.ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಮಕ್ಕಳಿಗೆ ಯಕ್ಷಗಾನವನ್ನು ಕಲಿಸಲು ತಂದೆತಾಯಿಗಳು ಮುಂದಾಗಬೇಕು. ಇದರಿಂದ ಮಕ್ಕಳು ನೈತಿಕ ಮೌಲ್ಯಗಳನ್ನು ಬೆಳೆಸಿಕೊಂಡು ಪ್ರಜ್ಞಾವಂತ ನಾಗರಿಕರಾಗುತ್ತಾರೆ. ಅಲ್ಲದೆ ಯಕ್ಷಗಾನವನ್ನು ಕಲಿತ ಮಕ್ಕಳು ಶಿಕ್ಷಣದಲ್ಲೂ ಉತ್ತಮ ಸಾಧನೆ ಮಾಡಿರುವುದನ್ನು ಕಂಡಿದ್ದೇವೆ. ಹೀಗಾಗಿ ಯಕ್ಷಗಾನ ಕಲಿತರೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗುತ್ತದೆ ಎಂಬ ಅಳುಕು ಹೆತ್ತವರಿಗೆ ಬೇಡ ಎಂದರು.ಯಕ್ಷ ಶಿಕ್ಷಣ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ೩,೦೦೦ಕ್ಕೂ ಅಧಿಕ ಮಕ್ಕಳು ಪ್ರತೀವರ್ಷ ಯಕ್ಷಗಾನವನ್ನು ಕಲಿಯುತ್ತಿದ್ದಾರೆ. ಈ ಅಭಿಯಾನದಿಂದ ಭವಿಷ್ಯದಲ್ಲಿ ಉತ್ತಮ ಯಕ್ಷಗಾನ ಕಲಾವಿದರು ಸೃಷ್ಟಿಯಾಗಿ ಉಡುಪಿಯ ಕೀರ್ತಿ ಪತಾಕೆಯನ್ನು ಜಗದಗಲಕ್ಕೆ ಹರಡಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತ ಪಡಿಸಿದರು.ಕಾರ್ಯಕ್ರಮದಲ್ಲಿ ಪ್ರಸಿದ್ಧ ಸ್ತ್ರೀ ವೇಷಧಾರಿ, ಕಲಾವಿದ ಸಂತೋಷ್ ಹಿಲಿಯಾಣ ಇವರಿಗೆ 7ನೇ ವರ್ಷದ ‘ಯಕ್ಷ ಪ್ರದೀಪ್ತರತ್ನ’ ಪ್ರಶಸ್ತಿ, ೧೦ ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿ, ಕರ್ನಾಟಕ ಬ್ಯಾಂಕಿನ ಸ್ಥಳೀಯ ಶಾಖೆಯ ಎಜಿಎಂ ವಾದಿರಾಜ ಭಟ್, ಯುವ ಉದ್ಯಮಿ ನಾಗರಾಜ್ ಎಸ್.ಕೆ. ಉಪಸ್ಥಿತರಿದ್ದರು.ಅಧ್ಯಕ್ಷ ಪ್ರಮೋದ್ ತಂತ್ರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕೋಶಾಧಿಕಾರಿ ಚೈತನ್ಯ ಎಂ.ಜಿ. ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ರಾಹ್ಮಣರು ನಮ್ಮನ್ನು ಗುಲಾಮ ಮಾಡಲು ಹಿಂದು ಧರ್ಮ ಹುಟ್ಟು ಹಾಕಿದ್ರು : ನಿವೃತ್ತ ಜಡ್ಜ್‌
ಇಂದಿನಿಂದ ಕಾವೇರಲಿದೆ ಉತ್ತರ ಕರ್ನಾಟಕದ ಚರ್ಚೆ-3 ದಿನ ವಿಧಾನಮಂಡಲದಲ್ಲಿ ಈ ಬಗ್ಗೆ ಕಲಾಪ